ಇಂದಿನಿಂದ ಶ್ರೀ ಹಾಸನಾಂಬೆ ದೇವಿ ದರ್ಶನ; ಮಧ್ಯಾಹ್ನ 12 ನಂತರ ತೆರೆಯಲಿದೆ ದೇವಿಯ ಗರ್ಭಗುಡಿ ಬಾಗಿಲು

Kannadaprabha News, Ravi Janekal |   | Kannada Prabha
Published : Oct 09, 2025, 11:01 AM IST
hassan Hasanamba darshan timings today

ಸಾರಾಂಶ

ಹಾಸನದ ಶ್ರೀ ಹಾಸನಾಂಬೆ ದೇವಿ ದರ್ಶನ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಅ 9 ರಿಂದ ಪ್ರಾರಂಭ. ಭಕ್ತರಿಗೆ ಅಕ್ಟೋಬರ್ 10 ರಿಂದ 23 ರವರೆಗೆ ದರ್ಶನಕ್ಕೆ ಅವಕಾಶ, ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಸೇರಿದಂತೆ ಹಲವು ಗಣ್ಯರು  ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಹಾಸನ (ಅ.9): ಶ್ರೀ ಹಾಸನಾಂಬೆ ದೇವಿ ದರ್ಶನ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಇಂದಿನಿಂದ (ಅ.9) ಪ್ರಾರಂಭವಾಗಲಿದೆ. ಮಧ್ಯಾಹ್ನ 12 ಗಂಟೆಗೆ ಶ್ರೀ ಹಾಸನಾಂಬ ದೇವಿಯ ದೇವಾಲಯದ ಬಾಗಿಲನ್ನು ತೆರೆಯಲಾಗುತ್ತದೆ. ಅ.23ರಂದು ದೇವಾಲಯದ ಬಾಗಿಲನ್ನು ಮುಚ್ಚಲಾಗುತ್ತದೆ. ಭಕ್ತರಿಗೆ ಅ.10ರಿಂದ ಅ.23ರವರೆಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ, ತುಮಕೂರು ಶ್ರೀ ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ.ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ, ಮಾಜಿ ಪ್ರಧಾನಮಂತ್ರಿ ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ.ದೇವೇಗೌಡ, ಕರ್ನಾಟಕ ಸರ್ಕಾರದ ಉಪ ಮುಖ್ಯ ಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರು ಗೌರವ ಉಪಸ್ಥಿತಿವಹಿಸಲಿದ್ದಾರೆ.

ಕಂದಾಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡ, ಮುಜರಾಯಿ ಮತ್ತು ಸಾರಿಗೆ ಸಚಿವರಾದ ರಾಮಲಿಂಗರೆಡ್ಡಿ, ಕರ್ನಾಟಕ ರಾಜ್ಯ ಗೃಹ ಮಂಡಳಿಯ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಎಂ.ಶಿವಲಿಂಗೇಗೌಡ ಅವರು ಘನ ಉಪಸ್ಥಿತಿ ವಹಿಸಲಿದ್ದಾರೆ. ಶಾಸಕರಾದ ಸ್ವರೂಪ್ ಪ್ರಕಾಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಸಂಸದರಾದ ಶ್ರೇಯಸ್ ಎಂ.ಪಟೇಲ್, ಶಾಸಕರಾದ ಎಚ್.ಡಿ.ರೇವಣ್ಣ, ಡಾ.ಸಿ.ಎನ್.ಬಾಲಕೃಷ್ಣ, ಎ.ಮಂಜು, ಎಚ್.ಕೆ. ಸುರೇಶ್, ಸಿಮೆಂಟ್ ಮಂಜು, ವಿಧಾನ ಪರಿಷತ್ ಶಾಸಕರಾದ ಮಧು ಜಿ.ಮಾದೇಗೌಡ, ಕೆ.ವಿವೇಕಾನಂದ, ಡಾ ಸೂರಜ್ ರೇವಣ್ಣ ಹಾಗೂ ಮಹಾನಗರ ಪಾಲಿಕೆಯ ಮಹಾಪೌರರಾದ ಗಿರೀಶ್ ಚನ್ನವಿರಪ್ಪ ಅವರು ಭಾಗವಹಿಸಲಿದ್ದಾರೆ.

ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮದಾಯ ದತ್ತಿಗಳ ಇಲಾಖೆಯ ಆಯುಕ್ತರಾದ ಡಾ.ವೆಂಕಟೇಶ್ ಎಂ.ವಿ, ಜಿಲ್ಲಾಧಿಕಾರಿ ಕೆ.ಎಸ್ ಲತಾ ಕುಮಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪೂರ್ಣಿಮಾ ಬಿ.ಆರ್, ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್ ಕುಮಾರ್, ಉಪ ವಿಭಾಗಾಧಿಕಾರಿ ಹಾಗೂ ಶ್ರೀ ಹಾಸನಾಂಬ ದೇವಾಲಯದ ಆಡಳಿತಾಧಿಕಾರಿ ಮಾರುತಿ ಜೆ.ಬಿ, ತಹಸೀಲ್ದಾರ್ ಗೀತಾ ಸಿ.ಜಿ ಭಾಗವಹಿಸಲಿದ್ದಾರೆ.

ಅ.10ರಿಂದ ಅ.17 ರವರೆಗೆ ಬೆ.10 ರಿಂದ ಮ.1 ಗಂಟೆಯವರೆಗೆ ಮಾತ್ರ ಶಿಷ್ಟಾಚಾರ ದರ್ಶನಕ್ಕೆ ಅವಕಾಶವಿರುತ್ತದೆ. ಅ.18ರಿಂದ ಅ.22ರವರೆಗೆ ಯಾವುದೇ ರೀತಿಯ ಶಿಷ್ಟಾಚಾರ ದರ್ಶನಕ್ಕೆ ಅವಕಾಶ ಇರುವುದಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
ರಾಯಚೂರು: ರಸ್ತೆಯಲ್ಲಿ ಹೋಗುತ್ತಿದ್ದ ಹಾವು ಹಿಡಿದು ಬೈಕ್ ಸವಾರ ಹುಚ್ಚಾಟ, ವಿಡಿಯೋ ವೈರಲ್