
ಬೆಂಗಳೂರು(ಮೇ.29): ಕೊರೋನಾ ವೈರಸ್ ಸೋಂಕು ನಿಯಂತ್ರಣಕ್ಕಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತೂಡೂರು ದೊಡ್ಡಮನೆಯಲ್ಲಿರುವ ವೆಂಕಟರಮಣಸ್ವಾಮಿ ದೇವಸ್ಥಾನಕ್ಕೆ ವಿಶೇಷ ಪೂಜೆ ಸಲ್ಲಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ದೇವಸ್ಥಾನದ ಧರ್ಮಾಧಿಕಾರಿ ಟಿಡಿಆರ್ ಹರಿಶ್ಚಂದ್ರಗೌಡ ಮನವಿ ಮಾಡಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿಯವರಿಗೆ ಪತ್ರ ಬರೆದಿರುವ ಅವರು ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರೆ ಕೊರೋನಾ ಸೋಂಕು ನಿವಾರಣೆಯಾಗಲಿದೆ. ಸರ್ಕಾರಕ್ಕೂ ಹೆಚ್ಚಿನ ಬಲ ಬಂದಂತಾಗುತ್ತದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅಥವಾ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪೂಜೆ ಮಾಡಿಸದಿದ್ದರೆ ಸಂಕಷ್ಟ ಹೆಚ್ಚಾಗಲಿದೆ ಎಂದು ಬರೆದಿದ್ದಾರೆ.
'ಚೆಕ್‌ಪೋಸ್ಟ್‌ನಲ್ಲಿ ಕಣ್ತಪ್ಪಿಸಿ ಬಂದವರಿಗೆ ಹೋಂ ಕ್ವಾರಂಟೈನ್'
ಕೊರೋನಾ ಸೋಂಕಿನ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ಅವರಿಗೆ 2019 ಡಿಸೆಂಬರ್ 23ರಂದು ಪತ್ರ ಬರೆದು ಮುಂಚಿತವಾಗಿಯೇ ತಿಳಿಸಲಾಗಿತ್ತು. ಕೊರೋನಾ ನಿಯಂತ್ರಣಕ್ಕೆ ಪ್ರಾರ್ಥಿಸಿ ವೆಂಕಟರಮಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಬೇಕೆಂದು ಮನವಿ ಮಾಡಿಕೊಂಡಿದ್ದರೂ ಅಮಿತ್ ಶಾ ಅವರು ಕೋರಿಕೆ ಮನ್ನಿಸಲಿಲ್ಲ. ಕೊರೋನಾ ಬಗ್ಗೆ ಏನು ಕ್ರಮ ತೆಗೆದುಕೊಂಡಿಲ್ಲ ಎಂದು ಅವರು ಪತ್ರದಲ್ಲಿ ಆರೋಪಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ