ಲೋಕಸಭಾ ಚುನಾವಣೆ 2024: ಹಾಸನ ಅಭ್ಯರ್ಥಿ ರಾಸಲೀಲೆ ಪೆನ್‌ಡ್ರೈವ್ ಸದ್ದು..!

ಕಳೆದ ಮೂರು ದಿನಗಳಿಂದ ಏಕಾಏಕಿ ಈ ಪೆನ್ ಡ್ರೈವ್ ಬಗ್ಗೆ ಚರ್ಚೆ ಆರಂಭವಾಗಿದ್ದು, ಅಂತೆ ಕಂತೆಗಳು ಹರಿದಾಡುತ್ತಿವೆ. ಆದರೆ, ಈ ವಿಡಿಯೋಗಳನ್ನು ಅತ್ಯಾಧುನಿಕ ಡೀಪ್ ಫೇಕ್ ತಂತ್ರಜ್ಞಾನ ಬಳಸಿ ಮಾಡಲಾಗಿದೆ ಎಂದು ಪ್ರತಿಪಾದಿಸಿರುವ ಅಭ್ಯರ್ಥಿಯ ಬೆಂಬಲಿಗರು ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರನ್ನೂ ದಾಖಲಿಸಿದ್ದಾರೆ.


ಬೆಂಗಳೂರು(ಏ.25): ಹಾಸನ ಲೋಕಸಭಾ ಕ್ಷೇತ್ರದ ರಾಜಕೀಯ ಪಕ್ಷವೊಂದರ ಅಭ್ಯರ್ಥಿಯೊಬ್ಬರಿಗೆ ಸೇರಿದೆ ಎನ್ನಲಾದ ರಾಸಲೀಲೆಯ ಫೋಟೋ ಮತ್ತು ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ಸುದ್ದಿ ಕ್ಷೇತ್ರದಾದ್ಯಂತ ಚುನಾವಣೆಯಲ್ಲಿ ಭಾರಿ ಸಂಚಲನ ಉಂಟು ಮಾಡಿದೆ.

ಕಳೆದ ಮೂರು ದಿನಗಳಿಂದ ಏಕಾಏಕಿ ಈ ಪೆನ್ ಡ್ರೈವ್ ಬಗ್ಗೆ ಚರ್ಚೆ ಆರಂಭವಾಗಿದ್ದು, ಅಂತೆ ಕಂತೆಗಳು ಹರಿದಾಡುತ್ತಿವೆ. ಆದರೆ, ಈ ವಿಡಿಯೋಗಳನ್ನು ಅತ್ಯಾಧುನಿಕ ಡೀಪ್ ಫೇಕ್ ತಂತ್ರಜ್ಞಾನ ಬಳಸಿ ಮಾಡಲಾಗಿದೆ ಎಂದು ಪ್ರತಿಪಾದಿಸಿರುವ ಅಭ್ಯರ್ಥಿಯ ಬೆಂಬಲಿಗರು ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರನ್ನೂ ದಾಖಲಿಸಿದ್ದಾರೆ.

Latest Videos

ನನ್ನಮ್ಮನ ಜೊತೆಯೇ ಗಂಡನ ರಾಸಲೀಲೆ, ಏನ್ಮಾಡೋದು ಕೇಳ್ತಿದ್ದಾಳೆ ಹೆಂಡತಿ?

ಚುನಾವಣೆಯ ಪ್ರಚಾರದ ಭರಾಟೆ ಆರಂಭವಾಗಿ ಇಷ್ಟು ದಿನಗಳ ಬಳಿಕ ಇದೀಗ ಕೊನೆಯ ಹಂತದಲ್ಲಿ ಈ ರಾಸಲೀಲೆಯ ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ಬಗ್ಗೆ ಚರ್ಚೆ ನಡೆಯುತ್ತಿರುವುದು ಕುತೂಹಲ ಮೂಡಿದ್ದು, ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಈ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡದೆ ಶರಣಾಗಿದ್ದಾರೆ.

ಈ ಪೆನ್‌ಡ್ರೈನಲ್ಲಿ ಸುಮಾರು ಸಾವಿರಾರು ವಿಡಿಯೋಗಳಿವೆ ಎನ್ನಲಾಗುತ್ತಿದೆ. ಇದರಲ್ಲಿರುವ ಎನ್ನಲಾದ ಅಭ್ಯರ್ಥಿ ತನ್ನ ಬಳಿ ಸಹಾಯ ಕೇಳಿಕೊಂಡು ಬರುವ ಮಹಿಳೆಯರನ್ನು ತನ್ನ ಲೈಂಗಿಕ ತೃಷೆಗೆ ಬಳಸಿಕೊಳ್ಳುತ್ತಿದ್ದ. ಆ ಲೈಂಗಿಕ ಚಟುವಟಿಕೆಯನ್ನು ತಾನೇ ವಿಡಿಯೋ ಮಾಡಿಟ್ಟುಕೊಳ್ಳುತ್ತಿದ್ದ. ಈಗಾಗಲೇ ಕ್ಷೇತ್ರದ ಹಲವರು ಈ ವಿಡಿಯೋಗಳನ್ನು ನೋಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಅದರ ತುಣುಕುಗಳು ಹರಿದಾಡುತ್ತಿವೆ. ಈ ವಿಡಿಯೋ ತುಣುಕುಗಳಲ್ಲಿ ಕೆಲವು ಸಂಘಟನೆಗಳಿಗೆ ಸೇರಿದ ಮಹಿಳೆಯರು, ಅಭ್ಯರ್ಥಿಯ ಪಕ್ಷದ ಮುಖಂಡರ ಪತ್ನಿಯರು ಇದ್ದಾರೆ. ಮನೆ ಕೆಲಸದ ಮಹಿಳೆಯರೂ ಇದ್ದಾರೆ ಎಂಬ ಚರ್ಚೆ ಬಿರುಸಿನಿಂದ ನಡೆದಿದೆ.

ಈ ಹಿಂದೆ ಹಾಸನದ ವಕೀಲ ದೇವರಾಜೇಗೌಡ ಎಂಬುವವರು ಅಭ್ಯರ್ಥಿಯ ಹಲವು ಅಶ್ಲೀಲ ವಿಡಿಯೋಗಳು ತಮ್ಮ ಬಳಿ ಇವೆ ಎಂದು ಹೇಳಿಕೆ ನೀಡಿದ್ದರು. ಆದರೆ, ಇದೀಗ ಈ ವಿಡಿಯೋಗಳನ್ನು ತಾವು ಬಹಿರಂಗಗೊಳಿಸಿಲ್ಲ ಎಂದು ಸ್ಪಷ್ಟನೆಯನ್ನೂ ನೀಡಿದ್ದಾರೆ.

click me!