ಹೊಸ ಬಾಂಬ್ ಸಿಡಿಸಿದ ಎಚ್.ಡಿ.ರೇವಣ್ಣ

Published : Feb 02, 2019, 08:17 AM IST
ಹೊಸ ಬಾಂಬ್ ಸಿಡಿಸಿದ ಎಚ್.ಡಿ.ರೇವಣ್ಣ

ಸಾರಾಂಶ

ಜೆಡಿಎಸ್ ಮುಖಂಡ ಎಚ್.ಡಿ. ರೇವಣ್ಣ ಇದೀಗ ಹೊಸ ಬಾಂಬ್ ಒಂದನ್ನು ಸಿಡಿಸಿದ್ದಾರೆ. ಇನ್ನೇನು ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು ಈ ವೇಳೆ ತ್ರಿಕೋನ ಸ್ಪರ್ಧೆಗೆ ಸಿದ್ಧವೆಂದು ಹೇಳಿದ್ದಾರೆ.

ಬೆಂಗಳೂರು : ಒಂದೆಡೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರ ನಡುವೆ ವಾಕ್ಸಮರ ಮುಂದುವರೆದಿರುವಾಗಲೇ, ಮುಂದಿನ ಲೋಕಸಭಾ ಚುನಾವಣೆ ಯಲ್ಲಿ ಜೆಡಿಎಸ್ ತ್ರಿಕೋನ ಸ್ಪರ್ಧೆಗೂ ಸಿದ್ಧವಿದೆ ಎನ್ನುವ ಮೂಲಕ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಹೊಸ 
ಬಾಂಬ್ ಸಿಡಿಸಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಕೆಟ್ ಹಂಚಿಕೆ ಬಗ್ಗೆ ದೇವೇಗೌಡರು ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ. ಯಾವುದೇ ಪರಿಸ್ಥಿತಿ ಬಂದರೂ ಎದುರಿಸಲು ಸಿದ್ಧರಿದ್ದೇವೆ. ಹಾಸನ ಕ್ಷೇತ್ರದಲ್ಲಿ ದೇವೇಗೌಡರು ತಾವೇ ಸ್ಪರ್ಧಿಸುತ್ತಾರೋ, ಪ್ರಜ್ವಲ್ ಅವರನ್ನು ನಿಲ್ಲಿಸುತ್ತಾರೋ ಅಥವಾ ಕಾಂಗ್ರೆಸಿನವರಿಗೆ ಅವಕಾಶ ನೀಡುತ್ತಾರೋ ಗೊತ್ತಿಲ್ಲ. ಯಾರನ್ನೇ ನಿಲ್ಲಿಸಿದರೂ 
ಅವರನ್ನು ಗೆಲ್ಲಿಸಿಕೊಂಡು ಬರುತ್ತೇನೆ ಎಂದು ಸ್ಪಷ್ಪಡಿಸಿದರು.

ಒಂದು ವೇಳೆ ತ್ರಿಕೋನ ಸ್ಪರ್ಧೆಯ ಚುನಾವಣೆ ನಡೆಸಲು ನಿರ್ಧರಿಸಿದರೆ ಅದಕ್ಕೂ ಸಿದ್ಧವಿದ್ದೇವೆ. ಆದರೆ, ಇದನ್ನು ದೇವೇಗೌಡರು ಅಂತಿಮ  ನಿರ್ಧಾರ ತೆಗೆದುಕೊಳ್ಳುತ್ತಾರೆ. ಒಂದು ವೇಳೆ ಹಾಸನದಿಂದ ದೇವೇಗೌಡರೇ ನಿಂತರೆ ಭಾರೀ ಅಂತರದಿಂದ ಗೆಲ್ಲಿಸುತ್ತೇವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Karnataka News Live: ಮುಂದುವರಿದ ಸಿಎಂ ಕುರ್ಚಿ ಕದನ ಜನವರಿ 6ಕ್ಕೆ ಡಿಕೆಶಿ ಸಿಎಂ: ಮತ್ತೆ ಆಪ್ತ ಶಾಸಕರ ಬಾಂಬ್
ಚುನಾವಣೆ ಆಯೋಗದ 6 ಲೋಪ ಬಳಸಿ ಆಳಂದ ಕ್ಷೇತ್ರದಲ್ಲಿ ಮತಗಳ್ಳತನ: ಎಸ್‌ಐಟಿ