ಗ್ಯಾರಂಟಿ ಯೋಜನೆ ಯಶಸ್ಸಿಗೆ ಹೆದರಿ ಸಿಲಿಂಡರ್ ಬೆಲೆ ಇಳಿಸಿದ ಕೇಂದ್ರ : ಮಾಜಿ ಸಚಿವ ಆಂಜನೇಯ

Published : Aug 30, 2023, 06:29 PM ISTUpdated : Aug 30, 2023, 06:31 PM IST
ಗ್ಯಾರಂಟಿ ಯೋಜನೆ ಯಶಸ್ಸಿಗೆ ಹೆದರಿ ಸಿಲಿಂಡರ್ ಬೆಲೆ ಇಳಿಸಿದ ಕೇಂದ್ರ : ಮಾಜಿ ಸಚಿವ ಆಂಜನೇಯ

ಸಾರಾಂಶ

ಲೋಕಸಭೆ ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳಲಿವೆ ಎಂಬುದು ಜನಪರ ಯೋಜನೆಗಳನ್ನು ಸಹಿಸಿಕೊಳ್ಳಲು ಆಗದವರ ಅಪಪ್ರಚಾರ ಇದಕ್ಕೆ ಕಿವಿಗೊಡಬೇಡಿ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.

ವರದಿ: ಕಿರಣ್ಎಲ್ ತೊಡರನಾಳ್ ಏಷ್ಯಾನೆಟ್ ಸುವರ್ಣ ನ್ಯೂಸ್

ಚಿತ್ರದುರ್ಗ (ಆ.30) : ಲೋಕಸಭೆ ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳಲಿವೆ ಎಂಬುದು ಜನಪರ ಯೋಜನೆಗಳನ್ನು ಸಹಿಸಿಕೊಳ್ಳಲು ಆಗದವರ ಅಪಪ್ರಚಾರ ಇದಕ್ಕೆ ಕಿವಿಗೊಡಬೇಡಿ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.

ಹೊಳಲ್ಕೆರೆ ತಾಲೂಕಿನ ಎಚ್.ಡಿ.ಪುರ ಗ್ರಾಮ ಪಂಚಾಯಿತಿ ಕೇಂದ್ರದಲ್ಲಿ ಮಂಗಳವಾರ ಆಯೋಜಿಸಿದ್ದ ಗೃಹಲಕ್ಷ್ಮೀ ಯೋಜನೆ ನೇರ ಪ್ರಸಾರ ವೀಕ್ಷಣೆ ಹಾಗೂ ಯೋಜನೆ ಜಾರಿ ಕಾರ್ಯಕ್ರಮಕ್ಕೆ ಮಹಿಳೆಯರ ಕೈಯಿಂದಲೇ ಚಾಲನೆ ಕೊಡಿಸಿದ ಬಳಿಕ ಮಾತನಾಡಿದ ಅವರು, ನಮ್ಮ ಕಾಂಗ್ರೆಸ್ ಸರ್ಕಾರ ಅಸ್ಥಿತ್ವದಲ್ಲಿ ಇರುವವರೆಗೂ ಐದು ಗ್ಯಾರಂಟಿ ಯೋಜನೆಗಳು(Congress guarantee scheme) ಜಾರಿಯಲ್ಲಿರುತ್ತವೆ ಎಂದರು. 

ಸೆಪ್ಟೆಂಬರ್ ಮೊದಲ ವಾರದಲ್ಲಿ ಬರ ಘೋಷಣೆ ತೀರ್ಮಾನ: ಕೃಷಿ ಸಚಿವ ಚಲುವರಾಯಸ್ವಾಮಿ

ಚುನಾವಣೆಗೂ ಮುಂಚೆ ಐದು ಗ್ಯಾರಂಟಿ ಯೋಜನೆಗಳು ಜಾರಿ ಅಸಾಧ್ಯ, ಇವೆಲ್ಲವೂ ಸುಳ್ಳು ಎಂದು ಹೇಳಿದ್ದರು. ಬಳಿಕ ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬಂದು ಮೊದಲ ಸಚಿವ ಸಂಪುಟದಲ್ಲಿಯೇ ಎಲ್ಲ ಯೋಜನೆಗಳ ಜಾರಿಗೆ ಒಪ್ಪಿಗೆ ಸೂಚಿಸಿ, ಒಂದೊಂದನ್ನು ಜಾರಿಗೊಳಿಸುತ್ತಿದ್ದಂತೆ, ರಾಜ್ಯ ದಿವಾಳಿ ಆಗಲಿದೆ ಎಂದು ಸುಳ್ಳು ಹಬ್ಬಿಸಿದರು. ಯೋಜನೆಗಳು ಜನಪ್ರಿಯತೆ ಪಡೆಯುತ್ತಿದ್ದಂತೆ ಈಗ ಮತ್ತೊಂದು ಸುಳ್ಳು ಹರಡುತ್ತಿದ್ದಾರೆ ಎಂದು ದೂರಿದರು. 

ಸ್ತ್ರೀಶಕ್ತಿ ಯೋಜನೆ ಜಾರಿಗೊಳ್ಳುತ್ತಿದಂತೆ ಸಾರಿಗೆ ನಿಗಮ ಆರ್ಥಿಕವಾಗಿ ಬಲವರ್ಧನೆಗೊಳ್ಳುತ್ತಿದೆ. ಮನೆ ದೇವರು, ಒಡಹುಟ್ಟಿದವರು, ಸಂಬಂಧಿಕರ ಮನೆಗೆ ಹೋಗಲು ಕೈಯಲ್ಲಿ ದುಡ್ಡಿಲ್ಲದವರು ಸಂಭ್ರಮದಿಂದ ಪ್ರಯಾಣ ಮಾಡುತ್ತಿದ್ದಾರೆ. ಆದರೆ ಜನರಲ್ಲಿ ಗೊಂದಲ ಉಂಟು ಮಾಡಲು ಮತ್ತು ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ನೂಕುನುಗ್ಗಲು ಉಂಟಾಗಿ ಅವಘಡ ಸಂಭವಿಸಲಿ ಎಂಬ ಕೆಟ್ಟ ದೃಷ್ಟಿಯಿಂದ ಒಂದು ವಾರದಲ್ಲಿ ಉಚಿತ ಬಸ್ ಪ್ರಯಾಣ ಯೋಜನೆ ರದ್ದು ಆಗಲಿದೆ ಎಂದು ಸುಳ್ಳು ಸುದ್ದಿ ಹರಡಿದರು. ಆದರೂ ಮಹಿಳೆಯರು ನಂಬಲಿಲ್ಲ. ಅದೇ ರೀತಿ ಈಗಲೂ ಅವರ ಯಾವುದೇ ಸುಳ್ಳು ಮಾತುಗಳಿಗೆ ನೀವು ಕಿವಿಗೊಡದಿರಿ ಎಂದು ಕಿವಿಮಾತು ಹೇಳಿದರು. 

ಜನರ ಬದುಕು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಇದರಿಂದ ಅವರನ್ನು ಪಾರು ಮಾಡಲು ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ್ದು ವಿದ್ಯಾನಿಧಿ-ಯುವನಿಧಿ ಯೋಜನೆಯೂ ಶೀಘ್ರ ಜಾರಿ ಆಗಲಿದೆ. ಈ ಮೂಲಕ ನಿರುದ್ಯೋಗ ಯುವ ಪೀಳಿಗೆಯಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಲಾಗುವುದು ಎಂದು ಹೇಳಿದರು.

ಮಹಿಳೆಯರ ಖಾತೆಗೆ ಜಮಾ ಆಗುವ 2 ಸಾವಿರ ರೂಪಾಯಿ ಹಣವನ್ನು ಮಕ್ಕಳ ಶಿಕ್ಷಣಕ್ಕೆ ವೆಚ್ಚ ಮಾಡಲು ಮೊದಲ ಆದ್ಯತೆ ನೀಡಬೇಕು. ಸಿಲಿಂಡರ್ ಸೇರಿ ಅಗತ್ಯ ವಸ್ತುಗಳ ಖರೀದಿ ಜತೆಗೆ ಸಣ್ಣದಾಗಿ ಉಳಿತಾಯ ಮಾಡಲು ಚಿಂತನೆ ನಡೆಸಬೇಕು ಎಂದರು. ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಇರದಿದ್ದರೂ ಪ್ರೌಢಶಾಲೆ ಮಕ್ಕಳಿಗೆ ಮೊಟ್ಟೆ ವಿತರಣೆ ಹೀಗೆ ಅನೇಕ ಜೀವಪರ ಯೋಜನೆಗಳನ್ನು ಸಿದ್ದರಾಮಯ್ಯ ಸರ್ಕಾರ(Siddaramaiah government) ಅನುಷ್ಠಾನಕ್ಕೆ ತರುತ್ತಿದೆ. ಜನರ ಕೈಯಲ್ಲಿ ದುಡ್ಡು ಇದ್ದರೆ ಮಾತ್ರ ದೇಶದ ಬಲವರ್ಧನೆ ಸಾಧ್ಯ ಎಂಬುದು ಕಾಂಗ್ರೆಸ್ ಪಕ್ಷದ ಸಿದ್ಧಾಂತ. ಗ್ಯಾರಂಟಿ ಯೋಜನೆಗಳ ಜಾರಿಯಿಂದ ಸಣ್ಣಪುಟ್ಟ ವ್ಯಾಪಾರಸ್ಥರು, ಕೈಗಾರಿಕೆಗಳು ಜೀವ ಪಡೆದುಕೊಳ್ಳುತ್ತಿವೆ. ಸ್ವಯಂ ಉದ್ಯೋಗ ಮೂಲಕ ನಿರುದ್ಯೋಗ ಸಮಸ್ಯೆ ನಿವಾರಣೆ ಆಗಲಿದೆ. ಆರೋಗ್ಯ, ಶಿಕ್ಷಣ ಕ್ಷೇತ್ರ ಬಲಿಷ್ಠಗೊಳ್ಳಲಿದೆ. ಆರ್ಥಿಕ ಚಿಂತನೆ ವಿಷಯದಲ್ಲಿ ಜ್ಞಾನ ಹೊಂದಿಲ್ಲದವರು, ಉಳ್ಳವರ ಪರ ಇರುವವರು ಇಂತಹ ಜೀವಪರ ಯೋಜನೆಗಳನ್ನು ಸಹಿಸುವುದಿಲ್ಲ ಎಂದರು.

 

ಚಿತ್ರದುರ್ಗ ಮೆಡಿಕಲ್ ಕಾಲೇಜು ಆರಂಭಕ್ಕೆ ಕಾಂಗ್ರೆಸ್ ಸರ್ಕಾರವೇ ಬರಬೇಕಾಯಿತು!

ಸಿಲಿಂಡರ್ ಬೆಲೆ ಇಳಿಕೆ ಗ್ಯಾರಂಟಿ ಯೋಜನೆ ಎಫೆಕ್ಟ್: ಸುಳ್ಳೇ ದೇವರು ಎಂದು ನಂಬಿರುವ ಕೆಲ ಪಕ್ಷದವರು ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಒಂದೊಂದಾಗಿ ಜಾರಿಗೊಳಿಸುತ್ತಿರುವ ಗ್ಯಾರಂಟಿ ಯೋಜನೆಗಳಿಂದ ಭೀತಿಗೆ ಒಳಗಾಗಿದ್ದಾರೆ ಎಂದು ವ್ಯಂಗ್ಯವಾಡಿದ ಆಂಜನೇಯ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಜನಪ್ರೀಯತೆಗೆ ಹೆದರಿ ಕೇಂದ್ರದ ಬಿಜೆಪಿ ಸರ್ಕಾರ(BJP government) ಮೊದಲ ಬಾರಿಗೆ ಸಿಲಿಂಡರ್ ಬೆಲೆಯನ್ನು 200 ರೂಪಾಯಿಗೆ ಇಳಿಸಿದೆ ಎಂದು ಹೇಳಿದರು ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮನಮೋಹನ್ ಸಿಂಗ್ ಸರ್ಕಾರ ಇದ್ದಾಗ ನೀಡುತ್ತಿದ್ದಂತೆ ಸಿಲಿಂಡರ್ ಬೆಲೆಯನ್ನು 400 ರೂಪಾಯಿಗೆ ಇಳಿಸಲಾಗುವುದು. ಜತೆಗೆ ದೇಶದ ಎಲ್ಲ ರಾಜ್ಯದಲ್ಲೂ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ಬದ್ಧತೆ ಪ್ರದರ್ಶಿಸಲಾಗುವುದು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ