
ಬೆಂಗಳೂರು(ಡಿ.08): ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಐಸಿಸ್ ಉಗ್ರ ಸಂಘಟನೆ ಜತೆಗೆ ಸಂಪರ್ಕ ಇರುವ ಮುಸ್ಲಿಂ ಮೌಲ್ವಿ ಕುಳಿತಿದ್ದರು ಎನ್ನಲಾದ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರವು ಎನ್ಐಎಗೆ ಒಪ್ಪಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಜತೆಗೆ ವೇದಿಕೆ ಹಂಚಿಕೊಂಡ ಮೌಲ್ವಿಯ ವಿರುದ್ಧ ವಿಜಯಪುರದಲ್ಲಿ ಪ್ರಚೋದನಾತ್ಮಕ ಭಾಷಣ ಮಾಡಿದ ಬಗ್ಗೆ ಪ್ರಕರಣಗಳು ದಾಖಲಾಗಿವೆ. ಅವರಿಗೆ ಐಎಸ್ಐ ಸಂಪರ್ಕ ಇರುವ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಮುಖ್ಯಮಂತ್ರಿ ಗಳು ದಾರಿ ತಪ್ಪಿಸುವ ಕೆಲಸ ಮಾಡಿದ್ದಾರೆ. ರಾಜ್ಯ ಸರ್ಕಾರ ಈ ಪ್ರಕರಣವನ್ನು ಎನ್ಐಎಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.
ಬಜೆಟ್‌ನ ಎಷ್ಟು ಘೋಷಣೆಗಳು ಜಾರಿಗೆ ಬಂದಿವೆ?: ಸರ್ಕಾರಕ್ಕೆ ಬೊಮ್ಮಾಯಿ ಪ್ರಶ್ನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಮುಸ್ಲಿಂ ಸಮುದಾಯಕ್ಕೆ10 ಸಾವಿರ ಕೋಟಿ ರು. ಅನುದಾನ ನೀಡುವುದಾಗಿ ಹೇಳಿರುವುದು ಓಲೈಕೆ ರಾಜಕಾರಣದ ಮುಂದುವರೆದ ಭಾಗ. ಅಲ್ಲದೇ ಪ್ರಚೋದನಾಕಾರಿಯಾಗಿಯೂ ಇದೆ. ಮುಖ್ಯಮಂತ್ರಿಗಳು ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗಬೇಕು. ದೇಶದ ಸಂಪತ್ತನ್ನು ಬೆಳೆಸಲು ಎಲ್ಲರೂ ದುಡಿಯಬೇಕು. ಅದರ ಬದಲು ಒಂದು ಸಮುದಾಯಕ್ಕೆ ಸಂಪತ್ತು ಹಂಚಿಕೆ ಮಾಡುವ ಬಗ್ಗೆ ಹೇಳುತ್ತಾರೆ. ಇದು ಸಮಾಜ ಒಡೆಯುವ ಕೆಲಸ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ