
ಬೆಂಗಳೂರು(ಆ.06): ಗೃಹಲಕ್ಷ್ಮೀ ಯೋಜನೆಯ ಜೂನ್ ತಿಂಗಳ ಹಣ ಬಿಡುಗಡೆ ಪ್ರಕ್ರಿಯೆ ಸೋಮವಾರ ಆರಂಭವಾಗಿದ್ದು, ಎರಡೂರು ದಿನದಲ್ಲಿ ಮೊದಲ ಹಂತದಲ್ಲಿ 26.65 ಲಕ್ಷ ಫಲಾನುಭವಿಗಳಿಗೆ ತಲಾ 2 ಸಾವಿರ ರು. ಪಾವತಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಗಳು ತಿಳಿಸಿವೆ.
ಮೊದಲ ಹಂತದಲ್ಲಿ 533 ಕೋಟಿ ರು. ಪಾವತಿಗೆ ಸೋಮವಾರ ಪ್ರಕ್ರಿಯೆ ಆರಂಭವಾಗಿದ್ದು, ಬುಧವಾರದೊಳಗೆ 26.65 ಲಕ್ಷ ಅರ್ಹ ಫಲಾನುಭವಿಗಳಿಗೆ ಜೂನ್ ತಿಂಗಳ ಹಣ ಪಾವತಿಯಾಗಲಿದೆ. ಇನ್ನುಳಿದ ಫಲಾನುಭವಿಗಳಿಗೆ ಆ.10ರೊಳಗೆ ಜೂನ್ ತಿಂಗಳ ಹಣ ನೇರವಾಗಿ ಖಾತೆಗೆ ಸಂದಾಯವಾಗಲಿದೆ.
ಎರಡ್ಮೂರು ತಿಂಗಳಿಂದ ಹಣ ಬಂದಿಲ್ಲ; ಆತಂಕದಲ್ಲಿ ರಾಜ್ಯದ ಗೃಹಲಕ್ಷ್ಮೀಯರು!
ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಏಪ್ರಿಲ್ ಮತ್ತು ಮೇ ತಿಂಗಳ ಹಣವನ್ನು ಒಮ್ಮೆಗೇ ಪಾವತಿ ಮಾಡಲಾಗಿತ್ತು. ಇದೀಗ ಜೂನ್ ಮತ್ತು ಜುಲೈ ತಿಂಗಳ ಹಣ ಪಾವತಿಗೆ ಬಾಕಿ ಉಳಿದಿದ್ದು, ವಾರಾಂತ್ಯದೊಳಗೆ ಜೂನ್ ತಿಂಗಳ ಹಣ ಪಾವತಿಯಾಗಲಿದೆ ಎಂದು ತಿಳಿದುಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ