
ಮೈಸೂರು (ನ.17): ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಐದು ಗ್ಯಾರಂಟಿಗಳಲ್ಲಿ ಅತ್ಯಂತ ಮುಖ್ಯವಾದ ಮನೆಯ ಯಜಮಾನತಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆಗೆ ಮೈಸೂರಿನಲ್ಲಿ ಚಾಲನೆ ನೀಡಲಾಗಿತ್ತು. ಈ ವೇಳೆ ನಾಡದೇವತೆ ಚಾಮುಂಡೇಶ್ವರಿಗೆ 2000 ರೂ. ಅರ್ಪಿಸಲಾಗಿತ್ತು. ಇದೀಗ ರಾಜ್ಯ ಸರ್ಕಾರ ಮಹತ್ವದ ಗೃಹಲಕ್ಷ್ಮೀ ಯೋಜನೆಯನ್ನು ಚಾಮುಂಡೇಶ್ವರಿಗೆ ಅರ್ಪಿಸಿದ್ದು, ಪ್ರತಿ ತಿಂಗಳು ದೇವಸ್ಥಾನಕ್ಕೆ 2 ಸಾವಿರ ರೂಪಾಯಿ ನೀಡಲು ನಿರ್ಧರಿಸಿದೆ.
ಚಾಮುಂಡೇಶ್ವರಿ ದೇವಸ್ಥಾನಕ್ಕೆ ಪ್ರತಿ ತಿಂಗಳು ಗೃಹಲಕ್ಷ್ಮೀ ಯೋಜನೆಯ ಹಣ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಎಂಎಲ್ಸಿ ದಿನೇಶ್ ಗೂಳಿಗೌಡ ಅವರು ಪತ್ರ ಬರೆದಿದ್ದು, ಕಾಂಗ್ರೆಸ್ ಸರ್ಕಾರ ಅದಕ್ಕೆ ಅಸ್ತು ಎಂದಿದೆ.
ಮತದಾನಕ್ಕೆ ಒಂದು ದಿನ ಇರುವಾಗಲೇ ನಾಡ ದೇವತೆಗೆ ಕಾಂಗ್ರೆಸ್ ಜೋಡೆತ್ತುಗಳ ವಿಶೇಷ ಪ್ರಾರ್ಥನೆ
ದಿನೇಶ್ ಗೂಳಿಗೌಡ ಪತ್ರಕ್ಕೆ ಕೂಡಲೇ ಸ್ಪಂದಿಸಿದ ಡಿಸಿಎಂ ಡಿಕೆ ಶಿವಕುಮಾರ್(Dk Shivakumar) ಅವರು, ಪ್ರತಿ ತಿಂಗಳು ನಾಡದೇವತೆ ತಾಯಿ ಚಾಮುಂಡೇಶ್ವರಿ ದೇಗುಲಕ್ಕೆ 2 ಸಾವಿರ ಅರ್ಪಿಸಲು ಕ್ರಮ ವಹಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್(Lakshmi hebbalkar) ಅವರಿಗೆ ಸೂಚನೆ ನೀಡಿದ್ದಾರೆ.
ರಾಜ್ಯ ಸರ್ಕಾರ ಜಾರಿಗೆ ತಂದ ಗೃಹಲಕ್ಷ್ಮೀ ಯೋಜನೆ ಜನರಿಗೆ ಅತ್ಯಂತ ಉಪಕಾರಿಯಾಗಿದೆ. ಚುನಾವಣೆಗೂ ಪೂರ್ವ ಕಾಂಗ್ರೆಸ್ ಪಕ್ಷದ ವತಿಯಿಂದ ಮೈಸೂರಿನ ನಾಡದೇವತೆ ತಾಯಿ ಚಾಮುಂಡೇಶ್ವರಿ ಸನ್ನಿಧಿಗೆ ತೆರಳಿ ಪಕ್ಷದ ಐದು ಗ್ಯಾರಂಟಿ ಕಾರ್ಡ್ ಅನ್ನು ಇಟ್ಟು ದೇವಿಯ ಬಳಿ ಶಕ್ತಿ ಕೊಡು ಎಂದು ಕೋರಿಕೆಯನ್ನಿಡಲಾಗಿತ್ತು. ಆ ಸಂದರ್ಭದಲ್ಲಿ ಹರಕೆಯನ್ನು ನಾಡದೇವತೆ ಬಳಿ ಮಾಡಿಕೊಳ್ಳಲಾಗಿತ್ತು. ಪಕ್ಷ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಈಡೇರಿಸುವ ವಾಗ್ದಾನವನ್ನು ಮಾಡಲಾಗಿತ್ತು ಎಂದು ದಿನೇಶ್ ಗೂಳಿಗೌಡ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಕೋಟಿ ಒಡತಿಯಾದ ಚಾಮುಂಡಿ ತಾಯಿ: ಒಂದೇ ತಿಂಗಳಲ್ಲಿ ಬರೋಬ್ಬರಿ ಕಾಣಿಕೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ