ಯುವತಿ ಸ್ನಾನದ ದೃಶ್ಯ ರೆಕಾರ್ಡ್‌ ಆರೋಪ: ಕಾನೂನು ಪ್ರಕ್ರಿಯೆ ವಿರುದ್ಧ ಮಧ್ಯಂತರ ತಡೆ

Published : Jul 02, 2026, 07:53 AM IST
Karnataka High court

ಸಾರಾಂಶ

ಪಕ್ಕದ ಮನೆಯ ಯುವತಿ ಸ್ನಾನ ಮಾಡುವಾಗ ರಹಸ್ಯವಾಗಿ ವಿಡಿಯೋ ಮಾಡಿದ ಆರೋಪ ಎದುರಿಸುತ್ತಿರುವ ಯುವಕನಿಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಆರೋಪಿಯ ಮೊಬೈಲ್‌ನಲ್ಲಿ ಒಂದೇ ಒಂದು ಫೋಟೋ ಅಥವಾ ವಿಡಿಯೋ ಕಂಡುಬಂದರೂ ಅರ್ಜಿ ವಜಾಗೊಳಿಸುವುದಾಗಿ ನ್ಯಾಯಾಲಯ ಎಚ್ಚರಿಕೆ ನೀಡಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು (ಜು.2): ಪಕ್ಕದ ಮನೆಯ ಯುವತಿ ಸ್ನಾನ ಮಾಡುವಾಗ ರಹಸ್ಯವಾಗಿ ಮೊಬೈಲ್‌ನಲ್ಲಿ ವಿಡಿಯೊ ರೆಕಾರ್ಡ್ ಮಾಡಿದ ಪ್ರಕರಣದ ಆರೋಪಿ ವಿರುದ್ಧದ ಕಾನೂನು ಪ್ರಕ್ರಿಯೆಗಳಿಗೆ ಮಧ್ಯಂತರ ತಡೆಯಾಜ್ಞೆ ನೀಡಿರುವ ಹೈಕೋರ್ಟ್, ಮೊಬೈಲ್‌ನಲ್ಲಿ ಒಂದೇ ಒಂದು ಫೋಟೋ ಅಥವಾ ಒಂದು ಕ್ಷಣದ ವಿಡಿಯೋ ಇರುವುದು ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ವರದಿಯಿಂದ ತಿಳಿದು ಬಂದರೂ ಅರ್ಜಿ ವಜಾಗೊಳಿಸುವುದಾಗಿ ಎಚ್ಚರಿಕೆ ನೀಡಿದೆ.

ಪ್ರಕರಣ ಸಂಬಂಧ ಬೆಂಗಳೂರಿನ ವಿವೇಕನಗರ ಪೊಲೀಸ್ ಠಾಣೆಯಲ್ಲಿ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಕೋರಿ ಪಶ್ಚಿಮ ಬಂಗಾಳ ಮೂಲದ ಚಿತ್ತರಂಜನ್ ಶರ್ಮಾ (25) ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಮಧ್ಯಂತರ ಆದೇಶ ಮಾಡಿತು.

ಜು.17ಕ್ಕೆ ಮುಂದೂಡಿಕೆ

ಅರ್ಜಿದಾರರು ಪ್ರತಿದಿನ ಟೆರೇಸ್ ಮೇಲೆ ಜಿಮ್ ಮಾಡುವ ಅಭ್ಯಾಸ ಹೊಂದಿದ್ದಾರೆ ಎಂಬ ಏಕೈಕ ಕಾರಣಕ್ಕೆ ಅವರ ಮೇಲೆಯೇ ಆರೋಪ ಹೊರಿಸಲಾಗಿದೆ. ಅರ್ಜಿದಾರರ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದ್ದು, ಪರೀಕ್ಷೆಗಾಗಿ ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ. ಮೊಬೈಲ್ ಫೋನ್‌ನಲ್ಲಿ ಯಾವುದೇ ವಿಡಿಯೋ ಅಥವಾ ಫೋಟೊ ಕಂಡುಬಾರದ ಹೊರತು, ಕಾನೂನು ಪ್ರಕ್ರಿಯೆ ಮುಂದುವರಿಸಲು ಅನುಮತಿಸಲಾಗದು ಎನ್ನುವುದು ಅರ್ಜಿದಾರರ ಪರ ವಕೀಲರ ವಾದ. ಆದ್ದರಿಂದ, ಸರ್ಕಾರ ಎಫ್‌ಎಸ್‌ಎಲ್ ವರದಿ ಪಡೆದು ನ್ಯಾಯಾಲಯಕ್ಕೆ ಸಲ್ಲಿಸುವವರೆಗೆ ಅರ್ಜಿದಾರರ ವಿರುದ್ಧದ ಮುಂದಿನ ಎಲ್ಲ ಪ್ರಕ್ರಿಯೆಗಳಿಗೆ ತಡೆ ನೀಡಲಾಗಿದೆ ಎಂದು ನ್ಯಾಯಪೀಠ ಮಧ್ಯಂತರ ಆದೇಶ ಮಾಡಿ ವಿಚಾರಣೆಯನ್ನು ಜು.17ಕ್ಕೆ ಮುಂದೂಡಿದೆ. ರಾಜ್ಯ ಸರ್ಕಾರ ಪರ ವಕೀಲರು, ವಿಧಿವಿಜ್ಞಾನ ಪ್ರಯೋಗಾಲಯದಿಂದ ವರದಿ ಪಡೆದುಕೊಂಡು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಇದೇ ವೇಳೆ ನಿರ್ದೇಶಿಸಿತು.

ಬಿಎನ್‌ಎಸ್ ಸೆಕ್ಷನ್ 77ರ (ಮಹಿಳೆಯ ಖಾಸಗಿ ಕ್ಷಣಗಳನ್ನು ರಹಸ್ಯವಾಗಿ ಫೋಟೋ ಅಥವಾ ವಿಡಿಯೋ ಮಾಡುವುದು) ಅಡಿಯಲ್ಲಿ ಅರ್ಜಿದಾರರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಪ್ರಕರಣ ವಿಚಾರಣಾ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Bidadi Township row: ಬಿಡದಿ ಟೌನ್‌ಶಿಪ್‌ಗೂ ಎಚ್‌ಡಿಕೆಗೂ ಸಂಬಂಧ ಇಲ್ಲ, ಚರ್ಚೆ ಬೇಕಿಲ್ಲ - ಸಿಎಂ ಡಿಕೆಶಿ
State News Live: ಯುವತಿ ಸ್ನಾನದ ದೃಶ್ಯ ರೆಕಾರ್ಡ್‌ ಆರೋಪ - ಕಾನೂನು ಪ್ರಕ್ರಿಯೆ ವಿರುದ್ಧ ಮಧ್ಯಂತರ ತಡೆ