ನಾನು ಯಾವ ಸ್ಕೂಲ್ ಬಂದ್ ಮಾಡೋಲ್ಲ, ಯಾರೋ ತಲೆಹರಟೆ ಮಾಡ್ತಾರೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಗರಂ

Published : Nov 15, 2025, 04:45 PM IST
Haveri Minister Madhu Bangarappa reacts on Education and Political Developments

ಸಾರಾಂಶ

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಕೆಪಿಎಸ್‌ಸಿ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ರಾಜ್ಯ ನಾಯಕತ್ವ ಬದಲಾವಣೆ ಕುರಿತು ಹೈಕಮಾಂಡ್ 'ಬಾಯಿ ಮುಚ್ಚಿಕೊಳ್ಳಿ' ಎಂದು ಸೂಚಿಸಿರುವುದರಿಂದ ಆ ಬಗ್ಗೆ ಮಾತನಾಡುವುದಿಲ್ಲ ಎಂದರು.

ಹಾವೇರಿ, (ನ. 15): ಕೆಪಿಎಸ್‌ಸಿ ಶಾಲೆಗಳು ಉತ್ತಮವಾಗಿವೆ. ಮಕ್ಕಳು ಒಂದೇ ಶಾಲೆಯಲ್ಲಿ 14 ವರ್ಷಗಳ ಕಾಲ ಕಲಿಯುತ್ತಾರೆ. ನಾನು ಯಾವುದೇ ಶಾಲೆಗಳನ್ನು ಮುಚ್ಚುವುದಿಲ್ಲ. ಕೆಲವರು ತಲೆ ಹರಟೆ ಮಾಡಿ ಶಾಲೆಗಳನ್ನು ಮುಚ್ಚುತ್ತಾರೆ ಎಂದು ಹೇಳುತ್ತಿದ್ದಾರೆ ಎಂದು ಸಚಿವರು ಖಂಡಿಸಿದ್ದಾರೆ.

ಇಂದು ರಾಣೆಬೆನ್ನೂರಿನಲ್ಲಿ ನಡೆದ ಸಾರ್ವಜನಿಕ ಸಭೆ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ ಅವರು, ನಾವು 6,000 ಕೆಪಿಎಸ್‌ಸಿ ಶಾಲೆಗಳನ್ನು ಆರಂಭಿಸುವುದಾಗಿ ಹೇಳಿದ್ದೆವು ಮತ್ತು ಅದನ್ನು ಯಶಸ್ವಿಯಾಗಿ ನಡೆಸಿದ್ದೇವೆ. ಈ ಶಾಲೆಗಳಿಂದ ಸರ್ಕಾರಿ ಶಾಲೆಗಳು ಮಾತ್ರವಲ್ಲ, ಇತರ ಶಾಲೆಗಳ ವಿದ್ಯಾರ್ಥಿಗಳೂ ಆಕರ್ಷಿತರಾಗುತ್ತಾರೆ. ಎಲ್.ಕೆ.ಜಿ.ಯಿಂದ 12ನೇ ತರಗತಿ ವರೆಗೆ ಉಚಿತವಾಗಿ ಸಂಪೂರ್ಣ ಶಿಕ್ಷಣ ನೀಡುವ ಉದ್ದೇಶವಿದೆ ಎಂದರು.

ಬಿಹಾರ್ ಚುನಾವಣೆ ಮತ್ತು ರಾಜ್ಯ ರಾಜಕೀಯದಲ್ಲಿ ಬದಲಾವಣೆ?

ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶಗಳ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಬಿಹಾರ ಚುನಾವಣೆಯಲ್ಲಿ ವಿಭಿನ್ನ ತೀರ್ಮಾನಗಳು ಬಂದಿವೆ. ಇದನ್ನು ವಿವಿಧ ಕೋನಗಳಿಂದ ನೋಡಬೇಕು ಎಂದರು. ಇದೇ ವೇಳೆ ರಾಜ್ಯ ನಾಯಕತ್ವ ಬದಲಾವಣೆಯ ವಿಚಾರ ಸಂಬಂಧ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು,' ಹೈಕಮಾಂಡ್ ನಮಗೆ 'ಬಾಯ್ ಮುಚ್ಚಿಕೊಳ್ಳಿ' ಎಂದು ಸೂಚಿಸಿದ್ದಾರೆ. ನಾವು ಹೈಕಮಾಂಡ್ ಹೇಳಿದಂತೆ ಮುಂದುವರಿಯುತ್ತೇವೆ. ಆ ಬಗ್ಗೆ ಮಾತನಾಡುವುದಿಲ್ಲ. ಸಿಎಂ ಅವರು ನಮ್ಮ ಬೇಡಿಕೆಗಳಿಗೆ ತಕ್ಕಂತೆ ಅನುದಾನ ನೀಡಿದ್ದಾರೆ. ಕರ್ನಾಟಕಕ್ಕೆ ಬಿಹಾರ ಚುನಾವಣೆಯಿಂದ ಯಾವುದೇ ಪಟ್ಟ ಕಟ್ಟಲು ಸಾಧ್ಯವಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಸೋತರೆ ಮೋದಿ ಅವರ ಸೋಲು ಎಂದು ಹೇಳಲು ಆಗುತ್ತಾ ಎಂದು ಪ್ರಶ್ನಿಸಿದರು.

ಮತಗಳ್ಳತನ ಆಗಿದ್ರೆ ಕಳ್ಳರನ್ನು ಹಿಡಿಯಿರಿ:

ರಾಜ್ಯದಲ್ಲಿ ನಡೆಯುತ್ತಿರುವ ಮತಗಳ್ಳತನದ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಸಚಿವರು, ಬಿಹಾರದಲ್ಲಿ ಮತಗಳ್ಳತನ ಆಗಿದ್ದರೆ, ಕಳ್ಳರನ್ನು ಹಿಡಿಯಬೇಕು. ನಾವು ಅಧಿಕಾರಕ್ಕೆ ಬಂದರೆ ಕಳ್ಳರನ್ನು ಹಿಡಿಯುತ್ತೇವೆ; ಇಲ್ಲದಿದ್ದರೂ ಹೋರಾಟ ಮುಂದುವರಿಸುತ್ತೇವೆ ಎಂದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Justice for Bongo: ಮಗು ಹುಟ್ಟಿದ್ದಕ್ಕೆ ಸಾಕಿ ಸಲುಹಿದ ಶ್ವಾನ ಕೊಂದ್ರಾ ಪಾಪಿಗಳು? ಸಿಲಿಕಾನ್ ಸಿಟಿಯಲ್ಲಿ 'ಬೋಂಗೋ' ಸಾವಿನ ರೋಚಕ ಕಹಾನಿ!
ಸಿಎಂ ಸಿದ್ದರಾಮಯ್ಯನವರೇ ಮತಿಗೇಡಿಗಳಾಗಿ, ಆದ್ರೆ ಅಧಿಕಾರಕ್ಕಾಗಿ ಲಜ್ಜೆಗೇಡಿಗಳಾಗಬೇಡಿ-ಆರ್. ಅಶೋಕ್ ಟೀಕೆ