
ಬೆಂಗಳೂರು (ಜ.1) : ಸರ್ಕಾರದ ಪರ್ಯಾಯ ವ್ಯವಸ್ಥೆಯ ಬೆದರಿಕೆ ಅಸ್ತ್ರಕ್ಕೆ ಜಗ್ಗದ ರಾಜ್ಯ ಪದವಿ ಕಾಲೇಜು ಅತಿಥಿ ಉಪನ್ಯಾಸಕರ ಸಂಘಟನೆಗಳು ಸೇವೆ ಕಾಯಂಗೆ ಆಗ್ರಹಿಸಿ ನಿಗದಿಯಂತೆ ಸೋಮವಾರ ತುಮಕೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ಆರಂಭಿಸುವುದಾಗಿ ತಿಳಿಸಿವೆ.
ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಅತಿಥಿ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಲು ಸೂಕ್ತ ಯೋಜನೆ ರೂಪಿಸುವುದಾಗಿ ಕಾಂಗ್ರೆಸ್ ಪಕ್ಷ ಕಳೆದ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳಲು ನಾವು ಸರ್ಕಾರಕ್ಕೆ ಕೇಳುತ್ತಿದ್ದೇವೆ. ಹತ್ತು ಹದಿನೈದು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನಮಗೆ ಭದ್ರತೆ ಕೊಡಿ ಎಂದು ಕೇಳುವುದು ನಮ್ಮ ಹಕ್ಕು. ಅದಕ್ಕಾಗಿ ಕಳೆದ ಒಂದು 39 ದಿನಗಳಿಂದ ತರಗತಿ ಬಹಿಷ್ಕರಿಸಿ ನಾವು ಮುಷ್ಕರ ನಡೆಸುತ್ತಿದ್ದರೂ ನಮ್ಮ ಬೇಡಿಕೆ ಈಡೇರಿಸಲು ಸರ್ಕಾರ ಸ್ಪಂದಿಸಿಲ್ಲ. ಹಾಗಾಗಿ ಪಾದಯಾತ್ರೆ ಮೂಲಕ ಹೋರಾಟ ತೀವ್ರಗೊಳಿಸಲು ನಾವು ತೀರ್ಮಾನಿಸಿದ್ದೇವೆ ಎಂದು ರಾಜ್ಯ ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಹನುಮಂತಗೌಡ ಕಲ್ಮನಿ ತಿಳಿಸಿದ್ದಾರೆ.
ಕುಸ್ತಿ ಫೆಡರೇಷನ್ ಕಚ್ಚಾಟ ರಾಜ್ಯದ 10 ಸಾವಿರ ಕುಸ್ತಿಪಟುಗಳು ಅತಂತ್ರ!
ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರೋಧ ಪಕ್ಷದಲ್ಲಿದ್ದಾಗ ಅತಿಥಿ ಉಪನ್ಯಾಸಕರ ಸೇವಾ ಭದ್ರತೆಗೆ ಸದನದಲ್ಲೇ ಅಂದಿನ ಬಿಜೆಪಿ ಸರ್ಕಾರವನ್ನು ಆಗ್ರಹಿಸಿದ್ದರು. ಈ ಸಂಬಂಧ ವಿಡಿಯೋ ಎಲ್ಲ ಕಡೆ ವೈರಲ್ ಆಗಿದೆ. ಈಗ ಅಧಿಕಾರಕ್ಕೆ ಬಂದಾಗ ಅದೇ ಮಾತಿನ ಮೇಲೆ ತಮ್ಮ ಸರ್ಕಾರ ಏಕೆ ನಿಲ್ಲುವುದಿಲ್ಲ? ಜೊತೆಗೆ ಪ್ರಣಾಳಿಕೆಯಲ್ಲೂ ಈ ಬಗ್ಗೆ ಭರವಸೆ ನೀಡಿದ್ದೀರಿ. ಹಾಗಾಗಿ ನುಡಿದಂತೆ ನಡೆಯುವ ಸರ್ಕಾರ ತಮ್ಮದು ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿ ಎಂಬುದು ನಮ್ಮ ಆಗ್ರಹ ಎಂದು ಸಂಘದ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.
ಕಾಂಗ್ರೆಸ್‌ನಿಂದ ಸ್ಪರ್ಧೆ ಸುಳ್ಳು; ಯಾವುದೇ ಕಾರಣಕ್ಕೂ ನಾನು ಬಿಜೆಪಿ ಬಿಡೋಲ್ಲ: ಸೋಮಣ್ಣ ಸ್ಪಷ್ಟನೆ
ಬೆಳಗ್ಗೆ 10 ಗಂಟೆಗೆ ತುಮಕೂರಿನ ಸಿದ್ಧಗಂಗಾ ಮಠದಿಂದ ಪಾದಯಾತ್ರೆ ಆರಂಭವಾಗಲಿದೆ. ಸುಮಾರು 10 ಸಾವಿರ ಅತಿಥಿ ಉಪನ್ಯಾಸಕರು ಭಾಗವಹಿಸಲಿದ್ದಾರೆ. ಜ.3ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ತಲುಪಿ ಅಲ್ಲಿ ಬೃಹತ್ ಸಮಾವೇಶ ನಡೆಸುತ್ತೇವೆ. ನಮಗೆ ಬೆಂಬಲ ನೀಡಲು ವಿದ್ಯಾರ್ಥಿಗಳು, ಹೋರಾಟಗಾರರು, ಆಟೋ ಚಾಲಕರು ಸೇರಿ ಬೇರೆ ಬೇರೆ ಸಂಘಟನೆಗಳನ್ನೂ ಕೋರಿದ್ದೇವೆ ಎಂದು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ