ಮತ್ತೆ ಆಸ್ಪತ್ರೆಗೆ ಭೇಟಿ ನೀಡಿ ಎಚ್‌ಡಿಕೆ ಆರೋಗ್ಯ ವಿಚಾರಿಸಿದ ಬೊಮ್ಮಾಯಿ

By Ravi JanekalFirst Published Sep 1, 2023, 8:45 PM IST
Highlights

ಅನಾರೋಗ್ಯ ಹಿನ್ನೆಲೆಯಲ್ಲಿ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆರೋಗ್ಯ ವಿಚಾರಿಸಲು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಜಯನಗರದ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿದರು.

ಬೆಂಗಳೂರು (ಸೆ.1): ಅನಾರೋಗ್ಯ ಹಿನ್ನೆಲೆಯಲ್ಲಿ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆರೋಗ್ಯ ವಿಚಾರಿಸಲು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಜಯನಗರದ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿದರು.

ಎಚ್‌ಡಿಕೆ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಮೊನ್ನೆಯೇ ನಾನು ಕುಮಾರಸ್ವಾಮಿಯವರ ಆರೋಗ್ಯ ವಿಚಾರಿಸಿದ್ದೇನೆ. ಇಂದು ಮತ್ತೆ ಅವರ ಆರೋಗ್ಯ ವಿಚಾರಿಸಲು ಬಂದಿದ್ದೆ. ಈಗವರು ಲವಲವಿಕೆಯಿಂದ ಇದ್ದಾರೆ. ಬೇಗ ಗುಣಮುಖರಾಗಲಿ ಎಂದು ಅಶಿಸುತ್ತೇನೆ ಎಂದರು.

Latest Videos

ಮಾಜಿ ಸಿಎಂ ಕುಮಾರಸ್ವಾಮಿ ಆರೋಗ್ಯ ಚೇತರಿಕೆ: ಐಸಿಯುನಿಂದ ವಾರ್ಡ್‌ಗೆ ಶಿಫ್ಟ್‌

ಕಾವೇರಿ ನೀರು ನಿರಂತರವಾಗಿ ಹೊರಬಿಡುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾವೇರಿ ವಿಚಾರದಲ್ಲಿ ಸಿಡಬ್ಲೂಎಂಎ ಆದೇಶ ಮಾಡಿ ನೀರು ಬಿಡಿಸ್ತಾ ಇದ್ರು. ಯಾಕೆ ನಮ್ಮವರು ಈ ವಿಷಯವನ್ನು ಸಮಗ್ರವಾಗಿ ವಾದ ಮಾಡ್ತಿಲ್ಲ ಅಂತ ಗೊತ್ತಾಗ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

 ಕಾವೇರಿ ಜಲಾನಯನ ಪ್ರದೇಶದಲ್ಲಿ ಎಷ್ಟು ಮಳೆ ಬಿದ್ದಿದೆ? ಇದನ್ನು ಮನವರಿಕೆ  ಮಾಡಿಕೊಂಡು ನಿರ್ಧಾರ ತಗೋಬೇಕು. ನೋಡಿ ವಾದ ಮಾಡುವಂತದ್ದು ಅನಿವಾರ್ಯ. 6ನೇ ತಾರೀಖಿಗೆ ಕಾವೇರಿ ವಿವಾದ ಕೋರ್ಟ್‌ನಲ್ಲಿ ವಿಚಾರಣೆ ಇದೆ. ಆದ್ರೆ ನೀರು ಮಾತ್ರ ನಿರಂತರ ಹರಿತಾನೆ ಇದೆ. ನಾನು ಸರ್ಕಾರಕ್ಕೆ ಹೇಳೋದು ಇಷ್ಟೇ, ಮೊದಲು ನೀರು ನಿಲ್ಲಿಸಿ ಆಮೇಲೆ ವಾದ ಮಾಡಿ. ನಮ್ಮ ರೈತರ ಹಿತಾಸಕ್ತಿ ಕಾಪಾಡೋದು ಮುಖ್ಯ. ನೀವು ತಮಿಳುನಾಡು ಎಷ್ಟು ನೀರು ಬಳಕೆ ಮಾಡಿದೆ ಅಂತ ವಾದ ಮಾಡೋಕೆ ತಯಾರಿಲ್ವಲ್ಲಾ? ನಾವು ರೈತರನ್ನು ಇಕ್ಕಟ್ಟಿಗೆ ಸಿಲುಕಿಸಿಲ್ಲ, ಸರ್ಕಾರವೇ ರೈತರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಕುಡಿಯೋ ನೀರಿನ ವಿಚಾರದಲ್ಲೂ ಜನಸಾಮಾನ್ಯರನ್ನು ಇಕ್ಕಟ್ಟಿಗೆ ಸಿಲುಕಿಸಿದೆ ಎಂದು ದೂರಿದರು. ಇದೇ ವೇಳೆ ಪ್ರಜ್ವಲ್ ರೇವಣ್ಣ ಸಂಸದ ಸ್ಥಾನದಿಂದ ಅನರ್ಹ ವಿಚಾರಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ, ನಾನು ಮನೆಯಲ್ಲಿದ್ದೆ ಈ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು. 

 

ಗಾಬರಿಯಾಗಬೇಡಿ, ಯಜಮಾನರು ಆರಾಮವಾಗಿ ಇದ್ದಾರೆ: ಅನಿತಾ ಕುಮಾರಸ್ವಾಮಿ

click me!