ಕೇಂದ್ರ ಸರ್ಕಾರದ ಕೊಬ್ಬರಿ ಬೆಂಬಲ ಬೆಲೆ ಘೋಷಣೆ ಕ್ರೆಡಿಟ್‌ ತಮ್ಮದೆಂದ ಮಾಜಿ ಸಿಎಂ ಕುಮಾರಣ್ಣ!

By Sathish Kumar KHFirst Published Dec 29, 2023, 9:20 PM IST
Highlights

ಕೇಂದ್ರ ಸರ್ಕಾರವು ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ ಘೋಷಣೆ ಮಾಡಿದ ಕ್ರೆಡಿಟ್‌ ಅವನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಮ್ಮದೆಂದು ಹೇಳಿಕೊಂಡಿದ್ದಾರೆ.

ಬೆಂಗಳೂರು (ಡಿ.29): ರಾಜ್ಯದಲ್ಲಿ ತೀವ್ರ ಬರಗಾಲ ಹಾಗೂ ಕೊಬ್ಬರಿ ಬೆಲೆ ಕುಸಿತದಿಂದ ಕಂಗಾಲಾಗಿದ್ದ ರೈತರ ಪರವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮುಂದೆ ಕೊಬ್ಬರಿಗೆ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಮನವಿ ಮಾಡಲಾಗಿತ್ತು. ಇದರ ಬೆನ್ನಲ್ಲಿಯೇ ಕೊಬ್ಬರಿಗೆ ಬೆಂಬಲ ಬೆಲೆ ಘೋಷಣೆ ಮಾಡಿ ರೈತರ ಸಂಕಷ್ಟಕ್ಕೆ ಸ್ಪಂದಿಸಿದ ಪ್ರಧಾನಿ ಮೋದಿ ಅವರಿಗೆ ಧನ್ಯವಾದಗಳು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರದ ಕೊಬ್ಬರಿ ಬೆಂಬಲ ಬೆಲೆ ಘೋಷಣೆಯ ಕ್ರೆಡಿಟ್‌ ಅನ್ನು ತಮ್ಮದೆಂದು ಹೇಳಿಕೊಂಡಿದ್ದಾರೆ.

ಈ ಕುರಿತು ಮಾಜಿ ಸಿಎಂ ಕುಮಾರಸ್ವಾಮಿ ಅವರು ತಮ್ಮ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡು ಕೇಂದ್ರ ಸರ್ಕಾರಕ್ಕೆ ಧನ್ಯವಾದ ತಿಳಿಸುವ ಜೊತೆಗೆ ಇದು ತಮ್ಮದೇ ಕ್ರೆಡಿಟ್‌ ಎಂದು ಹೇಳಿಕೊಂಡಿದ್ದಾರೆ. 'ಕೊಬರಿ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ತೆಂಗು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ ಸರಕಾರ ಹಾಗೂ ಪ್ರಧಾನಿಗಳಾದ ನರೇಂದ್ರ ಮೋದಿ ( @narendramodi) ಅವರಿಗೆ ರಾಜ್ಯದ ಸಮಸ್ತ ರೈತರ ಪರವಾಗಿ ಕೃತಜ್ಞತೆಗಳು ಹಾಗೂ ಅಭಿನಂದನೆಗಳು. ಮಿಲ್ಲಿಂಗ್‌ ಕೊಬರಿಗೆ 300 ರೂ. ಹಾಗೂ ಉಂಡೆ ಕೊಬರಿಗೆ 250 ರೂ. (ಪ್ರತಿ ಕ್ವಿಂಟಾಲ್‌ಗೆ) ಏರಿಕೆ ಮಾಡಿರುವ ಕೇಂದ್ರದ ನಿರ್ಧಾರ ಸ್ವಾಗತಾರ್ಹ' ಎಂದು ಬರೆದುಕೊಂಡಿದ್ದಾರೆ.

Latest Videos

ತೆಂಗು ಬೆಳೆಗಾರರಿಗೆ ಬಿಗ್‌ ನ್ಯೂಸ್‌, ಕೊಬ್ಬರಿ ಕನಿಷ್ಠ ಬೆಂಬಲ ಬೆಲೆ ಏರಿಸಿದ ಕೇಂದ್ರ ಸರ್ಕಾರ

ಮುಂದುವರೆದು 'ಡಿಸೆಂಬರ್ 21ರಂದು ನವದೆಹಲಿಯಲ್ಲಿ ಮಾಜಿ ಪ್ರಧಾನಿಗಳಾದ ಮಾನ್ಯ ಹೆಚ್.ಡಿ. ದೇವೇಗೌಡ (@H_D_Devegowda) ಅವರ ನೇತೃತ್ವದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಕೊಬ್ಬರಿ ರೈತರ ಸಂಕಷ್ಟ ಪರಿಹಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಮಾನ್ಯ ಪ್ರಧಾನಿಗಳು ನಮ್ಮ ಮನವಿಗೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ತೆಂಗು ಬೆಳೆಗಾರರು ಬಹಳಷ್ಟು ಸಂಕಷ್ಟದಲ್ಲಿದ್ದಾರೆ. ಅವರಿಗೆ ಇನ್ನೂ ಹೆಚ್ಚಿನ ನೆರವು ಬೇಕಿದೆ. ಮಧ್ಯವರ್ತಿಗಳು ಅವರನ್ನು ಕಿತ್ತು ತಿನ್ನುತ್ತಿದ್ದಾರೆ. ಇದು ಎಲ್ಲೆಡೆ ಕಂಡು ಬರುತ್ತಿರುವ ನೈಜ ಚಿತ್ರಣ. ಮಧ್ಯವರ್ತಿಗಳ ಹಾವಳಿ ತಪ್ಪಿಸಿ ನೇರವಾಗಿ ನಾಫೆಡ್ ಮೂಲಕವೇ ಕೊನೆಪಕ್ಷ ರಾಜ್ಯದಲ್ಲಿ 1.5 ಲಕ್ಷ ಮೆಟ್ರಿಕ್ ಟನ್ ಕೊಬರಿ ಖರೀದಿಸಬೇಕು ಎಂದು ಕೇಂದ್ರವನ್ನು, ಮಾನ್ಯ ಪ್ರಧಾನಿಗಳಲ್ಲಿ ವಿನಂತಿಸುತ್ತೇನೆ' ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ.

ರೆಬೆಲ್‌ ಶಾಸಕರಿಗೆ ಹೊಸ ಹುದ್ದೆಕೊಟ್ಟ ಸರ್ಕಾರ : ರಾಯರೆಡ್ಡಿ, ಬಿ.ಆರ್. ಪಾಟೀಲ್, ದೇಶಪಾಂಡೆಗೆ ಸಂಪುಟ ಸ್ಥಾನಮಾನ

ಕೇಂದ್ರದ ಸಚಿವ ಸಂಪುಟದಲ್ಲಿ ಅನಿಮೋದನೆ: ಕೇಂದ್ರ ಸರ್ಕಾರ, 2023-24 ಮಾರುಕಟ್ಟೆ ಋತುವಿನಲ್ಲಿ ಕೊಬ್ಬರಿಗೆ ಬೆಂಬಲ ಬೆಲೆಯನ್ನು ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಮಿಲ್ಲಿಂಗ್‌ ಕೊಬ್ಬರಿಗೆ ಬೆಂಬಲ ಬೆಲೆಯನ್ನು ಪ್ರತಿ ಕ್ವಿಂಟಾಲ್‌ಗೆ 300 ರೂಪಾಯಿ ಏರಿಕೆ ಮಾಡಲಾಗಿದ್ದು, ಈಗ ಪ್ರತಿ ಕ್ವಿಂಟಾಲ್‌ಗೆ 11,160 ರೂಪಾಯಿ ಆಗಿದೆ. ಅದೇ ರೀತಿ ಪೂರ್ಣ ಕೊಬ್ಬರಿಗೆ ಪ್ರತಿ ಕ್ವಿಂಟಾಲ್‌ಗೆ 250 ರೂಪಾಯಿ ಏರಿಕೆ ಮಾಡಲಾಗಿದ್ದು, ಈಗ 12 ಸಾವಿರ ರೂಪಾಯಿ ಆಗಿದೆ. ಕೇಂದ್ರ ಸಂಪುಟ ಸಭೆಯ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್, ಈ ನಿರ್ಧಾರವು ಭಾರತೀಯ ತೆಂಗು ಬೆಳೆಗಾರರಿಗೆ ಉತ್ತಮ ಪ್ರತಿಫಲವನ್ನು ಖಚಿತಪಡಿಸುತ್ತದೆ ಎಂದು ಹೇಳಿದರು.

click me!