ಬಡತನ ನಿವಾರಣೆಗೆ ಗ್ಯಾರಂಟಿ ಯೋಜನೆ: ಸಿಎಂ ಸಿದ್ದರಾಮಯ್ಯ

Published : Aug 16, 2023, 04:41 AM IST
ಬಡತನ ನಿವಾರಣೆಗೆ ಗ್ಯಾರಂಟಿ ಯೋಜನೆ: ಸಿಎಂ ಸಿದ್ದರಾಮಯ್ಯ

ಸಾರಾಂಶ

ನಮ್ಮ ಗ್ಯಾರಂಟಿ ಯೋಜನೆಗಳ ಕುರಿತೂ ಕೆಲವರು ನಕಾರಾತ್ಮಕ ಭಾವನೆ ಮೂಡಿಸಲು ಯತ್ನಿಸುತ್ತಿದ್ದಾರೆ. ಸರ್ಕಾರವು ರಾಜ್ಯದ ಭೌತಿಕ ಅಭಿವೃದ್ಧಿ ಮತ್ತು ಸಾಮಾಜಿಕ ಅಭಿವೃದ್ಧಿ ಎಂಬ ಎರಡೂ ಮಾದರಿಗಳನ್ನು ಒಂದೇ ರೀತಿಯಲ್ಲಿ ಪರಿಭಾವಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ 

ಬೆಂಗಳೂರು(ಆ.16): ಬೆಲೆ ಏರಿಕೆ, ನಿರುದ್ಯೋಗ, ಜಾತಿ ಧರ್ಮಗಳ ಕಾರಣಕ್ಕಾಗಿ ತಾರತಮ್ಯ, ಭ್ರಷ್ಟಾಚಾರ ಮುಂತಾದ ಕಾರಣಗಳಿಗಾಗಿ ರಾಜ್ಯದ ಅನೇಕ ಜಿಲ್ಲೆಗಳ ತಲಾದಾಯ ಹಿಂದಿನ ಸರ್ಕಾರದ ಅವಧಿಯಲ್ಲಿ ಏರಿಕೆಯಾಗದೇ ಬಡತನ ಹೆಚ್ಚಾಗಿರುವುದು ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಜನರ ಆರ್ಥಿಕ, ಸಾಮಾಜಿಕ, ಚೈತನ್ಯ ಹೆಚ್ಚಿಸುವ ಉದ್ದೇಶದಿಂದ ‘ಸಾರ್ವತ್ರಿಕ ಮೂಲ ಆದಾಯ’ ಎಂಬ ಹೊಸ ಆರ್ಥಿಕ ಪ್ರಮೇಯ ಅಳವಡಿಸಿಕೊಂಡು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಗರದ ಮಾಣಿಕ್‌ ಷಾ ಪೆರೇಡ್‌ ಮೈದಾನದಲ್ಲಿ ಮಂಗಳವಾರ ಆಯೋಜಿಸಿದ್ದ 77ನೇ ಸ್ವಾತಂತ್ರೋತ್ವದಲ್ಲಿ ಧ್ವಜಾರೋಹಣ ಮಾಡಿ ಮಾತನಾಡಿದ ಅವರು, ನಮ್ಮ ಗ್ಯಾರಂಟಿ ಯೋಜನೆಗಳ ಕುರಿತೂ ಕೆಲವರು ನಕಾರಾತ್ಮಕ ಭಾವನೆ ಮೂಡಿಸಲು ಯತ್ನಿಸುತ್ತಿದ್ದಾರೆ. ಸರ್ಕಾರವು ರಾಜ್ಯದ ಭೌತಿಕ ಅಭಿವೃದ್ಧಿ ಮತ್ತು ಸಾಮಾಜಿಕ ಅಭಿವೃದ್ಧಿ ಎಂಬ ಎರಡೂ ಮಾದರಿಗಳನ್ನು ಒಂದೇ ರೀತಿಯಲ್ಲಿ ಪರಿಭಾವಿಸಿದೆ. ಪ್ರಸ್ತುತ ಸರ್ಕಾರವು ಹಿಂದಿನ ಸರ್ಕಾರಗಳಿಗಿಂತಲೂ ಹೆಚ್ಚಿನ ಸಂಪನ್ಮೂಲ ಸಂಗ್ರಹಿಸಿ ಅದನ್ನು ಮೂಲ ಸೌಕರ್ಯಗಳಿಗೆ ವಿನಿಯೋಗಿಸಲು ಬದ್ಧವಾಗಿದೆ. ಸರ್ಕಾರದ ಆದಾಯಗಳ ಸಂಗ್ರಹ ಸಹ ಶಕ್ತಿಯುತವಾಗಿದೆ ಎಂದರು.

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ತಂದ ಕೆಂಪಣ್ಣನ ಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ; ಎಚ್‌ಡಿಕೆ ಟೀಕೆ

14 ಲಕ್ಷ ಹೊಸ ಉದ್ಯೋಗ ಸೃಷ್ಟಿ:

ಭವಿಷ್ಯದ ತಂತ್ರಜ್ಞಾನ ಮತ್ತು ಅತ್ಯಾಧುನಿಕ ಉತ್ಪಾದನಾ ವಲಯವನ್ನು ಸಮಾನ ಮತ್ತು ಸುಸ್ಥಿರ ಬೆಳವಣಿಗೆಯ ಮೂಲಕ ಏಷ್ಯಾದಲ್ಲೇ ಮೊದಲ ಸ್ಥಾನಕ್ಕೆ ಒಯ್ಯುವ ಗುರಿ ನಮ್ಮದಾಗಿದೆ. ಕಳೆದ 10 ವರ್ಷದಲ್ಲಿ ರಾಜ್ಯದ ಕೈಗಾರಿಕಾ ವಲಯವು ಶೇ.9.3ರ ದರದಲ್ಲಿ ಬೆಳವಣಿಗೆ ಇದೆ. ಅದನ್ನು ಮುಂದಿನ ದಿನದಲ್ಲಿ ಶೇ.15-16ಕ್ಕೆ ಹೆಚ್ಚಿಸುವುದು, ಪ್ರತಿ ವರ್ಷ 1.4 ಲಕ್ಷ ಕೋಟಿ ರು. ಬಂಡವಾಳ ಆಕರ್ಷಿಸುವ ಮೂಲಕ 14 ಲಕ್ಷ ಹೊಸ ಉದ್ಯೋಗ ಸೃಷ್ಟಿಸುವ ಗುರಿಯನ್ನು ಹೊಂದಿದ್ದೇನೆ ಎಂದು ತಿಳಿಸಿದರು.

ಜಿಡಿಪಿ ವೃದ್ಧಿಗೆ ಏರೋಸ್ಪೇಸ್‌, ರಕ್ಷಣೆ ಮತ್ತು ಲಾಜಿಸ್ಟಿಕ್‌ ವಲಯಕ್ಕೆ ಸಾಧ್ಯತೆ ನೀಡಲಾಗಿದೆ. ಬೆಂಗಳೂರಿನ ಹೊರಗೆ ಉದ್ಯೋಗ ಸೃಷ್ಟಿಗೆ ಮಿಲಿಯನ್‌ ಪ್ಲಸ್‌ ನಗರಗಳೆಂದು ಗುರುತಿಸಲಾದ ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ ಮತ್ತು ಬಳ್ಳಾರಿ ನಗರಗಳ ಉಪನಗರಗಳಾಗಿ ಕೈಗಾರಿಕಾ ಟೌನ್‌ಶಿಪ್‌ ಸ್ಥಾಪಿಸಲಾಗುವುದು ಎಂದರು.

ಬರ, ಪ್ರವಾಹ ಎದುರಿಸಲು ಸಿದ್ಧ:

ಮುಂಗಾರು ವಿಳಂಬವಾಗಿ ಪ್ರಾರಂಭವಾದ್ದರಿಂದ ರಾಜ್ಯದಲ್ಲಿ ಜೂನ್‌ ತಿಂಗಳಲ್ಲಿ ಬರದ ಛಾಯೆ ಇತ್ತು. ಜುಲೈ ತಿಂಗಳಲ್ಲಿ ಭಾರಿ ಮಳೆಯಾಗಿದ್ದರಿಂದ ಹಲವೆಡೆ ಪ್ರವಾಹ ಪರಿಸ್ಥಿತಿಯೂ ತಲೆದೋರಿತು. ಅತಿವೃಷ್ಟಿ, ಅನಾವೃಷ್ಟಿಗಳೆರಡನ್ನೂ ಸಮರ್ಥವಾಗಿ ಎದುರಿಸಲು ಸರ್ಕಾರ ಸಿದ್ಧವಾಗಿದೆ ಹಾಗೂ ಇದರಿಂದಾಗುವ ಹಾನಿಯನ್ನು ತಗ್ಗಿಸಲು ಎಲ್ಲ ರೀತಿಯ ಪ್ರಯತ್ನಗಳನ್ನೂ ಮಾಡುತ್ತಿದೆ ಎಂದು ತಿಳಿಸಿದರು.

ಶಾಸಕರ ಸಮಸ್ಯೆ ಬಗೆಹರಿಸಿ: ಉಸ್ತುವಾರಿಗಳಿಗೆ ಸಿಎಂ ಸೂಚನೆ

ಮರು ಜಾರಿ:

ನಮ್ಮ ಕಳೆದ ಸರ್ಕಾರದ ಅವಧಿಯಲ್ಲಿ ಜಾರಿಗೊಳಿಸಿದ ಜನಪ್ರಿಯ ಮತ್ತು ಯಶಸ್ವಿ ಯೋಜನಗಳಾದ ಕೃಷಿ ಭಾಗ್ಯ, ಅನುಗ್ರಹ ಯೋಜನೆ, ವಿದ್ಯಾಸಿರಿ, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಯೋಜನೆಗಳನ್ನು ಮರು ಜಾರಿಗೊಳಿಸಲಾಗುವುದು. ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ ಮಾಡಿ ಎಸ್ಸಿ,ಎಸ್ಟಿಗೆ ಹಂಚಿಕೆ ಮಾಡಿದ ಭೂಮಿ ಪರಭಾರೆ ವಿರುದ್ಧ ದೂರು ನೀಡುವ ಕಾಲಮಿತಿ ರದ್ದುಪಡಿಸಲಾಗಿದೆ. ಎಸ್ಸಿ,ಎಸ್ಟಿಗಳಿಗೆ ಮೀಸಲಿಟ್ಟಅನುದಾನವನ್ನು ಇತರೆ ಕಾರ್ಯಗಳಿಗೆ ದುರ್ಬಳಕೆ ತಡೆಗಟ್ಟು ಕ್ರಮ ವಹಿಸಲಾಗಿದೆ. ಆಸಿಡ್‌ ದಾಳಿ ಸಂತ್ರಸ್ತೆಗೆ ಸ್ವಯಂ ಉದ್ಯೋಗಕ್ಕೆ ಸಾಲ ಸೌಲಭ್ಯ ಮತ್ತು ವಸತಿ ನೀಡಲಾಗುತ್ತಿದೆ.

ಎಸ್ಸಿ, ಎಸ್ಟಿ,ಹಿಂದುಳಿದ, ಅಲ್ಪಸಂಖ್ಯಾತ ವರ್ಗದ ಯುವಕರಿಗೆ ವಿದ್ಯುತ್‌ ಚಾಲಿತ ವಾಹನ ಖರೀದಿಗೆ ಸಾಲ ಸೌಲಭ್ಯ ನೀಡಲಾಗುತ್ತಿದೆ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ,ಗಣಿ ಬಾಧಿತ ಪ್ರದೇಶದ ಸಮಗ್ರ ಅಭಿವೃದ್ಧಿ ಯೋಜನೆ ರೂಪಿಸಲಾಗಿದೆ. ಬ್ರ್ಯಾಂಡ್‌ ಬೆಂಗಳೂರು ಕಲ್ಪನೆಯಡಿ ಬೆಂಗಳೂರು ನಗರವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸಲು ಸರ್ಕಾರ ಮುಂದಾಗಿದೆ ಎಂದು ತಿಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕರ್ನಾಟಕ ಗದ್ದುಗೆ ಫೈಟ್‌ ಬಗ್ಗೆ ಹೈಕಮಾಂಡ್‌ ನಾಯಕರ ಚರ್ಚೆ
ಚುಂಚ ಶ್ರೀ ಬಳಿ ಕೈ ಮುಗಿದು ಎಚ್‌ಡಿಕೆ ಕ್ಷಮೆ