ರಾಷ್ಟ್ರೀಯ ಪಕ್ಷಗಳಿಂದ ರಾಜ್ಯದ ನೆಲ,ಜಲ,ವಿಚಾರಗಳ ಸಮಸ್ಯೆ ಗೆ ಪರಿಹಾರ ಸಾಧ್ಯವಿಲ್ಲ

Suvarna News   | Asianet News
Published : Feb 08, 2022, 08:53 PM ISTUpdated : Feb 08, 2022, 09:04 PM IST
ರಾಷ್ಟ್ರೀಯ ಪಕ್ಷಗಳಿಂದ ರಾಜ್ಯದ ನೆಲ,ಜಲ,ವಿಚಾರಗಳ ಸಮಸ್ಯೆ ಗೆ ಪರಿಹಾರ ಸಾಧ್ಯವಿಲ್ಲ

ಸಾರಾಂಶ

ರಾಷ್ಟ್ರೀಯ ಪಕ್ಷಗಳಿಂದ ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ಸಾಧ್ಯವಿಲ್ಲ ನಮ್ಮಲ್ಲಿ ಪ್ರಾದೇಶಿಕ ಪಕ್ಷಗಳು ಪ್ರಬಲವಾಗಬೇಕು ಜನ ಆಪೇಕ್ಷೆ ಪಟ್ಟರೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧ

ಬೆಂಗಳೂರು (ಫೆ.8): ಪ್ರಾದೇಶಿಕ ಸಮಸ್ಯೆಗಳ ಪರಿಹಾರಕ್ಕೆ ಪ್ರಾದೇಶಿಕ ಸಂಘಟನೆಗಳು ಒಗ್ಗೂಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (Karnataka Rakshana Vedike) ರಾಜ್ಯಾಧ್ಯಕ್ಷ ಎಚ್ ಶಿವರಾಮೇಗೌಡ (Shivarame Gowda) ಹೇಳಿದ್ದಾರೆ. ಹಾಗೇನಾದರೂ ಜನ ಆಪೇಕ್ಷೆ ಪಟ್ಟಲ್ಲಿ ಚುನಾವಣೆಗೆ ಸ್ಪರ್ಧಿಸಲು ನಾನೂ ಸಿದ್ಧ ಎಂದಿದ್ದಾರೆ. ಇದೇ ವೇಳೆ ಜೆಡಿಎಸ್ ಗೆ ಸೇರುವ ನಿಟ್ಟಿನಲ್ಲಿ ಮಾತನಾಡಿರುವ ಇವರು, ಕುಮಾರಸ್ವಾಮಿ ಜೊತೆ ಮಾತಾಡಿದ್ದು ನಿಜ, ಸದ್ಯಕ್ಕೆ ಮಾತುಕತೆ ಪ್ರಾಥಮಿಕ ಹಂತದಲ್ಲಿ ಇದೆ ಎಂದರು.

'ರಾಷ್ಟ್ರೀಯ ಪಕ್ಷಗಳಿಂದ ರಾಜ್ಯದ ನೆಲ,ಜಲ,ವಿಚಾರಗಳ ಸಮಸ್ಯೆ ಗೆ ಪರಿಹಾರ ಸಾಧ್ಯವಿಲ್ಲ, ರಾಜ್ಯದ ಹಿತಾಸಕ್ತಿಗೆ ಧಕ್ಕೆಯಾದಾಗ ಕುಮಾರಸ್ವಾಮಿ (HD Kumaraswamy) ದನಿಯಾಗಿದ್ದಾರೆ. ತಮಿಳುನಾಡು, ಆಂಧ್ರ, ಮಹಾರಾಷ್ಟ್ರಗಳಲ್ಲಿ ಪ್ರಾದೇಶಿಕ ಪಕ್ಷಗಳು ಪ್ರಬಲವಾಗಿವೆ. ಕನ್ನಡದ ಆಸ್ಮಿತಗೆ ದುಡಿಯುವ, ಜನಬೆಂಬಲ ಇರುವ ಸಂಘಟನೆ ಚುನಾವಣೆಗೆ ಸ್ಪರ್ಧೆ ಮಾಡಿದ್ರೆ  ಬೆಂಬಲಕ್ಕೆ ಸಿದ್ಧ.ನಾನು ಚುನಾವಣೆ ರಾಜಕೀಯದಿಂದ ದೂರ ಇದ್ದವನು, ಜನ ಅಪೇಕ್ಷೆ ಪಟ್ಟರೆ ಚುನಾವಣೆಗೆ ಸ್ಪರ್ಧಿಸಲು ಸಿದ್ದ ಎಂದಿದ್ದಾರೆ. 

Hijab Row: ಹಿಜಾಬ್‌ ವಿವಾದದ ಹಿಂದಿರುವ ಸಂಘಟನೆಗಳ ಬಗ್ಗೆ ಮಾಹಿತಿ ಇದೆ: ಎಚ್‌ಡಿಕೆ
ಜೆಡಿಎಸ್ ಗೆ ಸೇರುವ ನಿಟ್ಟಿನಲ್ಲಿ ಈಗಾಗಲೇ ಮಾತುಕತೆ ನಡೆಸಿದ್ದೇನೆ. ಆದರೆ, ಇದೆಲ್ಲವೂ ಆರಂಭಿಕ ಹಂತದಲ್ಲಿದೆ. ರಾಜ್ಯದ ಅಭಿವೃದ್ಧಿಗೆ ಪ್ರಾದೇಶಿಕ ಪಕ್ಷಗಳು ಒಗ್ಗೂಡಬೇಕು. ಹಾಗಿದ್ದಲ್ಲಿ ಮಾತ್ರವೇ ಇಲ್ಲಿನ ಸಮಸ್ಯೆಗಳಿಗೆ ಪರಿಹಾರ ಸಾಧ್ಯವಾಗುತ್ತದೆ ಎಂದು ಹೇಳಿದರು. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಗೆ ಇಲ್ಲಿನ ಸಮಸ್ಯೆಗಳ ಬಗ್ಗೆ ಅರಿವಿಲ್ಲ. ಇಲ್ಲಿನ ಸಮಸ್ಯೆ ಪರಿಹಾರ ಮಾಡಿ ಅವರಿಗೆ ಏನೂ ಆಗಬೇಕಾಗಿಲ್ಲ ಎಂದರು. ಇನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರತಿ ಬಾರಿ ರಾಜ್ಯದ ಹಿತಾಸಕ್ತಿಗೆ ಧಕ್ಕೆಯಾದಾಗ ತಮ್ಮ ದನಿ ನೀಡಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ರಾಜ್ಯದಲ್ಲಿ ಇರುವ ಎಲ್ಲಾ ಸಂಘಟನೆಗಳು ಪ್ರಾದೇಶಿಕ ಪಕ್ಷಕ್ಕೆ ಬಲ ಕೊಟ್ಟರೆ ಜೆಡಿಎಸ್ ಇನ್ನಷ್ಟು ಬಲಿಷ್ಠವಾಗಲಿದೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಗ್ರೇಟರ್‌ ಬೆಂಗಳೂರು.. ವೈಜ್ಞಾನಿಕವಾಗಿ ಕಸ ಸಂಸ್ಕರಣೆ, ಆತಂಕ ಬೇಡ: ಡಿ.ಕೆ.ಶಿವಕುಮಾರ್‌
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ ಪ್ರಕರಣ: ಎಸ್ಐಟಿ ತನಿಖೆಗೆ ಸಿ.ಟಿ.ರವಿ ಆಗ್ರಹ