ಇನ್ಮುಂದೆ ಕೆಎಸ್‌ಆರ್‌ಟಿಸಿ ಬಸ್​ಗಳಲ್ಲಿ ನಾಯಿಗೆ ಹಾಫ್ ಟಿಕೆಟ್!

Published : Oct 30, 2022, 09:30 PM IST
ಇನ್ಮುಂದೆ ಕೆಎಸ್‌ಆರ್‌ಟಿಸಿ ಬಸ್​ಗಳಲ್ಲಿ ನಾಯಿಗೆ ಹಾಫ್ ಟಿಕೆಟ್!

ಸಾರಾಂಶ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಲಗೇಜು ಸಾಗಾಣೆಯ ನಿಯಮಗಳು ಮಾರ್ಪಾಡು ಮಾಡಲು ತೀರ್ಮಾನಿಸಲಾಗಿದ್ದು, ಅದರಂತೆ ನಾಯಿಯನ್ನು ಕೊಂಡೊಯ್ಯಲು ಒಬ್ಬ ವಯಸ್ಕ ಪ್ರಯಾಣಿಕರನ್ನು ಪರಿಗಣಿಸಿ ವಿಧಿಸಲಾಗುತ್ತಿದ್ದ ದರದಲ್ಲಿ ಬದಲಾವಣೆ ಮಾಡಲಾಗಿದೆ. 

ಬೆಂಗಳೂರು (ಅ.30): ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಲಗೇಜು ಸಾಗಾಣೆಯ ನಿಯಮಗಳು ಮಾರ್ಪಾಡು ಮಾಡಲು ತೀರ್ಮಾನಿಸಲಾಗಿದ್ದು, ಅದರಂತೆ ನಾಯಿಯನ್ನು ಕೊಂಡೊಯ್ಯಲು ಒಬ್ಬ ವಯಸ್ಕ ಪ್ರಯಾಣಿಕರನ್ನು ಪರಿಗಣಿಸಿ ವಿಧಿಸಲಾಗುತ್ತಿದ್ದ ದರದಲ್ಲಿ ಬದಲಾವಣೆ ಮಾಡಲಾಗಿದೆ. ಇನ್ನುಮುಂದೆ ನಾಯಿ ಮತ್ತು ನಾಯಿಯ ಮರಿಗೆ ಅರ್ಧ ಟಿಕೆಟ್ ದರವನ್ನು ವಿಧಿಸುವಂತೆ ತಿಳಿಸಲಾಗಿದೆ. 

ಪ್ರಯಾಣಿಕರು ನಾಯಿಯ ಮೇಲೆ ವಿಧಿಸುವ ಟಿಕೆಟ್ ದರವನ್ನು ಕಡಿಮೆ ಮಾಡಬೇಕು ಎಂದು ಒತ್ತಾಯ ಮಾಡ್ತಿದ್ರು, ಈ ಒತ್ತಡಕ್ಕೆ ಮಣಿದ ಸಾರಿಗೆ ಇಲಾಖೆ ಈ ನಿರ್ಧಾರ ಕೈಗೊಂಡಿದೆ. ಸಾಮಾನ್ಯ ವೇಗದೂತ, ನಗರ ಹೊರವಲಯ ಬಸ್‌ಗಳಲ್ಲಿ ನಾಯಿ ಸಾಗಾಣಿಕೆಗೆ ಅವಕಾಶ ಮಾಡಿಕೊಡಲಾಗಿದೆ. ಹಾಗೆಯೇ ಬಸ್‌ನಲ್ಲಿ ಯದ್ವಾತದ್ವಾ ಲಗೇಜ್ ಸಾಗಾಣಿಕೆಗೆ ಬ್ರೇಕ್ ಹಾಕಲಾಗಿದೆ. ಪ್ರತಿ ಪ್ರಯಾಣಿಕರ 30Kg ಲಗೇಜ್ ಕೊಂಡೊಯ್ಯಲು ಅವಕಾಶವಿದ್ದು, 30 ಕೆಜಿಗಿಂತ ಹೆಚ್ಚು ಸಾಗಾಣಿಕೆಗೆ ಹೆಚ್ಚುವರಿ ದರ ವಿಧಿಸಲು KSRTC ಹೊಸ ಆದೇಶವನ್ನು ನೀಡಿದೆ.

ಚಲಿಸುತ್ತಿರುವಾಗಲೇ ರಾಜಹಂಸ ಚಾಲಕನಿಗೆ ಹೃದಯಾಘಾತ, ಬಸ್ ಪಲ್ಟಿಯಾಗಿ 14 ಮಂದಿಗೆ ಗಾಯ!

ಕೆಎಸ್‌ಆರ್‌ಟಿಸಿ ನೌಕರರಿಗಾಗಿ ಪ್ರೀಮಿಯಂ ರಹಿತ ವಿಮಾ ಯೋಜನೆ: ಸಾರಿಗೆ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ ತಮ್ಮ ವೇತನ ಖಾತೆಯನ್ನು ಹೊಂದಿರುವ ಕರ್ನಾಟಕ ರಾಜ್ಯ ರಸ್ತೆ ನಿಗಮದ ನೌಕರರಿಗೆ ಪ್ರೀಮಿಯಂ ರಹಿತ ವಿಮಾವನ್ನು ವೈಯಕ್ತಿಕ ಅಪಘಾತ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಈ ವೈಯಕ್ತಿಕ ವಿಮಾ ಯೋಜನೆಯಿಂದ ಪಾಲಿಸಿದಾರರು ಅಪಘಾತದಲ್ಲಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ . 50 ಲಕ್ಷಗಳ ಪರಿಹಾರ ಧನ ದೊರೆಯಲಿದೆ. ಅಪಘಾತದಲ್ಲಿ ಸಿಬ್ಬಂದಿ ಶಾಶ್ವತವಾಗಿ ಪೂರ್ಣ ಅಂಗವೈಕಲ್ಯತೆಗೆ ತುತ್ತಾದಲ್ಲಿ . 20 ಲಕ್ಷ ಹಾಗೂ ಶಾಶ್ವತ/ ಭಾಗಶಃ ಅಂಗವೈಕಲ್ಯತೆ ಉಂಟಾದಲ್ಲಿ . 10 ಲಕ್ಷಗಳ ವಿಮಾ ಪರಿಹಾರ ದೊರೆಯಲಿದೆ.

ಈ ಯೋಜನೆಯ ಮತ್ತೊಂದು ವೈಶಿಷ್ಟ್ಯವೆಂದರೆ ಕರ್ತವ್ಯ ನಿರತ ಹಾಗೂ ಕರ್ತವ್ಯದಲ್ಲಿ ಇಲ್ಲದ ಸಮಯದಲ್ಲಿ ಕೂಡ ಆಗುವ ವೈಯಕ್ತಿಕ ಅಪಘಾತಗಳಿಗೂ ವಿಮೆ ಅನ್ವಯಿಸುತ್ತದೆ. ಸಿಬ್ಬಂದಿ ಅಪಘಾತದಲ್ಲಿನ ಪ್ಲಾಸ್ಟಿಕ್‌ ಸರ್ಜರಿ ಚಿಕಿತ್ಸೆಗಾಗಿ ಗರಿಷ್ಟ. 10 ಲಕ್ಷ, ಕೋಮಾದಲ್ಲಿ ಮೃತಪಟ್ಟರೆ . 50 ಲಕ್ಷ, ಅಲ್ಲದೆ ಹೆಚ್ಚುವರಿಯಾಗಿ . 2 ಲಕ್ಷಗಳನ್ನು ಮತ್ತು ಏರ್‌ ಅಂಬ್ಯುಲೆನ್ಸ್‌ ಸೇವೆಗಾಗಿ . 10 ಲಕ್ಷ ವಿಮಾ ಪರಿಹಾರ ನೀಡಲಾಗುವುದು.

KSRTC ಸಿಬ್ಬಂದಿಗೆ ರೂ.50 ಲಕ್ಷದ ಅಪಘಾತ ವಿಮಾ ಸೌಲಭ್ಯ ಜಾರಿ

ಸಿಬ್ಬಂದಿ ಅಪಘಾತದಲ್ಲಿ ಮೃತಪಟ್ಟರೆ ಮಕ್ಕಳ ಪದವಿ ಶಿಕ್ಷಣಕ್ಕಾಗಿ ಗರಿಷ್ಟ. 5 ಲಕ್ಷ ಹಾಗೂ ಹೆಣ್ಣು ಮಕ್ಕಳ ವಿವಾಹಕ್ಕೆ ಗರಿಷ್ಟ. 5 ಲಕ್ಷಗಳವರೆಗೆ ಆರ್ಥಿಕ ಸಹಾಯವನ್ನು ವಿಮಾ ಯೋಜನೆ ಒಳಗೊಂಡಿರುತ್ತದೆ. ಕಾರ್ಮಿಕರ ಮತ್ತು ಅವರ ಕುಟುಂಬ ವರ್ಗದವರ ಹಿತದೃಷ್ಟಿಯಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದೊಡನೆ ಒಡಂಬಡಿಕೆ ಮಾಡಿಕೊಂಡು ಜಾರಿಗೊಳಿಸುತ್ತಿರುವ ಉತ್ತಮ ಯೋಜನೆ ಇದಾಗಿದೆ ಎಂದು ಕೆಎಸ್‌ಆರ್‌ಟಿಸಿ ಮೈಸೂರು ವಿಭಾಗಿಯ ನಿಯಂತ್ರಣಧಿಕಾರಿ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್