
ಬೆಂಗಳೂರು(ಮೇ.13): ಆಯುಷ್ಮಾನ್ ಭಾರತ ಆರೋಗ್ಯ ಯೋಜನೆಯಡಿ ನಾಗರಿಕರಿಗೆ ಮಹಾಮಾರಿ ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆಯಲು ಇರುವ ನಿರ್ಬಂಧಗಳನ್ನು ಸಡಿಲಗೊಳಿಸಿ ಕೇಂದ್ರ ಸರ್ಕಾರ ತಕ್ಷಣವೇ ಆದೇಶ ಹೊರಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
18+ ಲಸಿಕೆ ವಿತರಣೆಯಲ್ಲಿ ಕನ್ನಡಿಗರಿಗೆ ಅನ್ಯಾಯ: ಕೇಂದ್ರದ ವಿರುದ್ಧ ಎಚ್‌ಡಿಕೆ ಕೆಂಡಾಮಂಡಲ ..
ಈ ಕುರಿತು ಟ್ವೀಟ್ ಮಾಡಿದ ಅವರು, ಆಯುಷ್ಮಾನ್ ಭಾರತ ಯೋಜನೆಯಡಿ ಕೊರೋನಾ ಸೋಂಕಿತರು ಉಚಿತವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರ ನಿರ್ಬಂಧಿಸಿರುವ ಐದು ಲಕ್ಷ ರು. ವ್ಯಾಪ್ತಿಯಲ್ಲಿ ಚಿಕಿತ್ಸೆ ಪಡೆಯಲು ಎಡರು ತೊಡರುಗಳಿವೆ. ಮಹಾಮಾರಿ ಕೊರೋನಾ ದೇಶವನ್ನು ನಲುಗಿಸುತ್ತಿರುವ ಈ ದುರಿತ ಕಾಲದಲ್ಲಿ ಕೇಂದ್ರ ಸರ್ಕಾರ ಔದಾರ್ಯ ಪ್ರದರ್ಶಿಸಬೇಕಾದ ತುರ್ತು ಅಗತ್ಯವಿದೆ ಎಂದಿದ್ದಾರೆ.
ಬಿಎಸ್‌ವೈ ಸರ್ಕಾರಕ್ಕೆ ಪ್ರಮುಖ 10 ಸಲಹೆ ಕೊಟ್ಟ ಕುಮಾರಸ್ವಾಮಿ
ಬಿಪಿಎಲ್ ಕಾರ್ಡುದಾರರು ಆಯುಷ್ಮಾನ್ ಭಾರತ ಯೋಜನೆ ಅಡಿ ಐದು ಲಕ್ಷ ರು. ವರೆಗೆ ಮಾರಣಾಂತಿಕ ಕಾಯಿಲೆಗಳಿಗೆ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ. ಎಪಿಎಲ್ ಕಾರ್ಡ್‌ದಾರರಿಗೆ ಗರಿಷ್ಠ 5 ಲಕ್ಷ ರು.ವರೆಗೆ ಶೇ. 30ರಷ್ಟುಚಿಕಿತ್ಸಾ ವೆಚ್ಚದಲ್ಲಿ ರಿಯಾಯಿತಿ ದಕ್ಕಲಿದೆ. ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೆ ಸರಾಗವಾಗಿ ಕೊರೋನಾ ಉಚಿತ ಚಿಕಿತ್ಸೆ ಕೊಡುವುದಿಲ್ಲವಾದರೆ ಈ ಯೋಜನೆ ಮತ್ತಿನ್ಯಾವ ಪುರುಷಾರ್ಥಕ್ಕೆ? ಕೇಂದ್ರ ಸರ್ಕಾರ ತಕ್ಷಣ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ತುರ್ತು ಅಗತ್ಯವಿದೆ. ದೇಶದ ಬಹುಸಂಖ್ಯಾತರ ಆಗ್ರಹ ಕೂಡ ಇದೇ ಆಗಿದೆ ಎಂದು ಹೇಳಿದ್ದಾರೆ.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ