ಅತ್ಯಾಚಾರ ದೂರು ನೀಡಿದ ಕಾಂಗ್ರೆಸ್‌ ನಾಯಕಿ ನವ್ಯಶ್ರೀಗೆ ವೈದ್ಯಕೀಯ ಪರೀಕ್ಷೆ

Published : Jul 26, 2022, 05:00 AM IST
ಅತ್ಯಾಚಾರ ದೂರು ನೀಡಿದ ಕಾಂಗ್ರೆಸ್‌ ನಾಯಕಿ ನವ್ಯಶ್ರೀಗೆ ವೈದ್ಯಕೀಯ ಪರೀಕ್ಷೆ

ಸಾರಾಂಶ

ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಕುಮಾರ ಟಾಕಳೆ ಹಾಗೂ ಕಾಂಗ್ರೆಸ್‌ ಯುವ ನಾಯಕಿ ನವ್ಯಶ್ರೀ ನಡುವಿನ ಆರೋಪ ಮತ್ತು ಪ್ರತ್ಯಾರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ನವ್ಯಶ್ರೀ ಪೊಲೀಸ್‌ ಠಾಣೆಗೆ ಆಗಮಿಸಿ ವಿಚಾರಣೆಗೆ ಹಾಜರಾದರು. ಅಲ್ಲದೇ ಪೊಲೀಸರು ನವ್ಯಶ್ರೀಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದ್ದಾರೆ.

ಬೆಳಗಾವಿ (ಜು.26): ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಕುಮಾರ ಟಾಕಳೆ ಹಾಗೂ ಕಾಂಗ್ರೆಸ್‌ ಯುವ ನಾಯಕಿ ನವ್ಯಶ್ರೀ ನಡುವಿನ ಆರೋಪ ಮತ್ತು ಪ್ರತ್ಯಾರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ನವ್ಯಶ್ರೀ ಪೊಲೀಸ್‌ ಠಾಣೆಗೆ ಆಗಮಿಸಿ ವಿಚಾರಣೆಗೆ ಹಾಜರಾದರು. ಅಲ್ಲದೇ ಪೊಲೀಸರು ನವ್ಯಶ್ರೀಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದ್ದಾರೆ.

ರಾಜಕುಮಾರ ಟಾಕಳೆ ವಿರುದ್ಧ ನವ್ಯಶ್ರೀ ನೀಡಿದ ದೂರಿನ ಸಂಬಂಧ ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ. ಜುಲೈ 23ರಂದು ಅತ್ಯಾಚಾರ, ಕಿಡ್ನಾಪ್‌, ಗರ್ಭಪಾತ, ಹನಿಟ್ರ್ಯಾಪ್‌, ಜೀವಬೆದರಿಕೆ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಅತ್ಯಾಚಾರ, ಗರ್ಭಪಾತ ಪ್ರಕರಣ ಹಿನ್ನೆಲೆ ನವ್ಯಶ್ರೀಗೆ ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲಾಗಿದ್ದು, ಎರಡು ದಿನಗಳ ಕಾಲ ವೈದ್ಯಕೀಯ ಪರೀಕ್ಷೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಅಲ್ಲದೇ ಹಲ್ಲೆ ಮಾಡಿ ಬೆದರಿಕೆ, ಕಿಡ್ನಾಪ್‌ ಮಾಡಿದ ಆರೋಪ ಹಿನ್ನೆಲೆಯಲ್ಲಿ ನವ್ಯಶ್ರೀಯನ್ನು ಸ್ಥಳ ಮಹಜರುಗೆ ಕರೆದುಕೊಂಡು ಹೋಗುವ ಸಾಧ್ಯತೆ ಇದೆ.

ನವ್ಯಶ್ರೀ ಜತೆ ಮದುವೆ ಆದ ಫೋಟೋ ಡಿಲಿಟ್ ಮಾಡಿದ್ನಾ ರಾಜಕುಮಾರ?: ಕಾಂಗ್ರೆಸ್ ಕಾರ್ಯಕರ್ತೆ ನೀಡಿದ ದೂರಿನಲ್ಲೇನಿದೆ?

ವಿಚಾರಣೆಗೆ ಹಾಜರಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನವ್ಯಶ್ರೀ , ರಾಜಕುಮಾರ ಟಾಕಳೆ ವಿರುದ್ಧ ದೂರು ನೀಡಿದ್ದು ಪೊಲೀಸರ ತನಿಖೆಗೆ ಸಹಕರಿಸಬೇಕಿದೆ. ಸತ್ಯವನ್ನು ಹೊರ ತರುತ್ತೇನೆ. ತೋಟಗಾರಿಕೆ ಇಲಾಖೆಯ ಅಧಿಕಾರಿ ರಾಜಕುಮಾರ ಟಾಕಳೆಯಿಂದ ನನಗೆ ಆದ ಅನ್ಯಾಯದ ವಿರುದ್ಧ ಈಗಾಗಲೇ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ಪೊಲೀಸರಿಗೆ ಸಹಕಾರ ನೀಡುವ ನಿಟ್ಟಿನಲ್ಲಿ ನಾನು ಬಂದಿದ್ದೇನೆ. ಸತ್ಯಾಸತ್ಯತೆ ಬಯಲಿಗೆ ತಂದು ರಾಜಕುಮಾರನಿಗೆ ಶಿಕ್ಷೆಯಾಗುವ ಹಾಗೆ ಮಾಡುತ್ತೇನೆ ಎಂದರು. ಪೊಲೀಸರು ಸ್ಥಳ ಮಹಜರ, ವೈದ್ಯಕೀಯ ತಪಾಸಣೆ ನಡೆಸಬೇಕಿದೆ. ಆದ್ದರಿಂದ ಈ ಪ್ರಕರಣದಲ್ಲಿ ನಾನು ಸಂಪೂರ್ಣ ತನಿಖೆಗೆ ಸಹಕಾರ ನೀಡುವೆ ಎಂದು ತಿಳಿಸಿದರು.

ನನ್ನ ವಿರುದ್ಧದ ಷಡ್ಯಂತ್ರದ ಹಿಂದೆ ಚೆನ್ನಪಟ್ಟಣದ ಮಹಾನಾಯಕ ಇದ್ದಾನೆ: ತಮ್ಮ ವಿರುದ್ಧದ ಬ್ಲಾಕ್ ಮೇಲ್ ಹಾಗೂ ವಂಚನೆ ಪ್ರಕರಣದ ಬಗ್ಗೆ ಕಾಂಗ್ರೆಸ್ ಯುವ ನಾಯಕಿ ನವ್ಯಶ್ರೀ ಪ್ರತಿಕ್ರಿಯಿಸಿದ್ದು, ಹೊಸ ಬಾಂಬ್ ಸಿಡಿಸಿದ್ದಾರೆ. ನವ್ಯಶ್ರೀ ಹಾಗೂ ತೋಟಗಾರಿಕೆ ಉಲಾಖೆಯ ಸಹಾಯಕ ನಿರ್ದೇಶಕ ರಾಜಕುಮಾರ್ ಟಾಕಳೆ ತಿಕ್ಕಾಟ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಹೌದು! ನವ್ಯಶ್ರೀ ರಾಸಲೀಲೆ ವಿಡಿಯೋ ಹರಿಬಿಟ್ಟರುವುದರ ಹಿಂದೆ ಕಾಂಗ್ರೆಸ್ ಮಹಾನಾಯಕರೊಬ್ಬರ ಕೈವಾಡವಿದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಆದ್ರೆ, ನವ್ಯಶ್ರೀ ಆ ಮಹಾನಾಯಕನ ಹೆಸರು ಹೇಳಿಲ್ಲ.ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಅತೃಪ್ತ ಶಾಸಕರ ಬಗ್ಗೆ ಅರ್ಧರಾತ್ರಿಯಲ್ಲಿ ಕೈ ನಾಯಕರಿಗೆ ಮಾಹಿತಿ ಕೊಡ್ತಿದ್ದೆ, ಮುಂಬೈ ರಹಸ್ಯ ಬಿಚ್ಚಿಟ್ಟ ನವ್ಯಶ್ರೀ

ಈ ಬಗ್ಗೆ ಬೆಳಗಾವಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ನವ್ಯಶ್ರೀ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ಹಾಗೂ ರಾಷ್ಟ್ರೀಯ ನಾಯಕರ ಜತೆ ಇರುವ ಫೋಟೋ ಇಟ್ಟುಕೊಂಡು ಅಪಪ್ರಚಾರ ಮಾಡಲಾಗುತ್ತಿದೆ. ರಾಜಕುಮಾರ್ ಟಾಕಳೆ ಹಾಗೂ ನನ್ನ ನಡುವಿನ ಕಿತ್ತಾಟದ ಹಿಂದೆ ಕಾಂಗ್ರೆಸ್ ನ ಮಹಾನಾಯಕರೊಬ್ಬರಿದ್ದಾರೆ. ಅವರು ಟಾಕಳೆಯನ್ನು ದಾಳವನ್ನಾಗಿ ಮಾಡಿಕೊಂಡು ಷಡ್ಯಂತ್ರ ನಡೆಸಿದ್ದಾರೆ ಎಂದು ಆರೋಪಿಸಿದರು. ಇದೆಲ್ಲದರ ಹಿಂದೆ ಇರುವವರು ಚೆನ್ನಪಟ್ಟಣದ ಕಾಂಗ್ರೆಸ್ ಮಹಾನಾಯಕ. ಅವರು ಮುಂದಿನ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗುವ ತವಕದಲ್ಲಿದ್ದಾರೆ.  ಅವರ ಜತೆ ಪತ್ರಿಕಾ ಸಂಪಾದಕರೊಬ್ಬರಿದ್ದಾರೆ. ಅವರ ಹೆಸರನ್ನು ನಾನು ಹೇಳಲ್ಲ. ತನಿಖೆ ಬಳಿಕ ಎಲ್ಲರ ಮುಖವಾಡ ಕಳಚಲಿದೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮೈಸೂರು ಅರಮನೆ ಬಳಿ ಸ್ಫೋಟ ಪ್ರಕರಣ; ಸಾವಿನ ಸಂಖ್ಯೆ 3ಕ್ಕೆ ಏರಿಕೆ, ಸಲೀಂ ಮೇಲೆ ಅನುಮಾನ
ಹಾವೇರಿ: ಅಕ್ಕಿ ಕಳ್ಳರ ಪಾಲಾಗುತ್ತಿದೆ ಬಡವರ 'ಅನ್ನಭಾಗ್ಯ'; ಸಿಎಂ ಸಿದ್ದರಾಮಯ್ಯ ಅವರೇ ಇಲ್ನೋಡಿ!