HD Kumaraswamy ಶಾಲಾ-ಕಾಲೇಜು ಬಂದ್ ಸೇರಿದಂತೆ ಸರ್ಕಾರಕ್ಕೆ ಕೆಲ ಸಲಹೆ ಕೊಟ್ಟ ಕುಮಾರಸ್ವಾಮಿ

Published : Jan 18, 2022, 05:04 PM ISTUpdated : Jan 18, 2022, 05:12 PM IST
HD Kumaraswamy ಶಾಲಾ-ಕಾಲೇಜು ಬಂದ್ ಸೇರಿದಂತೆ ಸರ್ಕಾರಕ್ಕೆ ಕೆಲ ಸಲಹೆ ಕೊಟ್ಟ ಕುಮಾರಸ್ವಾಮಿ

ಸಾರಾಂಶ

* ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಹೆಚ್ಚಳ * ರಾಜ್ಯ ಸರ್ಕಾರಕ್ಕೆ ಕೆಲ ಸಲಹೆ ಕೊಟ್ಟ ಕುಮಾರಸ್ವಾಮಿ *  ಶಾಲಾ-ಕಾಲೇಜು ಬಂದ್ ಸೇರಿದಂತೆ ಸರ್ಕಾರಕ್ಕೆ ಹಲವು ಸಲಹೆ 

ಬೆಂಗಳೂರು, (ಜ.18): ಕರ್ನಾಟಕದಲ್ಲಿ ಕೊರೋನಾ ಮೂರನೇ ಅಲೆ(Corona Third wave) ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಇದನ್ನು ನಿಯಂತ್ರಣ ಮಾಡಲು ಸರ್ಕಾರ ಇನ್ನಿಲ್ಲದ ಕಸರತ್ತು ಮಾಡುತ್ತಿದೆ. ಇದರ ಮಧ್ಯೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ(HD Kumaraswamy) ಸರ್ಕಾರಕ್ಕೆ ಕೆಲ ಸಲಹೆಗಳನ್ನ ನೀಡಿದ್ದಾರೆ.

ಇಂದು(ಮಂಗಳವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ(Karnataka) ಕೊರೋನಾ ಪರಿಸ್ಥಿತಿ ಗಮನಿಸಿದರೆ ಶಾಲೆಗಳನ್ನು(Schools) 15 ದಿನ ಮುಚ್ಚುವುದು ಒಳ್ಳೆಯದು. ಫೆಬ್ರವರಿ ಮೊದಲ ವಾರದೊಳಗೆ ಎಲ್ಲ ಕಾಲೇಜುಗಳನ್ನು(Colleges) ಮುಚ್ಚುವುದು ಸೂಕ್ತ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

Covid Crisis: 231 ದಿನ ಬಳಿಕ ರಾಜ್ಯದಲ್ಲಿ 34047 ಕೋವಿಡ್‌ ಕೇಸ್‌

ನೈಟ್ ಕರ್ಫ್ಯೂ(Night Curfew) ಬಗ್ಗೆ ಅಸಮಾಧಾನ ವ್ಯಕ್ತಿಪಡಿಸಿರುವ ಕುಮಾರಸ್ವಾಮಿ, ಇದರಿಂದ ರಾಜ್ಯದ ಕೂಲಿ ಕಾರ್ಮಿಕರಿಗೆ ತೊಂದರೆಯಾಗುತ್ತಿದೆ. ನೈಟ್ ಕರ್ಫ್ಯೂ ಮುಂದುವರಿಸುವುದಾದರೆ ಜನರಿಗೆ ಸಹಾಯ ಮಾಡಬೇಕು. ಕೂಲಿಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಸಲಹೆ ನೀಡಿದರು.

 ಇಂದು 22 ಸಾವಿರ ಕೇಸ್ ಬರಲಿದೆ ಎನ್ನಲಾಗುತ್ತಿದೆ. ಕರ್ಫ್ಯೂ ವಿಚಾರವಾಗಿ ಬಿಜೆಪಿ ಪಕ್ಷದ ನಾಯಕರಲ್ಲೇ ಗೊಂದಲಗಳಿವೆ. ಕೆಲವರು ನೈಟ್ ಕರ್ಫ್ಯೂ ಜಾರಿಗೆ ತಂದಿರೋದು ಸರಿಯಿಲ್ಲ ಎನ್ನುತ್ತಿದ್ದಾರೆ. ಕೆಲ ವ್ಯಾಪಾರಿ ಸಂಘಟನೆಗಳಿಂದಲೂ ಇದಕ್ಕೆ ವಿರೋಧ ವ್ಯಕ್ತವಾಗಿದೆ. ಧಾರ್ಮಿಕ ಕ್ಷೇತ್ರದಲ್ಲಿ ಇನ್ನೊಂದೆರಡು ಬಿರುಸಿನ ಚಟುವಟಿಕೆ ನಡೆಯಲಿದೆ. ಬಾದಾಮಿ ಜಾತ್ರೆಯಲ್ಲಿ ನಲವತ್ತರಿಂದ ಐವತ್ತು ಸಾವಿರ ಭಕ್ತರು ಭಾಗಿಯಾಗಿದ್ದಾರೆ ಎಂಬ ಮಾಹಿತಿಯಿದೆ. ಸರ್ಕಾರದ ನೀತಿ ನಿಯಮಗಳಿಂದ ಇದನ್ನು ಕೊರೋನಾ ಪರಿಸ್ಥಿತಿ ಬದಲಿಸಲು ಸಾಧ್ಯವಿಲ್ಲ. ಸಾರ್ವಜನಿಕರು ಜವಾಬ್ದಾರಿಯಿಂದ ವರ್ತಿಸಬೇಕು ಎಂದು ಮನವಿ ಮಾಡಿದರು.

ಇನ್ನೊಂದು ವರ್ಷದಲ್ಲಿ ಚುನಾವಣಾ ಸಮಯ ಬರಲಿದೆ. ಆಗ ನಿಯಮಗಳನ್ನು ಉಲ್ಲಂಘಿಸಿದರೆ ಜನರೇ ಪ್ರಶ್ನೆ ಮಾಡುತ್ತಾರೆ. ಈಗಾಗಲೇ ಇಂಥ ಘಟನೆಗಳ ಬಗ್ಗೆ ಹಲವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ದೇವರ ದಯೆಯಿಂದ ಎರಡನೇ ಅಲೆಯಂತೆ ದೊಡ್ಡಮಟ್ಟದ ಗಂಭೀರ ಸಮಸ್ಯೆ ಎದುರಾಗಿಲ್ಲ ಎಂದರು.

ಮೇಕೆದಾಟು ಬಗ್ಗೆ ಪ್ರತಿಕ್ರಿಯೆ
ಮೇಕೆದಾಟು ವಿಚಾರವಾಗಿ ಕಾಂಗ್ರೆಸ್ ಪಾದಯಾತ್ರೆಯನ್ನು ಪ್ರಸ್ತಾಪಿಸಿದ ಕುಮಾರಸ್ವಾಮಿ,  ಮೇಕೆದಾಟು ಯೋಜನೆಗೆ ಡಿಪಿಆರ್ ಮಾಡಿಸಿದ್ದೇವೆ ಎಂಬ ಕಾಂಗ್ರೆಸ್‌ ನಾಯಕರ ಹೇಳಿಕೆಯನ್ನು ಜೆಡಿಎಸ್ (JDS) ನಾಯಕ ಎಚ್​.ಡಿ.ಕುಮಾರಸ್ವಾಮಿ ಸಾರಾಸಗಟಾಗಿ ತಳ್ಳಿಹಾಕಿದರು.

ಕಾಂಗ್ರೆಸ್‌ ಅಧಿಕಾರದ ಅವಧಿಯಲ್ಲಿ ಯಾವುದೇ ಡಿಪಿಆರ್ ಆಗಿಲ್ಲ. ನಾನು ಮುಖ್ಯಮಂತ್ರಿಯಾಗಿದ್ದಾಗ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದೆ. ಕಾಂಗ್ರೆಸ್ ನಾಯಕರ ಪಾದಯಾತ್ರೆ ಬಗ್ಗೆ ನನಗೆ ಯಾವುದೇ ಆತಂಕವಿಲ್ಲ. ಇನ್ನೂ 5 ವರ್ಷ ಯಾರು ಬೇಕಾದರೂ ಪಾದಯಾತ್ರೆ ಮಾಡಲಿ ಎಂದು ಸವಾಲು ಹಾಕಿದರು. 

ಅವರು ಪಾದಯಾತ್ರೆ (Mekedatu Padayatre) ಮಾಡಿದರೂ, ನಿಲ್ಲಿಸಿದರೂ ನಮಗೆ ಗಾಬರಿಯಿಲ್ಲ. ಜನರ ಮಾರಣಹೋಮ ಮಾಡಲು ನಾವು ತಯಾರು ಇಲ್ಲ. ಒಂದು ಎರಡು ಇದ್ದ ಸೋಂಕಿತರ ಸಂಖ್ಯೆಯು ಈಗ 400 ದಾಟುತ್ತಿದೆ. ಜನವರಿ 26ರಿಂದ ಜಲಧಾರಿ ಕಾರ್ಯಕ್ರಮ ಆರಂಭಿಸಬೇಕಿತ್ತು. ಆದರೆ ಕೊರೊನಾ ಪಿಡುಗು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಯೋಜನೆಯಿಂದ ಹಿಂದೆ ಸರಿದೆವು. ಕಳೆದ ಎರಡು ವರ್ಷಗಳಿಂದ ಕೊರೊನಾ ಪಿಡುಗು ಹೆಚ್ಚಾಗಿರುವ ಕಾರಣ, ಪಕ್ಷದ ಸಂಘಟನೆಯಿಂದಲೂ ಹಿಂದೆ ಸರಿಯಬೇಕಾಯಿತು ಎಂದು ವಿವರಿಸಿದರು.

ಕೇಂದ್ರ ಸಚಿವ ನಿತಿನ್ ಗಡ್ಕರಿ ನಡೆಸಿದ ವರ್ಚುವಲ್ ಕಾನ್ಫರೆನ್ಸ್​ನಲ್ಲಿ ಗತಿಶಕ್ತಿ ಯೋಜನೆಯ ಬಗ್ಗೆ ವಿಸ್ತೃತ ಚರ್ಚೆ ನಡೆದಿದೆ. ನೀರನ ವಿಚಾರದಲ್ಲಿ ನಾವು ಪೆಟ್ಟು ತಿಂದಿದ್ದೇವೆ. ಇದೇ ವಿಚಾರಗಳನ್ನು ಜನತೆಗೆ ತಿಳಿಸುತ್ತೇವೆ. ನಮ್ಮ ನೀರನ್ನು ಬಳಕೆ ಮಾಡುವಲ್ಲಿ ಎರಡು ರಾಷ್ಟ್ರೀಯ ಪಕ್ಷಗಳಿಂದ ಅನಾಹುತಗಳೇ ಆಗಿವೆ. ಚುನಾವಣೆ ಬಂದಾಗ ಮಾತ್ರ ಇವರಿಗೆ ನೀರು ನೆನಪಾಗುತ್ತದೆ. ಕೊರೋನಾ ಹಿನ್ನೆಲೆಯಲ್ಲಿ ಜೆಡಿಎಸ್ ಜಲಧಾರೆ ಕಾರ್ಯಕ್ರಮವನ್ನು  ಮುಂದೂಡಿದೆ ಎಂದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಂಕಣ | ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!
ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!