ಪುತ್ರ ಪ್ರಜ್ವಲ್ ಹೆಸರಲ್ಲಿ ಚಾಮುಂಡೇಶ್ವರಿಗೆ ಅರ್ಚನೆ ಮಾಡಿಸಿದ ಹೆಚ್‌ಡಿ ರೇವಣ್ಣ

Published : May 14, 2024, 10:37 PM ISTUpdated : May 14, 2024, 10:43 PM IST
ಪುತ್ರ ಪ್ರಜ್ವಲ್ ಹೆಸರಲ್ಲಿ ಚಾಮುಂಡೇಶ್ವರಿಗೆ ಅರ್ಚನೆ ಮಾಡಿಸಿದ ಹೆಚ್‌ಡಿ ರೇವಣ್ಣ

ಸಾರಾಂಶ

ನ್ಯಾಯಾಂಗದ ಬಗ್ಗೆ ನನಗೆ ಗೌರವ ಇದೆ. ದೇವರು ಹಾಗೂ ಈ ರಾಜ್ಯದ ಜನರ ಮೇಲೆ ನಂಬಿಕೆ ಇದೆ ಎಂದು ಹೊಳೆನರಸೀಪುರ ಶಾಸಕ ಎಚ್‌ಡಿ ರೇವಣ್ಣ ತಿಳಿಸಿದರು. ಜೈಲಿನಿಂದ ಬಿಡುಗಡೆ ಆಗ್ತಿದ್ದಂತೆ ಇಂದು ಚಾಮುಂಡೇಶ್ವರಿ ದರ್ಶನ ಪಡೆದರು. ಹೆಚ್‌.ಡಿ ರೇವಣ್ಣ ಆಗಮನದ ಹಿನ್ನೆಲೆ ಹೆಚ್ಚಿನ ಪೊಲೀಸ್ ಭದ್ರತೆ ನಿಯೋಜಿಸಲಾಗಿತ್ತು.

ಮೈಸೂರು (ಮೇ.14) ನ್ಯಾಯಾಂಗದ ಬಗ್ಗೆ ನನಗೆ ಗೌರವ ಇದೆ. ದೇವರು ಹಾಗೂ ಈ ರಾಜ್ಯದ ಜನರ ಮೇಲೆ ನಂಬಿಕೆ ಇದೆ ಎಂದು ಹೊಳೆನರಸೀಪುರ ಶಾಸಕ ಎಚ್‌ಡಿ ರೇವಣ್ಣ ತಿಳಿಸಿದರು.

ಜೈಲಿನಿಂದ ಬಿಡುಗಡೆ ಆಗ್ತಿದ್ದಂತೆ ಇಂದು ಚಾಮುಂಡೇಶ್ವರಿ ದರ್ಶನ ಪಡೆದರು. ಗರ್ಭಗುಡಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಂಕಷ್ಟದಿಂದ ಪಾರು ಮಾಡುವಂತೆ ದೇವಿಯ ಮೊರೆ ಹೋದರು. ಈ ವೇಳೆ ಮಾಜಿ ಸಚಿವ ಸಾರಾ ಮಹೇಶ್, ಸಿಎಸ್ ಪುಟ್ಟರಾಜು, ಎಂಎಲ್‌ಸಿ ಮಂಜೇಗೌಡ ಜೊತೆಗಿದ್ದರು. ಚಾಮುಂಡೇಶ್ವರಿ ದರ್ಶನ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ತಾಯಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದೇನೆ. ನನ್ನ 40 ವರ್ಷದ ರಾಜಕೀಯದಲ್ಲಿ ನನ್ನ ಮೇಲೆ ಇದೇ ಮೊದಲ ಬಾರಿ ಕೇಸ್ ಆಗಿದೆ. ನನ್ನ ಮೇಲೆ ಉದ್ದೇಶಪೂರ್ವಕವಾಗಿ ಪ್ರಕರಣ ದಾಖಲಿಸಿದ್ದಾರೆ. ಅದನ್ನ ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ.  ಚಾಮುಂಡೇಶ್ವರಿ ಏನು ಕರುಣೆ ತೋರಿಸುತ್ತಾಳೆ ನೋಡೋಣ. ನ್ಯಾಯಾಲಯದಲ್ಲಿ ಪ್ರಕರಣ ನಡೆಯುತ್ತಿರುವುದರಿಂದ ನಾನು ಪ್ರಕರಣದ ಬಗ್ಗೆ ಏನೂ ಮಾತನಾಡೊಲ್ಲ ಎಂದರು.

'ನನ್ನ ಯಾರೂ ಕಿಡ್ನಾಪ್ ಮಾಡಿಲ್ಲ, ನಾಲ್ಕು ದಿನ ನೆಂಟರ ಮನೆಗೆ ಬಂದಿದ್ದೇನೆ' ಸಂತ್ರಸ್ತೆ ಮಹಿಳೆ ವಿಡಿಯೋ ವೈರಲ್!

ಪ್ರಜ್ವಲ್ ಹೆಸರಲ್ಲಿ ಅರ್ಚನೆ ಮಾಡಿಸಿದ ಹೆಚ್‌ಡಿ ರೇವಣ್ಣ

ಹಾಸನ ಪೆನ್‌ಡ್ರೈವ್ ಪ್ರಕರಣದಲ್ಲಿ ಸಿಲುಕಿ ದೇಶ ತೊರೆದಿರುವ ಪುತ್ರ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹೆಸರಲ್ಲಿ ಚಾಮುಂಡೇಶ್ವರಿ ದೇವಿಗೆ ಅರ್ಚನೆ ಮಾಡಿಸಿದರು. ಈ ಪ್ರಕರಣದಿಂದ ಇಡೀ ಕುಟುಂಬವೇ ಸಂಕಷ್ಟಕ್ಕೀಡಾಗಿದೆ. ಈ ಹಿನ್ನೆಲೆ ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ, ಕುಟುಂಬದ ಪ್ರತಿಯೊಬ್ಬರ ಹೆಸರು ಹಾಗೂ ನಕ್ಷತ್ರ ಹೇಳಿ ಅರ್ಚನೆ ಮಾಡಿಸಿದರು. ಬಳಿಕ ದೇವಾಲಯದಲ್ಲಿ ಸುಮಾರು ಹತ್ತು ನಿಮಿಷಗಳ ಕಾಲ ಏಕಾಂಗಿಯಾಗಿ ಕುಳಿತು ದೇವಿಯ ಪ್ರಾರ್ಥನೆ ಮಾಡಿದರು.

ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಮತ್ತೊಂದು ತಿರುವು! ಶಾಸಕ ಎ ಮಂಜು ಕೈವಾಡ?

ಮಾಧ್ಯಮಕ್ಕೆ ಮಾಹಿತಿ ನೀಡಲು ವಾಸ್ತು ನೋಡಿದ್ರ ರೇವಣ್ಣ?

ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದ ಬಳಿಕ ಎದುರಾದ ಮಾಧ್ಯಮಗಳೊಂದಿಗೆ ಮಾತನಾಡಿರು. ಪ್ರಜ್ವಲ್ ರೇವಣ್ಣ ಪ್ರಕರಣ ಸಂಬಂಧ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಪೂರ್ವ ದಿಕ್ಕಿನಲ್ಲಿ ನಿಂತು ಪ್ರತಿಕ್ರಿಯಿಸಿದರು. ಈ ದೇವಸ್ಥಾನದ ಎಡಭಾಗದಲ್ಲಿ ನಿಂತಿದ್ದ ಮಾಧ್ಯಮ ಪ್ರತಿನಿಧಿಗಳು. ಎಷ್ಟೇ ಕರೆದರೂ ಪ್ರತಿಕ್ರಿಯಿಸಲು ಬರಲಿಲ್ಲ. ಬಳಿಕ ದೇವಾಲಯದ ಮುಖ್ಯ ದ್ವಾರದ ಮುಂದೆ ಪೂರ್ವ ದಿಕ್ಕಿಗೆ ನಿಂತು ಪ್ರತಿಕ್ರಿಯಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ