
ಬೆಂಗಳೂರು (ಜು.24): ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಇಂದಿನಿಂದ ಪುನಃ ಆರಂಭವಾಗಿದೆ.
ಸರ್ವರ್ ಸಮಸ್ಯೆ, ತಾಂತ್ರಿಕ ಕಾರಣಗಳಿಂದ ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ನಿನ್ನೆ(ಜು.23) ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಸದ್ಯ ಸಮಸ್ಯೆ ಬಗೆಹರಿದಿದ್ದು ಇಂದಿನಿಂದ ಮನೆ ಯಜಮಾನತಿಯರು ಅರ್ಜಿ ಸಲ್ಲಿಸಬಹುದಾಗಿದೆ.
ಇಂದು ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಕೆ ಸಾಧ್ಯತೆ:
ಜು.23ರಂದು ಸರ್ವರ್ ತೊಂದರೆಯಿಂದ ರಾಜ್ಯಾದ್ಯಂತ ಮಹಿಳೆಯರು ಅರ್ಜಿ ಸಲ್ಲಿಸಲಾಗದೆ ವಾಪಸ್ ತೆರಳಿದ್ದರು. ಇಂದು ಪುನಃ ಆರಂಭವಾಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಕೆಯಾಗುವ ಸಾಧ್ಯತೆ ಇದೆ. ಮನೆಯ ಯಜಮಾನಿಯರಿಗೆ 2,000 ರೂ. ನೀಡುವ ಗೃಹಲಕ್ಷ್ಮೀ ಯೋಜನೆ(Gruhalakshmi scheme) ಇದಾಗಿದ್ದು, ಇದುವರೆಗೂ 22,90,782 ಮಹಿಳೆಯರಿಂದ ಅರ್ಜಿ ಸಲ್ಲಿಕೆಯಾಗಿದೆ. ಮೂರನೇ ದಿನವಾದ ಶನಿವಾರ ಬರೋಬ್ಬರಿ 14,16,462 ಮಹಿಳೆಯರು ನೋಂದಣಿ ಮಾಡಿಸಿದ್ದರು.
ಅನ್ನಭಾಗ್ಯಕ್ಕೆ ಇಂದಿಗೆ 14ದಿನ; 78 ಲಕ್ಷ ಬಿಪಿಎಲ್ ಫಲಾನುಭವಿಗಳಿಗೆ 456 ಕೋಟಿ ರೂ. ಜಮಾ
ಮೊದಲ ದಿನ ಕೇವಲ 60 ಸಾವಿರ ಮಂದಿ ಮಾತ್ರ ಅರ್ಜಿ ಸಲ್ಲಿಸಿದ್ದರು. ಎರಡನೇ ದಿನವಾದ ಶುಕ್ರವಾರ 7.77 ಲಕ್ಷ ಮಹಿಳೆಯರು ನೋಂದಣಿ ಮಾಡಿಸಿದ್ದಾರೆ. ಮೊದಲ ಎರಡು ದಿನಗಳಿಗೆ ಹೋಲಿಸಿದರೆ ನೋಂದಣಿ ದುಪ್ಪಟ್ಟು. ಮೂರು ದಿನದಲ್ಲಿ ಒಟ್ಟಾರೆ 22.9 ಲಕ್ಷ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿದ ಮಹಿಳೆಯರು. ಇಂದು ತಾಂತ್ರಿಕ ಸಮಸ್ಯೆ ನಿವಾರಣೆಯಾಗಿರುವ ಹಿನ್ನೆಲೆ ಇಂದು ಹೆಚ್ಚು ನೋಂದಣಿಯಾಗುವ ಸಾಧ್ಯತೆಯಿದೆ.
ಪ್ರತಿ ಫಲಾನುಭವಿಯ ನೊಂದಣಿಗೆ ನಿಗದಿ ಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು 1902 ಗೆ ಕಾಲ್ ಮಾಡಬಹುದು ಅಥವಾ 8147500500 ನಂಬರಗೆ ಎಸ್‍ಎಂಎಸ್ ಮೂಲಕ ಸಂದೇಶ ಕಳುಹಿಸಬಹುದು. ಸರ್ವರ್ ಸರಿಯಾಗಿದ್ರೆ ಪ್ರತಿ ನೋಂದಣಿ ಪ್ರಕ್ರಿಯೆ 3ರಿಂದ 5 ನಿಮಿಷದೊಳಗೆ ಒಳಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ಸರ್ವರ್ ಸಮಸ್ಯೆ: ಇಂದು ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ತಾತ್ಕಾಲಿಕ ಸ್ಥಗಿತ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ