ಆಕೆ ಪುಣ್ಯವಂತೆ, ಮೊಮ್ಮಗಳ ಸಾವಿನ ಬಗ್ಗೆ ಮೊದಲ ಬಾರಿ ಮಾತನಾಡಿದ ಜಿ.ಟಿ. ದೇವೇಗೌಡ

By Suvarna News  |  First Published May 19, 2022, 2:58 PM IST

* ಜಿಟಿ ದೇವೇಗೌಡ ಮೊಮ್ಮಗಳು ಗೌರಿ ನಿಧನ
* ಮೊಮ್ಮಗಳು ಸಾವಿನ ಬಗ್ಗೆ ಮಾತನಾಡಿದ ಜಿಟಿ ದೇವೇಗೌಡ
* ಏಳು ತಿಂಗಳಲ್ಲಿ ಅವಳು ಕ್ಯಾನ್ಸರ್ ಗೆದಿದ್ದಳು ಎಂದ ಜಿಟಿಡಿ


ಮೈಸೂರು, (ಮೇ.19): ನನ್ನ ಮೊಮ್ಮಗಳು ಪುಣ್ಯವಂತೆ. ನಟ ಪುನೀತ್ ರಾಜ್​ಕುಮಾರ್ ಅವರ ನಿಧನಕ್ಕೆ ಬಂದ ರೀತಿಯಲ್ಲಿ ಸಾಕಷ್ಟು ಗಣ್ಯರು ಹಾಗೂ ಜನರು ಸಾವಿನ ದಿನ ಬಂದಿದ್ದರು ಎಂದು ಶಾಸಕ ಜಿ.ಟಿ. ದೇವೇಗೌಡ ಅವರು ತಮ್ಮ ಮೊಮ್ಮಗಳ ಸಾವಿನ ಬಗ್ಗೆ ಮೊದಲ ಬಾರಿ ಪ್ರತಿಕ್ರಿಯಿಸಿದ್ದಾರೆ.

 ಮೊದಲ ಬಾರಿಗೆ ಮೊಮ್ಮಗಳ ಸಾವಿನ ಬಗ್ಗೆ ಮಾಧ್ಯಮಗಳ ಮುಂದೆ ಪ್ರತಿಕ್ರಿಯಿಸಿರುವ ಜಿ.ಟಿ. ದೇವೇಗೌಡ, ನನ್ನ ಮೊಮ್ಮಗಳು ಬಹಳ ಚೂಟಿಯಾಗಿದ್ದಳು. ಅವಳಿಗೆ ಕ್ಯಾನ್ಸರ್ ಬಂದಿತ್ತು. ಆದರೆ, ಏಳು ತಿಂಗಳಲ್ಲಿ ಅವಳು ಕ್ಯಾನ್ಸರ್ ಗೆದಿದ್ದಳು. ವೈದ್ಯರ ಕೂಡ ಕ್ಯಾನ್ಸರ್ ಮುಕ್ತ ಎಂದು ಹೇಳಿ ಸಂತೋಷ ಪಟಿದ್ದರು. ಆದರೆ, ಅವಳಿಗೆ ದಿಢೀರನೇ ಆ ಲಕ್ಷಣಗಳು ಕಾಣಿಸಿಕೊಂಡು ಸಾವು ಬಂತು ಎಂದು ಬೇಸರ ವ್ಯಕ್ತಪಡಿಸಿದರು.

Latest Videos

undefined

ಕ್ಯಾನ್ಸರ್ ನಿಂದ ಬಳಲುತ್ತಿದ್ದ ಜಿಟಿ ದೇವೇಗೌಡರ 3 ವರ್ಷದ ಮೊಮ್ಮಗಳು ವಿಧಿವಶ

ಗೌರಿ ಸಾವಿನ ಹಿನ್ನೆಲೆಯಲ್ಲಿ ಎಲ್ಲಾ ರಾಜಕೀಯ ಮುಖಂಡರು ಸಾಂತ್ವನ ಹೇಳಿದ್ದಾರೆ. ಯಾವ ಪಕ್ಷದವರ ಜೊತೆಗೂ ರಾಜಕಾರಣ ಮಾತನಾಡಿಲ್ಲ. ಮಾಜಿ ಸಿಎಂ ಕುಮಾರಸ್ವಾಮಿ‌ ಅವರ ಜೊತೆ ಮಾತು ಬಿಟ್ಟು ಎರಡೂವರೆ ವರ್ಷವಾಗಿತ್ತು. ಅವರು ಕೂಡ ಬಂದು ಸಾಂತ್ವಾನ ಹೇಳಿದ್ದಾರೆ ಎಂದರು.

ನಿಖಿಲ್ ಕುಮಾರಸ್ಚಾಮಿ ನಮ್ಮ ಕುಟುಂಬದ ಸದಸ್ಯ ಇದ್ದಂತೆ. ನನ್ನ ಮಗ ಮತ್ತು ನಿಖಿಲ್ ಆತ್ಮೀಯ ಸ್ನೇಹಿತರು. ಹೀಗಾಗಿ ನಮ್ಮ ನೋವಿನ ಜೊತೆಗೆ ಅವರಿದ್ದಾರೆ. ರಾಜಕಾರಣ ವಿಚಾರವನ್ನು ಮುಂದೆ ಮಾತನಾಡುತ್ತೇನೆ ಎಂದು ಹೇಳಿದರು.

ಜೆಡಿಎಸ್‌ ಶಾಸಕ ಜಿಟಿ ದೇವೇಗೌಡ ಅವರ ಪುತ್ರ ಜಿ.ಡಿ. ಹರೀಶ್ ಗೌಡ ಮಗಳು ಗೌರಿ(3) ಮೊನ್ನೇ ಅಷ್ಟೇ ಮೃತಪಟ್ಟಿದ್ದಳು. ಈಕೆ ಅನಾರೋಗ್ಯದಿಂದ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು.   ಆದರೆ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮಧ್ಯರಾತ್ರಿ ನಿಧನ ಹೊಂದಿದ್ದಳು. ಈ ಮಗುವಿಗೆ ಇಡೀ ಕರ್ನಾಟಕವೇ ಮರುಕ ವ್ಯಕ್ತಪಡಿಸಿತ್ತು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ, ಎಚ್‌ಡಿ ಕುಮಾರಸ್ವಾಮಿ ಸೇರಿದಂತೆ ಹಲವು ಘಟಾನುಘಟಿ ರಾಜಕೀಯ ನಾಯಕರು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸಿದ್ದರು. ಅಲ್ಲದೇ ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರು ಜಿಟಿಡಿ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳುತ್ತಿದ್ದಾರೆ.

 ಜಿಟಿಡಿ ಮೊಮ್ಮಗಳ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದ ನಿಖಿಲ್
ಶಾಸಕ ಜಿಟಿ ದೇವೇಗೌಡ ಮೊಮ್ಮಗಳ ಅಂತ್ಯಸಂಸ್ಕಾರದಲ್ಲಿ ನಟ, ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಭಾಗವಹಿಸಿ, ಕುಟುಂಬಕ್ಕೆ ಸಾಂತ್ವನ ಹೇಳಿದ್ದರು. 

ಬೆಂಗಳೂರಿನ ಆಸ್ಪತ್ರೆಯಲ್ಲಿ ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಗೌರಿಗೆ ಚಿಕಿತ್ಸೆ ಫಲಕಾರಿಯಾಗಿಲ್ಲ. ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಗುಂಗ್ರಾಲ್ ಛತ್ರದಲ್ಲಿರುವ ಜಿಟಿ ದೇವೇಗೌಡ ಅವರ ಜಮೀನಿನಲ್ಲಿ ಅಂತ್ಯಸಂಸ್ಕಾರ ನೇರವೇರಸಲಾಗಿದೆ.ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡ ನಿಖಿಲ್ ಕುಮಾರಸ್ವಾಮಿ, ಜಿಟಿಡಿ ಕುಟಂಬಕ್ಕೆ ಸಾಂತ್ವನ ಹೇಳಿದ್ದರು.

click me!