ಕುಮಾರಸ್ವಾಮಿ ಜೀವನದಲ್ಲಿ ಮತ್ತೊಂದು ಶುಭ ಘಳಿಗೆ: ಸಂತಸ ಹಂಚಿಕೊಂಡ ಎಚ್‌ಡಿಕೆ

Published : Sep 24, 2021, 03:33 PM ISTUpdated : Sep 24, 2021, 03:55 PM IST
ಕುಮಾರಸ್ವಾಮಿ ಜೀವನದಲ್ಲಿ ಮತ್ತೊಂದು ಶುಭ ಘಳಿಗೆ: ಸಂತಸ ಹಂಚಿಕೊಂಡ ಎಚ್‌ಡಿಕೆ

ಸಾರಾಂಶ

* ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಕುಟುಂಬಕ್ಕೆ ಹೊಸ ಅತಿಥಿಯ ಆಗಮನ * ನಿಖಿಲ್, ರೇವತಿ ದಂಪತಿಗೆ ಗಂಡು ಮಗು ಜನನ * ತಾತನಾದ ಖುಷಿಯಲ್ಲಿ ಎಚ್‌ಡಿ ಕುಮಾರಸ್ವಾ,ಮಿ

ಬೆಂಗಳೂರು, (ಸೆ.24): ಈಗಾಗಿಲೇ ಎರಡು ಬಾರಿ ಮುಖ್ಯಮಂತ್ರಿಯಾಗಿರುವ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಜೀವನದಲ್ಲಿ ಮತ್ತೊಂದು ಶುಭ ಘಳಿಗೆ ಬಂದಿದೆ.

ಹೌದು... ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪುತ್ರ, ನಟ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಪತ್ನಿ ರೇವತಿ ಇಂದು (ಸೆ.24) ಗಂಡು ಮಗುವಿಗೆ ಜನ್ಮ ನೀಡಿದ್ದು, ದೊಡ್ಡಗೌಡ್ರ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ.

ಗಂಡು ಮಗುವಿಗೆ ತಂದೆಯಾದ ನಿಖಿಲ್ ಕುಮಾರಸ್ವಾಮಿ!

ಇನ್ನು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಸಹ ಆಸ್ಪತ್ರೆಗೆ ಭೇಟಿ ನೀಡಿ ಮೊಮ್ಮಗನನ್ನು ನೋಡಿ ಸಂತಸಗೊಂಡೊದ್ದಾರೆ. ಅಲ್ಲದೇ ತಾತನಾದ ಖುಷಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ. ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ. ನಿಮ್ಮೆಲ್ಲರ ಆಶೀರ್ವಾದ ಕಂದಮ್ಮನಿಗೆ ಇರಲಿ ಎಂದು ಟ್ವೀಟ್ (Tweet) ಮಾಡಿದ್ದಾರೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಖಿಲ್ ಪತ್ನಿ ರೇವತಿ (Revathi) ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.  ಮುದ್ದಾದ ಮಗುವನ್ನು ಎತ್ತಿಕೊಂಡು ನಿಖಿಲ್ ಕುಮಾರಸ್ವಾಮಿ ಫೋಟೋಗೆ ಪೋಸ್ ನೀಡಿದ್ದಾರೆ. ಮಗುವಿನೊಂದಿಗೆ ಫೋಟೋ (Photo) ಸಾಮಾಜಿಕ ಜಾಲತಾಣಗಲ್ಲಿ (Social Media) ವೈರಲ್ ಆಗಿದೆ.

ಕಳೆದ ವರ್ಷ ಲಾಕ್​ಡೌನ್​ ವೇಳೆ ಅಂದರೆ ಏಪ್ರಿಲ್​ನಲ್ಲಿ ಬಿಡದಿಯ ತೋಟದಲ್ಲಿ ರೇವತಿ ಹಗೂ ನಿಖಿಲ್ ಅವರ ಮದುವೆಯಾಗಿತ್ತು. ಇತ್ತೀಚೆಗಷ್ಟೆ ರೇವತಿ ಅವರ ಸೀಮಂತ ಕಾರ್ಯಕ್ರಮ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನೆರವೇರಿತ್ತು. 

ಅಲ್ಲದೆ ರೇವತಿ ಅವರು ಗರ್ಭಿಣಿಯಾಗಿದ್ದ ವಿಷಯವನ್ನು ಅವರಿಗೆ ಐದು ತಿಂಗಳಾಗಿದ್ದಾಗ ಮಾವ ಕುಮಾರಸ್ವಾಂಮಿ ಅವರೇ ಮಾಧ್ಯಮ ಒಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ಬಹಿರಂಗಪಡಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ