
- ಸ್ವಸ್ತಿಕ್ ಕನ್ಯಾಡಿ
ಬೆಂಗಳೂರು (ಜು.27) : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಜುಲೈ ತಿಂಗಳ ಉಚಿತ ವಿದ್ಯುತ್ ಯೋಜನೆ ಪಡೆಯಲು ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ. ನೀವು ಇಂದು ಅಂದರೆ ಜುಲೈ 27ರಂದು ಅರ್ಜಿ ಸಲ್ಲಿಸಿದ್ದೀರಿ ಎಂದಾದರೆ ನಿಮಗೆ ಆಗಸ್ಟ್ ತಿಂಗಳಲ್ಲಿ ಬಿಲ್ ಬರೋದಿಲ್ಲ.
ಜುಲೈ 27ರ ನಂತರ ಅರ್ಜಿ ಸಲ್ಲಿಸಿದರೆ ಗೃಹಜ್ಯೋತಿ ಯೋಜನೆ(Gruhajyoti scheme)ಯ ಪ್ರಯೋಜನ ಸಿಗೋಲ್ವಾ?
ಒಂದು ವೇಳೆ ಜುಲೈ 27ರ ನಂತರ ಅರ್ಜಿ ಸಲ್ಲಿಸಿದವರು ಗೃಹಜ್ಯೋತಿ ಯೋಜನೆಗೆ ಅರ್ಹರಾಗೋದಿಲ್ವಾ? ಖಂಡಿತಾ ಇಲ್ಲ. ಜುಲೈ 27ರ ನಂತರ ಅರ್ಜಿ ಸಲ್ಲಿಸಿದವರು ಜುಲೈ ತಿಂಗಳಲ್ಲಿ ಉಚಿತವಾಗಿ ವಿದ್ಯುತ್ ಪಡೆಯಲು ಅರ್ಹರಾಗುವುದಿಲ್ಲವಷ್ಟೆ. ನಂತರ ಅರ್ಜಿ ಸಲ್ಲಿಸಿದವರು ಆಗಸ್ಟ್ ತಿಂಗಳ ಯೋಜನೆಗೆ ಅರ್ಹರಾಗುತ್ತಾರೆ. ಹಾಗೂ ಎಂದಿನಂತೆ ಆಗಸ್ಟ್ ತಿಂಗಳಲ್ಲಿ ವಿದ್ಯುತ್ ಬಿಲ್ ಕಟ್ಟಬೇಕಾಗುತ್ತದೆ.
Congress guarantee: ಗೃಹಜ್ಯೋತಿಗೆ ನೀರಸ ಪ್ರತಿಕ್ರಿಯೆ; 1 ಕೋಟಿಗೂ ಅಧಿಕ ಜನರು ಅರ್ಜಿ ಸಲ್ಲಿಸಿಲ್ಲ!
ಈಗಾಗಲೇ ಒಂದು ಕೋಟಿಗೂ ಅಧಿಕ ಜನ ಗೃಹಜ್ಯೋತಿಗೆ ಅರ್ಜಿ ಸಲ್ಲಿಸಲು ಬಾಕಿ ಉಳಿದಿದ್ದು ಅರ್ಜಿ ಸಲ್ಲಿಸದ ಅನೇಕರನ್ನು ಅರ್ಜಿ ಸಲ್ಲಿಸುವಂತೆ ಇಂಧನ ಇಲಾಖೆ ಮನವಿ ಮಾಡಿದೆ. ಈ ಹಿನ್ನಲೆಯಲ್ಲಿ ಆಗಸ್ಟ್ ತಿಂಗಳಿನಿಂದ 2ತಿಂಗಳವರೆಗೆ ವಿದ್ಯುತ್ ಅದಾಲತ್ ನಡೆಸುವ ಮೂಲಕ ಅರಿವು ಮೂಡಿಸಲು ಮುಂದಾಗಿದೆ.
ಈಗಾಗಲೇ ಅನೇಕರಿಗೆ ಅರ್ಜಿ ಸಲ್ಲಿಸಲು ತೊಂದರೆ ಉಂಟಾಗಿದ್ದು ಅಂತಹ ಅರ್ಜಿಗಳನ್ನು ಮಾನ್ಯವೆಂದು ಪರಿಗಣಿಸಿ ಯೋಜನೆಯ ಪ್ರಯೋಜನವನ್ನು ಒದಗಿಸಲು ಇಲಾಖೆ ಮುಂದಾಗಿದೆ.
ಆಗಸ್ಟ್ ತಿಂಗಳ ಉಚಿತ ಬಿಲ್ ಪ್ರಯೋಜನ ಪಡೆಯಲು https://sevasindhugs.karnataka.gov.in ಲಿಂಕ್ ಬಳಸಿ ನೋಂದಾಯಿಸಲು ಮನವಿ ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಮೀಪದ ವಿದ್ಯುತ್ ಕಚೇರಿಯನ್ನು ಅಥವಾ 24×7 ಸಹಾಯವಾಣಿ ಸಂಖ್ಯೆ 1912ಗೆ ಕರೆ ಮಾಡುವಂತೆ ತಿಳಿಸಲಾಗಿದೆ.
ಗೃಹಜ್ಯೋತಿ ಯೋಜನೆ: ಒಂದು ಬಲ್ಬ್ ಇರುವ ಮನೆಗಳಿಗೆ 23 ಸಾವಿರ ರೂ. ವಿದ್ಯುತ್ ಬಿಲ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ