ಪುರಾತತ್ವ ಇಲಾಖೆ ಅನುಮತಿ ಪಡೆಯದೇ ನೇರ ಹಂಪಿ ವಿರೂಪಾಕ್ಷೇಶ್ವರ ದೇಗುಲ ಕಂಬಕ್ಕೆ ಮೊಳೆ ಹೊಡೆದು ಎಡವಟ್ಟು ಮಾಡಿದ ಧಾರ್ಮಿಕ ದತ್ತಿ ಇಲಾಖೆ. ಸರ್ಕಾರಿ ಇಲಾಖೆಯೇ ಸ್ಮಾರಕಗಳಿಗೆ ಧಕ್ಕೆ ಉಂಟು ಮಾಡಿರುವುಕ್ಕೆ ನೋಟಿಸ್ ಜಾರಿ ಮಾಡಿದೆ.
ವಿಜಯನಗರ (ನ.12): ಪುರಾತತ್ವ ಇಲಾಖೆ ಅನುಮತಿ ಪಡೆಯದೇ ನೇರ ಹಂಪಿ ವಿರೂಪಾಕ್ಷೇಶ್ವರ ದೇಗುಲ ಕಂಬಕ್ಕೆ ಮೊಳೆ ಹೊಡೆದು ಎಡವಟ್ಟು ಮಾಡಿದ ಧಾರ್ಮಿಕ ದತ್ತಿ ಇಲಾಖೆ. ಸರ್ಕಾರಿ ಇಲಾಖೆಯೇ ಸ್ಮಾರಕಗಳಿಗೆ ಧಕ್ಕೆ ಉಂಟು ಮಾಡಿರುವುಕ್ಕೆ ನೋಟಿಸ್ ಜಾರಿ ಮಾಡಿದೆ.
ವಿರೂಪಾಕ್ಷ ದೇಗುಲ ಪುರಾತತ್ವ ಇಲಾಖೆ ಸುಪರ್ದಿಗೆ ಬರುತ್ತದೆ. ಹೀಗಾಗಿ ಇಲ್ಲಿ ಏನೇ ಕಾಮಗಾರಿ ಕೈಗೆತ್ತಿಕೊಳ್ಳುವ ಮುನ್ನ ಪುರಾತತ್ವ ಇಲಾಖೆಯಿಂದ ಅನುಮತಿ ಪಡೆಯಬೇಕಿತ್ತು. ಆದರೆ ಯಾವುದೇ ಅನುಮತಿ ಪಡೆಯದೇ ಸ್ಮಾರಕಗಳಿಗೆ ಡ್ರಿಲ್ ಹೊಡೆದು ಮೊಳೆ ಹೊಡೆಯಲಾಗಿದೆ. ದೇಗುಲದ ಉತ್ತರ ದಿಕ್ಕಿನಲ್ಲಿ ಗೇಟ್ ಕೂರಿಸಲು ಮೊಳೆ ಹೊಡೆಯಲಾಗಿದೆ. ಭಕ್ತರು ಸರತಿ ಸಾಲಿನಲ್ಲಿ ಹೋಗಲು ತಂತಿ ಬೇಲಿ ನಿರ್ಮಿಸಲು ಮುಂದಾಗಿರೋ ಧಾರ್ಮಿಕ ದತ್ತಿ ಇಲಾಖೆ. ಇದೀಗ ಸ್ಮಾರಕಗಳಿಗೆ ಧಕ್ಕೆ ತಂದಿದ್ದಕ್ಕೆ ಪುರಾತತ್ವ ಇಲಾಖೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ವರ್ಷಪೂರ್ತಿ ಸುವರ್ಣ ಸಂಭ್ರಮದಲ್ಲಿ ಕರ್ನಾಟಕ: ಕನ್ನಡ ಜ್ಯೋತಿ ರಥಯಾತ್ರೆಗೆ ಹಂಪಿಯಲ್ಲಿಂದು ಸಿಎಂ ಚಾಲನೆ