ಗೃಹಲಕ್ಷ್ಮಿ ಯೋಜನೆಗೆ 2000 ರೂ. ಸ್ಮಾರ್ಟ್‌ ಕಾರ್ಡ್‌ ವಿತರಣೆ: ಆ.27ಕ್ಕೆ ಬೆಳಗಾವಿಯಲ್ಲಿ ಚಾಲನೆ

By Sathish Kumar KH  |  First Published Aug 10, 2023, 6:14 PM IST

ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ನಾಲ್ಕನೇ ಗ್ಯಾರಂಟಿ ಗೃಹಲಕ್ಷ್ಮಿ ಯೋಜನೆಗೆ ಆ.27ರಂದು ಬೆಳಗಾವಿಯಲ್ಲಿ ಚಾಲನೆ ನೀಡಲಾಗುತ್ತದೆ. ಎಲ್ಲ ಮಹಿಳೆಯರಿಗೂ 2000 ರೂ. ಮಾದರಿಯ ಪಿಂಕ್ ಸ್ಮಾರ್ಟ್‌ ಕಾರ್ಡ್‌ ಕೊಡಲಾಗುತ್ತದೆ.


ಬೆಂಗಳೂರು (ಆ.10): ರಾಜ್ಯ ಕಾಂಗ್ರೆಸ್‌ನ ನಾಲ್ಕನೇ ಗ್ಯಾರಂಟಿಯಾದ ಹಾಗೂ ಕರ್ನಾಟಕ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ (ಪ್ರತಿ ಮನೆ ಯಜಮಾನಿಗೆ ಮಾಸಿಕ 2000 ರೂ. ಆರ್ಥಿಕ ನೆರವು) ಯೋಜನೆಯನ್ನು ಆ.27ರಂದು ಜಾರಿಗೆ ತರಲು ದಿನಾಂಕ ನಿಗದಿ ಮಾಡಲಾಗಿದೆ. ಎಲ್ಲ ಫಲಾನುಭವಿ ಮಹಿಳೆಯರಿಗೆ ಸ್ಮಾರ್ಟ್‌ ಕಾರ್ಡ್‌ ಕೊಡಲಾಗುತ್ತದೆ.

ಬೆಂಗಳೂರಿನ ಆಡಳಿತ ಸೌಧ ವಿಕಾಸಸೌಧದಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜಂಟಿ ಸಭೆ ನಡೆಸಿ ದಿನಾಂಕ ನಗದಿಪಡಿಸಿದರು. ಆ.20ಕ್ಕೆ ಇದ್ದ ಗೃಹಲಕ್ಷ್ಮಿ ಯೋಜನೆ ಉದ್ಘಾಟನಾ ದಿನಾಂಕವನ್ನು ಈಗ ಆ.27ಕ್ಕೆ ನಿಗದಿಪಡಿಸಲಾಗಿದೆ. ಇನ್ನು ರಾಜ್ಯದ ಎಲ್ಲ ಜಿಲ್ಲೆ ವಿಡಿಯೋ ಕಾನ್ಫರೆನ್ಸ್ ಮೂಲಕವೂ ಸಭೆಯನ್ನು ನಡೆಸಲಾಯಿತು. ಈ ಸಭೆಯಲ್ಲಿ ಭಾಗಿಯಾಗಿರುವ ಸಚಿವ ಕೃಷ್ಣ ಬೈರೇಗೌಡ, ಸಚಿವ ರಹೀಂ ಖಾನ್‌ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು. 
ಈ ವೇಳೆ ರಾಜ್ಯದ ಎಲ್ಲಾ ಜಿಲ್ಲೆಗಳು ಹಾಗೂ ತಾಲೂಕು ಮಟ್ಟದಲ್ಲಿ ಗೃಹಲಕ್ಷ್ಮಿ ಯೋಜನೆ ಒಂದೇ ಅವಧಿಗೆ ಉದ್ಘಾಟನೆ ಮಾಡಲು ಯೋಜನೆ ರೂಪಿಸಲಾಯಿತು. ಹೀಗಾಗಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಜೊತೆ ಸಮಾಲೋಚನೆ ಮಾಡಲಾಯಿತು. 

Tap to resize

Latest Videos

ಟೊಮೆಟೊ ಬೆಲೆ ತಗ್ಗಿಸಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಾಸ್ಟರ್‌ ಪ್ಲ್ಯಾನ್‌

ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಗೆ ರಾಹುಲ್‌ಗಾಂಧಿ ಆಗಮನ: ಇನ್ನು ಈ ಮೊದಲು ಕಾಂಗ್ರೆಸ್‌ನ ನಾಲ್ಕನೇ ಗ್ಯಾರಂಟಿ ಗೃಹಲಕ್ಷ್ಮಿ ಯೋಜನೆಯನ್ನು ಆಗಸ್ಟ್ 20ರಂದು ಉದ್ಘಾಟನೆ ಮಾಡಲು ಯೋಜನೆ ರೂಪಿಸಲಾಗಿತ್ತು. ಆದರೆ, ಕಾಂಗ್ರೆಸ್‌ ವರಿಷ್ಠ ರಾಹುಲ್‌ಗಾಂಧಿ ಹಾಗೂ ಅಖಿಲ ಭಾರತ ಕಾಂಗ್ರೆಸ್‌ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ರಾಜ್ಯಕ್ಕೆ ಬರಲಿದ್ದಾರೆ. ಈ ಹಿನ್ನೆಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯ ಉದ್ಘಾಟನಾ ದಿನಾಂಕವನ್ನು ಆ.27ಕ್ಕೆ ಮುಂದೂಡಿಕೆ ಮಾಡಲಾಗಿದೆ. ಇನ್ನು ಕಾಂಗ್ರೆಸ್‌ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗಲಿದ್ದಾರೆ. 

ಮಹಿಳೆಯರಿಗೆ 2000 ರೂ, ಸ್ಮಾರ್ಟ್‌ ಕಾರ್ಡ್‌ ವಿತರಣೆ:  ಇನ್ನು ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲು ನಿರ್ಧರಿಸಲಾಗಿದೆ. ಯೋಜನೆಯ ಉದ್ಘಾಟನೆ ದಿನ ಸ್ಮಾರ್ಟ್ ಕಾರ್ಡ್ ಬಿಡುಗಡೆ ಮಾಡಲಾಗುತ್ತದೆ ಎಂದು ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಮಾರ್ಟ್ ಬಗ್ಗೆ ಮಾಹಿತಿ ನೀಡಿದ‌ರು. ಪಿಂಕ್ ಬಣ್ಣದ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಗುತ್ತದೆ. ಸ್ಮಾರ್ಟ್ ಕಾರ್ಡ್ ನಲ್ಲಿ ಫಲಾನುಭವಿಗಳ ವಿವರ ನಮೂದು ಮಾಡಲಾಗುತ್ತದೆ. ಜೊತೆಗೆ, ಸಿಎಂ ಸಿದ್ದರಾಮಯ್ಯ,  ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರ ಭಾವಚಿತ್ರ ಇರಲಿದೆ. ಕಾರ್ಡ್‌ ಮೇಲೆ ₹ 2000 ಎಂದು ಸ್ಮಾರ್ಟ್ ಕಾರ್ಡ್ ನಲ್ಲಿ ನಮೂದಿಸಲಾಗಿರುತ್ತದೆ ಎಂದು ತಿಳಿಸಿದರು. 

ಗೃಹಲಕ್ಷ್ಮಿ ಯೋಜನೆ 1 ಕೋಟಿ ದಾಟಿದ ನೋಂದಣಿ: ನಗರವಾಸಿಗಳ ಹಿಂದಿಕ್ಕಿದ ಹಳ್ಳಿ ಮಹಿಳೆಯರು..!

ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಕಾರ್ಯಕ್ರಮ ಆಯೋಜನೆ: ರಾಜ್ಯಮಟ್ಟದ ಕಾರ್ಯಕ್ರಮವನ್ನು ಬೆಳಗಾವಿಯಲ್ಲಿ ಆಯೋಜನೆ ಮಾಡಿದರೂ ಎಲ್ಲ ಜಿಲ್ಲೆಗಳು, ತಾಲೂಕುಗಳು, ಪುರಸಭೆ, ನಗರಸಭೆ ಹಾಗೂ ಪಂಚಾಯಿತಿ ಮಟ್ಟದಲ್ಲಿಯೂ ಕಾರ್ಯಕ್ರಮವನ್ನು ಆಯೋಜನೆ ಮಾಡುವಂತೆ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೂಚನೆ ನೀಡಿದ್ದರು. ಪ್ರತಿ ಗ್ರಾಮ ಪಂಚಾಯತಿಗೆ ಒಬ್ಬ ತಾಲ್ಲೂಕು ಮಟ್ಟದ ನೋಡಲ್ ಅಧಿಕಾರಿ ನೇಮಿಸಬೇಕು. ಜಿಲ್ಲೆ, ತಾಲ್ಲೂಕು, ಪುರಸಭೆ, ನಗರಸಭೆ, ಪಂಚಾಯಿತಿ ಮಟ್ಟದಲ್ಲಿ ಕಾರ್ಯಕ್ರಮಕ್ಕೆ ಯೋಜನೆ ರೂಪಿಸಬೇಕು. ಇನ್ನು ಕಾರ್ಯಕ್ರಮ ಆಯೋಜನೆಗೆ ಈಗಲೇ ಸಮುದಾಯ ಭವನಗಳು, ಕಲ್ಯಾಣಮಂಟಪ, ಖಾಸಗಿ ಮೈದಾನಗಳನ್ನು ಬುಕಿಂಗ್‌ ಮಾಡುವಂತೆಯೂ ಸೂಚನೆ ನಿಡಿದರು. 

click me!