ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು‘ಪುರುಷತ್ವ ಪರೀಕ್ಷೆ’ಗೆ ಒಳಪಡಿಸಲು ವಿಶೇಷ ತನಿಖಾ ದಳದ (ಎಸ್‌ಐಟಿ) ಅಧಿಕಾರಿಗಳು ಮುಂದಾಗಿದ್ದು, ಈ ಬಗ್ಗೆ ಸೋಮವಾರ ಪ್ರಾಥಮಿಕ ಪರೀಕ್ಷೆ ನಡೆಸಿದ್ದಾರೆ.
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು‘ಪುರುಷತ್ವ ಪರೀಕ್ಷೆ’ಗೆ ಒಳಪಡಿಸಲು ವಿಶೇಷ ತನಿಖಾ ದಳದ (ಎಸ್‌ಐಟಿ) ಅಧಿಕಾರಿಗಳು ಮುಂದಾಗಿದ್ದು, ಈ ಬಗ್ಗೆ ಸೋಮವಾರ ಪ್ರಾಥಮಿಕ ಪರೀಕ್ಷೆ ನಡೆಸಿದ್ದಾರೆ.
ನಗರದ ಬೌರಿಂಗ್ ಆಸ್ಪತ್ರೆ ಆವರಣದ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಸಂಶೋಧನಾ ಸಂಸ್ಥೆಯಲ್ಲಿ ಪ್ರಜ್ವಲ್ ರವರ ವೈದ್ಯಕೀಯ ತಪಾಸಣೆ ನಡೆದಿದೆ. ಈ ವೇಳೆ ಪುರುಷತ್ವ ಪರೀಕ್ಷೆಗೆ ಅವರಿಂದ ವೀರ್ಯ, ಮರ್ಮಾಂಗದ ಕೂದಲು ಹಾಗೂ ರಕ್ತ ಸಂಗ್ರಹಿಸಲಾಗಿದೆ. ಮುಂದಿನ ಹಂತವಾಗಿ ಕೋರ್ಟ್ ಅನುಮತಿ ಪಡೆದು ಪ್ರಜ್ವಲ್ ಅವರನ್ನು ಪುರುಷತ್ವ ಪರೀಕ್ಷೆಗೆ ಒಳಪಡಿಸಲಾಗುವುದು. ಇದಕ್ಕಾಗಿ ತಜ್ಞರ ತಂಡ ರಚನೆಯಾಗಲಿದೆ. ಈ ತಜ್ಞರ ತಂಡ ತನ್ನ ವರದಿಯನ್ನು ಎಸ್‌ಐಟಿಗೆ ಸಲ್ಲಿಸಲಿದೆ ಎನ್ನಲಾಗಿದೆ.
undefined
ರಾಜ್ಯದಲ್ಲಿ ಮತ ಎಣಿಕೆಗೆ ಸಕಲ ಸಿದ್ಧತೆ: 474 ಅಭ್ಯರ್ಥಿಗಳಿಗೆ ಡವಡವ!
ಸಿಐಡಿ ಕೇಂದ್ರ ಕಚೇರಿಯಿಂದ ಆಂಬ್ಯುಲೆನ್ಸ್‌ನಲ್ಲಿ ಬೌರಿಂಗ್ ಆಸ್ಪತ್ರೆಗೆ ಬೆಳಗ್ಗೆ 11.30ರ ಸುಮಾರಿಗೆ ಪ್ರಜ್ವಲ್ ಅವರನ್ನು ಎಸ್‌ಐಟಿ ಅಧಿಕಾರಿಗಳು ಕರೆದುಕೊಂಡು ಹೋಗಿದ್ದಾರೆ. ಆನಂತರ ಮೂರು ತಾಸಿಗೂ ಅಧಿಕ ಹೊತ್ತು ವೈದ್ಯಕೀಯ ತಪಾಸಣೆ ಬಳಿಕ ಮತ್ತೆ ಅವರನ್ನು ಸಿಐಡಿ ಕಚೇರಿಗೆ ಕರೆತಂದು ಅಧಿಕಾರಿಗಳು ವಿಚಾರಣೆ ಮುಂದುವರೆಸಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ಲೈಂಗಿಕ ಕ್ರಿಯೆ ನಡೆಸಲು ದೈಹಿಕವಾಗಿ ಆರೋಪಿ ಸಾಮರ್ಥ್ಯ ಹೊಂದಿದ್ದಾನೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಪುರುಷತ್ವ ಪರೀಕ್ಷೆ ಅಗತ್ಯವಾಗಿದೆ. ಈ ಕಾರಣಕ್ಕೆ ಪ್ರಜ್ವಲ್ ಅವರನ್ನು ಎಸ್‌ಐಟಿ ಅಧಿಕಾರಿಗಳು ಪುರುಷತ್ವ ಪರೀಕ್ಷೆಗೊಳಪಡಿಸಲು ನಿರ್ಧರಿಸಿದ್ಧಾರೆ.
ಅತ್ಯಾಚಾರ ಪ್ರಕರಣದಲ್ಲಿ ಇದು ಸಾಮಾನ್ಯ ಪರೀಕ್ಷೆಯಾಗಿದೆ ಎಂದು ಮೂಲಗಳು ಹೇಳಿವೆ. ಅಲ್ಲದೆ ಹಾಸನ ನಗರದ ಸಂಸದರ ವಸತಿ ಗೃಹದಲ್ಲಿ ದಿಂಬು ಹಾಗೂ ಹಾಸಿಗೆಯನ್ನು ಎಸ್‌ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದರು. ಆ ಹಾಸಿಗೆಯ ಹೊದಿಕೆಯಲ್ಲಿ ಕೂದಲು ಹಾಗೂ ವೀರ್ಯದ ಗುರುತುಗಳು ಪತ್ತೆಯಾಗಿದ್ದವು ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಪ್ರಜ್ವಲ್ ಅವರಿಗೆ ಪುರುಷತ್ವ ಪರೀಕ್ಷೆ ನಡೆದಿದ್ದು, ಈ ವರದಿ ತನಿಖೆಗೆ ಮಹತ್ವದ ವೈದ್ಯಕೀಯ ಪುರಾವೆಯಾಗಲಿದೆ ಎಂದು ಮೂಲಗಳು ತಿಳಿಸಿವೆ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾದ ನಂತರ ಮೂರು ದಿನಗಳಿಂದ ಸತತವಾಗಿ ಪ್ರಜ್ವಲ್ ಅವರನ್ನು ಎಸ್‌ಐಟಿ ವಿಚಾರಣೆ ನಡೆಸುತ್ತಿದೆ. ಆದರೆ ತಮ್ಮ ವಿರುದ್ಧ ಆರೋಪಗಳನ್ನು ಬಲವಾಗಿ ತಳ್ಳಿ ಹಾಕುತ್ತಿರುವ ಅವರು, ಪ್ರಕರಣ ಕುರಿತು ತನಿಖಾಧಿಕಾರಿಗಳು ಕೇಳುವ ಪ್ರಶ್ನೆಗಳಿಗೆ ಸೂಕ್ತ ಉತ್ತರ ನೀಡದೆ ಜಾರಿಗೊಳ್ಳುತ್ತಿದ್ದಾರೆ ಎನ್ನಲಾಗಿದೆ.
ಮತ್ತೆ ವೈದ್ಯಕೀಯ ತಪಾಸಣೆ: ಬೌರಿಂಗ್ ಆಸ್ಪತ್ರೆ ವೈದ್ಯರ ಆಕ್ಷೇಪಣೆ ಹಿನ್ನಲೆಯಲ್ಲಿ ನ್ಯಾಯಾಲಯದ ಅನುಮತಿ ಪಡೆದು ಮತ್ತೊಮ್ಮೆ ಪ್ರಜ್ವಲ್ ಅವರನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲು ಎಸ್‌ಐಟಿ ಮುಂದಾಗಿದೆ. ಸಾಮಾನ್ಯ ವೈದ್ಯಕೀಯ ತಪಾಸಣೆ ಹಾಗೂ ಪುರುಷತ್ವ ಪರೀಕ್ಷೆ ಸಲುವಾಗಿ ಬೌರಿಂಗ್ ಆಸ್ಪತ್ರೆಗೆ ಪ್ರಜ್ವಲ್ ಅವರನ್ನು ಎಸ್‌ಐಟಿ ಅಧಿಕಾರಿಗಳು ಕರೆತಂದಿದ್ದರು. ಈ ವೇಳೆ ಎಸ್ಐಟಿ ಸೂಚಿಸಿದ ಕೆಲ ವೈದ್ಯಕೀಯ ಪರೀಕ್ಷೆಗಳಿಗೆ ಕಾನೂನಿನ ತೊಡಕಿನ ಬಗ್ಗೆ ವೈದ್ಯರು ಹೇಳಿದ್ದಾರೆ. ಅಲ್ಲದೆ ನ್ಯಾಯಾಲಯದ ಅನುಮತಿ ಇಲ್ಲದೆ ಈ ಪರೀಕ್ಷೆಗಳನ್ನು ನಡೆಸಲು ಸಾಧ್ಯವಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದರು. ಹೀಗಾಗಿ ಈ ಪರೀಕ್ಷೆ ಸಲುವಾಗಿ ನ್ಯಾಯಾಲಯದ ಅನುಮತಿ ಪಡೆಯಲಾಗುತ್ತದೆ ಎಂದು ಮೂಲಗಳು ಹೇಳಿವೆ. ಅತ್ಯಾಚಾರ ಪ್ರಕರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಆಗ ನ್ಯಾಯಾಲಯವು ಪ್ರಜ್ವಲ್ ಅವರಿಗೆ ಎಸ್‌ಐಟಿ ವಿಚಾರಣೆ ಹಾಗೂ ವೈದ್ಯಕೀಯ ಪರೀಕ್ಷೆ ಸಹಕರಿಸುವಂತೆ ಸೂಚಿಸಿತ್ತು.
ವಿಶ್ವ ದಾಖಲೆ ಬರೆದ ಭಾರತ! 64.2 ಕೋಟಿ ಜನರಿಂದ ಈ ಬಾರಿ ಮತದಾನ!
ಫಲಿತಾಂಶ ತಿಳಿಯಲು ಪ್ರಜ್ವಲ್‌ಗೆ ಅವಕಾಶ?ಲೋಕಸಭಾ ಚುನಾವಣಾ ಫಲಿತಾಂಶ ತಿಳಿಯಲು ಟಿವಿ ವೀಕ್ಷಣೆಗೆ ಹಾಸನದ ಜೆಡಿಎಸ್ ಅಭ್ಯರ್ಥಿಯೂ ಆಗಿರುವ ಆರೋಪಿ ಪ್ರಜ್ವಲ್ ರೇವಣ್ಣ ಅವರಿಗೆ ಎಸ್‌ಐಟಿ ಅವಕಾಶ ಕಲ್ಪಿಸುವ ಸಾಧ್ಯತೆಯಿದೆ. ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟ ದಿನ ಟಿವಿ ವೀಕ್ಷಣೆಗೆ ಅವಕಾಶ ನೀಡುವಂತೆ ನ್ಯಾಯಾಲಯಕ್ಕೆ ಪ್ರಜ್ವಲ್ ನಿವೇದಿಸಿಕೊಂಡಿದ್ದರು. ಈ ಮನವಿ ಹಿನ್ನಲೆಯಲ್ಲಿ ಎಸ್ಐಟಿ ಮುಖ್ಯಸ್ಥರ ಚೇಂಬರ್‌ನಲ್ಲಿ ಅವರಿಗೆ ಕೆಲ ತಾಸು ಸುದ್ದಿವಾಹಿನಿಗಳ ವೀಕ್ಷಣೆಗೆ ಅಧಿಕಾರಿಗಳು ಅವಕಾಶ ಮಾಡಿಕೊಡಲಿದ್ದಾರೆ ಎಂದು ಗೊತ್ತಾಗಿದೆ.
ಸ್ಪೀಕರ್‌ಗೆ ಮಾಹಿತಿ ನೀಡಿದ ಎಸ್‌ಐಟಿ: ಪ್ರಸುತ್ತ ಲೋಕಸಭಾ ಸ್ವೀಕರ್ ಅವರಿಗೆ ಅತ್ಯಾಚಾರ ಪ್ರಕರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಬಂಧನ ಕುರಿತು ಎಸ್‌ಐಟಿ ಮಾಹಿತಿ ನೀಡಿದೆ. ದೆಹಲಿಯ ಕರ್ನಾಟಕ ಭವನದ ಅಧಿಕಾರಿಗಳ ಮೂಲಕ ಲೋಕಸಭಾ ಸ್ಪೀಕರ್ ಕಚೇರಿಗೆ ಎಸ್‌ಐಟಿ ವರದಿ ರವಾನಿಸಿದೆ.