
ವಿಜಯಪುರ: ವಿಜಯಪುರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿ ಬಂದಿದೆ. ಗುಂಡು ಹಾರಿಸಿ ಗ್ರಾಮ ಪಂಚಾಯತ್ ಸದಸ್ಯನ ಕೊಲೆ ಮಾಡಲಾಗಿದೆ. ವಿಜಯಪುರ ನಗರದ ಹೊರವಲಯದ ಅಲಿಯಾಬಾದ್ ಬಳಿ ಘಟನೆ ನಡೆದಿದೆ.
ಗ್ರಾ.ಪಂ ಸದಸ್ಯ ರಾಜು ಖರೆ ಅವರ ಮೇಲೆ ದುಷ್ಕರ್ಮಿಗಳು ಆರು ಸುತ್ತು ಗುಂಡು ಹಾರಿಸಿ ಹತ್ಯೆ ಮಾಡಿದ್ದು, ಬಳಿಕ ಶವದ ಮೇಲೆ ಕಲ್ಲು ಎತ್ತಿ ಹಾಕಿ ಎಸ್ಕೇಪ್ ಆಗಿದ್ದಾರೆ. ಹತ್ಯೆಯಾದ ರಾಜು ಖರೆ ಅವರು ತಾಂಗರುನ ದೊಡ್ಡಿ ನಿವಾಸಿಯಾಗಿದ್ದಾರೆ. ಘಟನೆಯ ಬಳಿಕ ಆರೋಪಿಗಳು ಪರಾರಿಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಯಾವ ಕಾರಣಕ್ಕೆ ಕೊಲೆ ನಡೆದಿದೆ ಎಂಬುದು ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.
ಗುಂಡಿನ ದಾಳಿ ನಡೆದ ಸ್ಥಳಕ್ಕೆ ಡಾಗ್ ಸ್ಕಾಡ್, SOCO ಟೀಂ ಭೇಟಿ ನೀಡಿ ಪರಿಶೀಲಿಸಿದೆ. ಹಾಗೆಯೇ ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮಾಹಿತಿ ಕಲೆ ಹಾಕಿದ್ದಾರೆ. ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಇದನ್ನೂ ಓದಿ: 2 ಸಾವಿರ ನೀಡಿ ಮ್ಯೂಸಿಕ್ ಫೆಸ್ಟ್‌ಗೆ ಹೋಗಿದ್ದ ಇಬ್ಬರು ಎಂಬಿಎ ವಿದ್ಯಾರ್ಥಿಗಳು ಡ್ರಗ್ಸ್ ಓವರ್‌ಡೋಸ್ ಆಗಿ ಸಾವು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ