ಹಾಸನ (ಜೂ.11) : ರಾಜ್ಯದಲ್ಲಿ ಹಣಕಾಸು ಸ್ಥಿತಿ ಹದಗೆಟ್ಟಿದೆ. ಆದರೂ ಬಡವರಿಗೆ ತೊಂದರೆ ಆಗಬಾರದು ಎಂಬ ದೃಷ್ಠಿಯಲ್ಲಿ ಅವರ ಅನುಕೂಲಕ್ಕಾಗಿ ಪ್ಯಾಕೇಜ್ ಘೋಷಣೆ ಮಾಡಿದ್ದೇನೆ ಎಂದು ಹಾಸನದಲ್ಲಿಂದು ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದರು.
ಹಾಸನದ ಹೊರವಲಯದ ಬೂವನಹಳ್ಳಿ ಹೆಲಿಪ್ಯಾಡಿಗೆ ಇಂದು ಭೇಟಿ ನೀಡಿದ ಸಿಎಂ ದೇವೇಗೌಡರ ಅಪೇಕ್ಷೆಯಂತೆ ಸದ್ಯದಲ್ಲೇ ಹಾಸನ ಏರ್‌ಪೋರ್ಟ್ ಕೆಲಸ ಆರಂಭಿಸುವುದಾಗಿ ಭರವಸೆ ನೀಡಿದರು. ಅಲ್ಲದೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ದೇವೇಗೌಡರ ಜತೆ ನಾಳೆ ಮಾತನಾಡುತ್ತೇನೆ. ದೇವೇಗೌಡರು ಕೇಳಿದವರಿಗೆ ಟೆಂಡರ್ ನೀಡಲಾಗುವುದು ಎಂದು ಹೇಳಿದರು.
ನಾಯಕತ್ವ ಬದಲಾವಣೆ ಚರ್ಚೆ: ಬಿಜೆಪಿ ಶಾಸಕರುಗಳಿಗೆ ಸ್ಪಷ್ಟ ಸಂದೇಶ ಕೊಟ್ಟ ಸಿಎಂ ...
ಹಾಸನ ಜಿಲ್ಲೆ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಪ್ರಮಾಣ ಹೆಚ್ಚಿದೆ. ಹಾಸನ ಜಿಲ್ಲೆಯ ಶಾಸಕರು ಕೋವಿಡ್ ಪ್ರಮಾಣವನ್ನು ಶೇ.5ಕ್ಕೆ ಇಳಿಸುವುದಾಗಿ ಭರವಸೆ ನೀಡಿದ್ದಾರೆ ಎಂದರು.
ರೇವಣ್ಣ ವಿರುದ್ಧ ಗರಂ : ಕೋವಿಡ್‌ನಿಂದ ಜನ ಸಾವಿಗೀಡಾಗುತ್ತಿರುವುದಕ್ಕೆ ಸರ್ಕಾರವೇ ಕಾರಣ ಎನ್ನುವ ರೇವಣ್ಣ ಜವಬ್ದಾರಿಯುತ ಶಾಸಕರಾಗಿ ಬೇಜವಬ್ದಾರಿ ಹೇಳಿಕೆ ನೀಡಬಾರದು. ಅವರೂ ಕೂಡ ಶಾಸಕರಾಗಿ ಕೆಲಸ ನಿರ್ವಹಿಸಬೇಕಿದೆ. ಅವರ ಕೆಲಸ ಸಮರ್ಪಕವಾಗಿ ನಿರ್ವಹಿಸದೆ ಬೇರೆಯವರ ಬಗ್ಗೆ ಬೆರಳು ತೋರಿಸಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಯಡಿಯೂರಪ್ಪ ಪರ ಸಹಿ ಸಂಗ್ರಹ: ಬಿಜೆಪಿಯಲ್ಲಿ ಭುಗಿಲೆದ್ದ ಆಕ್ರೋಶ .
ಇನ್ನು ಇದೇ ವೇಳೆ ಕೋವಿಡ್ ಮೂರನೇ ಅಲೆ ಬಗ್ಗೆ ಮಾತನಾಡಿದ ಸಿಎಂ ಯಾವುದೇ ಅನಾಹುತ ಆಗದಂತೆ ಈಗಾಗಲೇ ಸಿದ್ಧತೆ ಮಾಡುತ್ತಿದ್ದೇವೆ. ಕೋವಿಡ್ ಬಗ್ಗೆ ಸುಳ್ಳು ಲೆಕ್ಕ ಕೊಡುತ್ತಿದ್ದಾರೆ ಎನ್ನುವ ಬಗ್ಗೆ ಮಾತನಾಡಿದ ಸಿಎಂ ಕೋವಿಡ್ ಕುರಿತಂತೆ ಸುಳ್ಳು ಲೆಕ್ಕ ಕೊಡುತ್ತೇವೆ ಅಂದಿದ್ದು ಯಾರು..? ಇಂತಹ ಲೆಕ್ಕ ಕೊಡುವುದರಿಂದ ನಮಗೇನು ಲಾಭವಿದೆ ಎಂದು ಪ್ರಶ್ನೆ ಮಾಡಿದರು.
ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ ಮಾಡಿದ್ದು, ರೈತರಿಗೆ ಕೊಡಬೇಕಾದ ಬಾಕಿ ಹಣವನ್ನು ಶೀಘ್ರವಾಗಿ ಬಿಡುಗಡೆ ಮಾಡುತ್ತೇವೆ. ಇದಕ್ಕೆ ಯಾವುದೆ ಹಣದ ಕೊರತೆ ಇಲ್ಲ. ಆಲೂರು- ಸಕಲೇಶಪುರ ತಾಲೂಕು ಭಾಗದಲ್ಲಿರುವ ಆನೆ ಹಾವಳಿ ಹೆಚ್ಚಿದ್ದು, ಹಾಸನ ಕೊಡಗು ಮಧ್ಯೆ ರೈಲ್ವೆ ಹಳಿಗಳ ಬ್ಯಾರಿಕೇಡ್ ಹಾಕಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದರು.
ಸಿಎಂ ಬದಲಾವಣೆ ಇಲ್ಲ : ಇನ್ನು ರಾಜ್ಯ ರಾಜಕೀಯದ ಬಗ್ಗೆಯೂ ಮಾತನಾಡಿದ ಸಿಎಂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರೆ ಯಡಿಯೂರಪ್ಪ ಅವರೆ ಇನ್ನೂ ಎರಡು ವರ್ಷ ಸಿಎಂ ಎಂದು ಹೇಳಿದ್ದಾರೆ. ಇದರ ನಂತರವೂ ಸಿಎಂ ಬದಲಾವಣೆಯ ಪ್ರಶ್ನೆಯೇ ಇಲ್ಲ, ಆ ಚರ್ಚೆ ಅಪ್ರಸ್ತುತ ಎಂದು ಸಿಎಂ ಸ್ಪಷ್ಟನೆ ನೀಡಿದರು.