ಏರ್ ಇಂಡಿಯಾ ವಿಮಾನ ಪತನ; ಮುನ್ನೆಲೆಗೆ ಬಂದ 15 ವರ್ಷ ಹಿಂದಿನ ಮಂಗಳೂರು ದುರಂತ!

Published : Jun 12, 2025, 03:13 PM ISTUpdated : Jun 12, 2025, 03:17 PM IST
Mangaluru Air India plane Craft

ಸಾರಾಂಶ

ಗುಜರಾತಿನ ಅಹಮದಾಬಾದ್ ಏರ್‌ ಇಂಡಿಯಾ ವಿಮಾನ ಪತನದ ಘಟನೆ ಬೆನ್ನಲ್ಲಿಯೇ ಕಳೆದ 15 ವರ್ಷಗಳ ಹಿಂದೆ ಮಂಗಳೂರಿನಲ್ಲಿ ನಡೆದಿದ್ದ ವಿಮಾನ ದುರಂತದ ಕ್ಷಣಗಳು ಮುನ್ನೆಲೆಗೆ ಬಂದಿವೆ. ಮಂಗಳೂರಿನ ವಿಮಾನ ಪತನು ಘಟನೆಯಲ್ಲಿ 158 ಜನರು ಸಾವನ್ನಪ್ಪಿದ್ದರು.

ಮಂಗಳೂರು (ಜೂ. 12):  ಗುಜರಾತ್‌ನ ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವೊಂದು ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಕಟ್ಟಡಕ್ಕೆ ಡಿಕ್ಕಿ ಹೊಡೆದು ಪತನಗೊಂಡಿರುವ ಘಟನೆ ನಡೆದಿದೆ. ಇದರ ಬೆನ್ನಲ್ಲಿಯೇ ಇಡೀ ದೇಶವನ್ನು ತಲ್ಲಣಗೊಳಿಸಿದ್ದ ಕರ್ನಾಟಕದ ಮಂಗಳೂರು ಏರ್‌ಪೋರ್ಚ್‌ನಲ್ಲಿ ನಡೆದ ವಿಮಾನ ದುರಂತಕ್ಕೆ ಮುನ್ನೆಲೆಗೆ ಬಂದಿದೆ. ಮಂಗಳೂರು ವಿಮಾನ ದುರಂತಕ್ಕೆ ಇದೀಗ 15 ವರ್ಷವಾಗಿದೆ. 2010ರ ಮೇ 22ರಂದು ಈ ಭೀಕರ ದುರಂತ ಸಂಭವಿಸಿದ್ದು, ವಿಮಾನದಲ್ಲಿದ್ದ 158 ಮಂದಿ ಮೃತಪಟ್ಟು ಕೇವಲ 8 ಮಂದಿ ಮಾತ್ರ ಬದುಕಿ ಉಳಿದಿದ್ದರು.

ಈ ದುರಂತದಲ್ಲಿ ಮೃತಪಟ್ಟವರಲ್ಲಿ ಅನೇಕರ ಮೃತದೇಹದ ಗುರುತು ಪತ್ತೆಯಾಗದೆ ಉಳಿದಿದ್ದವು. ಅವುಗಳನ್ನು ಕೂಳೂರಿನ ಫಲ್ಗುಣಿ ನದಿ (Phalguni river) ಕಿನಾರೆಯಲ್ಲಿ ಅಂತ್ಯ ಸಂಸ್ಕಾರ ಮಾಡಲಾಗಿತ್ತು. ಅದೇ ಜಾಗದಲ್ಲಿ ಸಂತ್ರಸ್ತರ ನೆನಪಿನ ಸ್ಮರಣಾರ್ಥವಾಗಿ ದೊಡ್ಡ ಪಾರ್ಕ್ ನಿರ್ಮಿಸಲಾಗಿದೆ. ಈ ದರ್ಘಟನೆಯ ಸ್ಮರಣಾರ್ಥವಾಗಿ ಪ್ರತಿ ವರ್ಷ ಮೇ 22ರಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾಡಳಿತ ವತಿಯಿಂದ ಉದ್ಯಾನದಲ್ಲಿ ಶ್ರದ್ಧಾಂಜಲಿಯನ್ನು ಸಲ್ಲಿಕೆ ಮಾಡಲಾಗುತ್ತದೆ. ಈ ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಸಂಬಂಧಿಕರನ್ನು ಕಳೆದುಕೊಂಡು ಕೇರಳ ಮತ್ತು ಕರ್ನಾಟಕದ ಸಂತ್ರಸ್ತ ಕುಟುಂಬ ಸದಸ್ಯರು ಬಂದು ಭಾಗವಹಿಸುತ್ತಾರೆ. ಈ ಮೂಲಕ ಕುಟುಂಬಸ್ಥರನ್ನು ಸ್ಮರಿಸುತ್ತಾರೆ.

ವಿಮಾನ ದುರಂತದ ಘಟನೆ ಹೇಗೆ ನಡೆಯಿತು:

2010ರ ಮೇ 22ರಂದು ಬೆಳಗ್ಗೆ 6.20ರ ಸಮಯ. ದುಬೈನಿಂದ ಮಂಗಳೂರು ಏರ್‌ ಪೋರ್ಟ್ (Mangaluru airport) ಆಗಮಿಸಿದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ (Air india express airoplane) ಲ್ಯಾಂಡಿಂಗ್‌ ವೇಳೆ ನಿಯಂತ್ರಣಕ್ಕೆ ಸಿಗದೆ ಕೆಂಜಾರಿನ ಗುಡ್ಡದಿಂದ ಕೆಳಜಾರಿ ಅಪಘಾತಕ್ಕೀಡಾಗಿತ್ತು. ಕೂಡಲೆ ವಿಮಾನ ಪೂರ್ತಿ ಅಗ್ನಿ ಆವರಿಸಿದ್ದು, ಅದರಲ್ಲಿದ್ದ 158 ಮಂದಿ ಸಜೀವ ದಹನವಾಗಿದ್ದರು. ಅಂದರೆ ಈ ವಿಮಾನದಲ್ಲಿ 6 ಶಿಶುಗಳು, 19 ಮಕ್ಕಳು, 6 ವಿಮಾನ ಸಿಬ್ಬಂದಿ ಸೇರಿ ಒಟ್ಟು 166 ಜನರು ಪ್ರಯಾಣ ಮಾಡುತ್ತಿದ್ದರು. ವಿಮಾನದ ಭೀಕರ ಅಪಘಾತದ ನಡುವೆಯೂ ಅದೃಷ್ಟವಶಾತ್ ಕೇವಲ 8 ಮಂದಿ ಸಾವನ್ನು ಜಯಿಸಿ ಬದುಕಿ ಬಂದಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಈಗಲೂ ನಮ್ಮ ನಡುವೆ ಜೀವನ ನಡೆಸುತ್ತಿದ್ದಾರೆ. ಆದರೆ, ಉಳಿದ ಪ್ರಯಾಣಿಕರು ಬೆಳಗಿನ ಜಾವ ನಿದ್ರೆಯ ಮಂಪರಿನಿಂದ ಎದ್ದು, ಇನ್ನೇನು ತಾವು ಇಳಿಯುವ ಸ್ಥಳ ಬಂತೆಂದು ಇಳಿಯಲು ಸಿದ್ಧರಾಗುತ್ತಿದ್ದಾಗ, ವಿಮಾನ ಅಪಘಾತಕ್ಕೆ ಸಿಲುಕಿ ಕ್ಷಣ ಮಾತ್ರದಲ್ಲಿಯೇ ಸುಟ್ಟು ಕರಕಲಾಗಿದ್ದರು.

ಪರಿಹಾರಕ್ಕಾಗಿ ಹೋರಾಟ:

ಇನ್ನು ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ ಒದಗಿಸುವುದಕ್ಕಾಗಿ ಕಂಪೆನಿಯು ಮುಂಬೈನ ಕಾನೂನು ತಜ್ಞ ಎಚ್‌.ಡಿ. ನಾನಾವತಿ ನೇತೃತ್ವದ ಸಂಸ್ಥೆಯನ್ನು ನೇಮಿಸಿತ್ತು. ಈ ಸಂಸ್ಥೆ ಸುಮಾರು 147 ಕುಟುಂಬಗಳಿಗೆ ಪರಿಹಾರ ಒದಗಿಸಿರುವುದಾಗಿ ಹೇಳಿಕೊಂಡಿತ್ತು. ಇದರಲ್ಲಿ ಗರಿಷ್ಠ ಎಂದರೆ 7.7 ಕೋಟಿ ರೂ. ಪಡೆದವರೂ ಇದ್ದರು. ಆದರೆ ಪರಿಹಾರದ ಮೊತ್ತದ ಬಗ್ಗೆ ಅನೇಕ ಕುಟುಂಬದವರು ಆಕ್ಷೇಪವೆತ್ತಿದ್ದರು. ಕಳೆದ ಎರಡು ವರ್ಷಗಳ ಹಿಂದೆ ಸುಮಾರು 45 ಕುಟುಂಬದವರು ಇನ್ನೂ ಕಾನೂನು ಹೋರಾಟವನ್ನು ಮುಂದುವರೆಸಿದ್ದರೆ. ಈ ನಡುವೆ ಏರ್‌ ಇಂಡಿಯಾವನ್ನು ಟಾಟಾ ಸಮೂಹ ಸಂಸ್ಥೆ ಖರೀದಿಸಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಯಚೂರು: ರಸ್ತೆಯಲ್ಲಿ ಹೋಗುತ್ತಿದ್ದ ಹಾವು ಹಿಡಿದು ಬೈಕ್ ಸವಾರ ಹುಚ್ಚಾಟ, ವಿಡಿಯೋ ವೈರಲ್
ರೈತನಿಗೆ ಪರಿಹಾರ ನೀಡದ ಶಿವಮೊಗ್ಗ ಡಿಸಿ ಕಚೇರಿ, ಕಾರು ಜಪ್ತಿಗೆ ಕೋರ್ಟ್ ಆದೇಶ! ಏನಿದು ಪ್ರಕರಣ?