ಹಾಸನಾಂಬೆ ದರ್ಶನ: ಮೈಮೇಲೆ ದೇವಿ ಬಂದಿದ್ದಾಳೆ ಎಂದು ಕಿರುಚಾಡಿದ ಮಹಿಳೆ!

Kannadaprabha News, Ravi Janekal |   | Kannada Prabha
Published : Oct 13, 2025, 08:39 AM IST
Hasanamba darshan incident

ಸಾರಾಂಶ

Hasanamba darshan incident: ಹಾಸನಾಂಬೆ ದೇವಿಯ ದರ್ಶನಕ್ಕಾಗಿ ಧರ್ಮದರ್ಶನದ ಸಾಲಿನಲ್ಲಿ ನಿಂತಿದ್ದ ಮಹಿಳೆಯೊಬ್ಬಳು, ತನ್ನ ಮೈಮೇಲೆ ದೇವಿ ಬಂದಂತೆ ವರ್ತಿಸಿ ಕಿರುಚಾಡಿದಳು. ‘ನಾನು ದೇವಿ, ಬೇರೆ ದಾರಿಯಿಂದ ಹೋಗಬೇಕು’ ಎಂದು ಕೂಗಾಡಿದ ಆಕೆಯನ್ನು ಪೊಲೀಸರು ಆಗಮಿಸಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದರು.

ಹಾಸನ (ಅ.13): ಹಾಸನಾಂಬೆ ದೇವಿಯ ದರ್ಶನಕ್ಕಾಗಿ ಬಂದಿದ್ದ ಮಹಿಳೆಯೊಬ್ಬಳು ಧರ್ಮದರ್ಶನದ ಸಾಲಿನಲ್ಲಿ ಹೋಗುತ್ತಿದ್ದಾಗ ಏಕಾಏಕಿ ಮೈಮೇಲೆ ದೇವಿ ಬಂದಂತೆ ವರ್ತಿಸಿದ ಘಟನೆ ಭಾನುವಾರ ಸಂಭವಿಸಿದೆ.

ದರ್ಶನದ ಸಾಲಿನಲ್ಲಿ ನಿಂತಿದ್ದಾಗಲೇ ಮಹಿಳೆ ಇದ್ದಕ್ಕಿದ್ದಂತೆ ತಲೆಯನ್ನು ಎತ್ತಿಕೊಂಡು ಕಿರುಚಾಡಲು ಆರಂಭಿಸಿದಳು. ‘ನಾನು ದೇವಿ ಬಂದಿದ್ದೀನಿ, ಇಲ್ಲಿ ಹೋಗಲು ಆಗುತ್ತಿಲ್ಲ. ಎಲ್ಲರೂ ನನ್ನನ್ನು ಅಪಹಾಸ್ಯ ಮಾಡುತ್ತಿದ್ದಾರೆ. ನಾನು ಬೇರೆ ದಾರಿಯಿಂದ ಹೋಗಬೇಕು’ ಎಂದು ಕೂಗಿದಳು. ಸ್ಥಳದಲ್ಲಿದ್ದ ಕೆಲವು ಯುವಕರು ಈ ದೃಶ್ಯ ನೋಡಿ ಶಿಳ್ಳೆ ಹಾಕಿ ಚಪ್ಪಾಳೆ ತಟ್ಟಿದರು. ಮಹಿಳೆಯನ್ನು ಸಮಾಧಾನಪಡಿಸಲು ಸುತ್ತಲಿನವರು ಹಾಗೂ ಮತ್ತೊಬ್ಬ ಮಹಿಳೆ ಮುಖಕ್ಕೆ ನೀರು ಚಿಮುಕಿಸಿದರು. ಆದರೆ, ಮಹಿಳೆ ಸಮಾಧಾನಗೊಳ್ಳದೆ ನೆಲದಲ್ಲೇ ಕುಳಿತು ತಲೆ ಅಲ್ಲಾಡಿಸುತ್ತಾ ಮಾತು ಮುಂದುವರಿಸತೊಡಗಿದಳು.

ಇದನ್ನೂ ಓದಿ: 20 ರಿಂದ ನವೆಂಬರ್ 1ರವರೆಗೆ ಮಂಗ್ಳೂರಿನಲ್ಲಿ ಗೋವಿಗೆ ಸಂಗೀತ ಸೇವೆ ಆಚರಣೆ

ಆಗ ಪೊಲೀಸರು ಆಗಮಿಸಿ, ಧರ್ಮದರ್ಶನದ ಸಾಲಿನಲ್ಲೇ ಮಹಿಳೆಯನ್ನು ಶಾಂತವಾಗಿ ಕರೆದೊಯ್ದು ಸುರಕ್ಷಿತ ಸ್ಥಳಕ್ಕೆ ಸಾಗಿಸಿದರು.

ನಂತರ ಪರಿಸ್ಥಿತಿ ಸಾಮಾನ್ಯಗೊಂಡಿತು. ಮಹಿಳೆ ಯಾವುದೇ ಅಸಭ್ಯ ವರ್ತನೆ ಅಥವಾ ಅಪಾಯಕಾರಿ ಸ್ಥಿತಿಯಲ್ಲಿ ಇರಲಿಲ್ಲ. ಕ್ಷಣಿಕ ಭಾವನಾತ್ಮಕ ಉದ್ರೇಕದಿಂದ ಹೀಗೆ ವರ್ತಿಸಿದ್ದು ಎಂದು ತಿಳಿದು ಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಯಚೂರು: ರಸ್ತೆಯಲ್ಲಿ ಹೋಗುತ್ತಿದ್ದ ಹಾವು ಹಿಡಿದು ಬೈಕ್ ಸವಾರ ಹುಚ್ಚಾಟ, ವಿಡಿಯೋ ವೈರಲ್
ರೈತನಿಗೆ ಪರಿಹಾರ ನೀಡದ ಶಿವಮೊಗ್ಗ ಡಿಸಿ ಕಚೇರಿ, ಕಾರು ಜಪ್ತಿಗೆ ಕೋರ್ಟ್ ಆದೇಶ! ಏನಿದು ಪ್ರಕರಣ?