'ಸುಮಲತಾ ಗೆದ್ದಿದ್ದು ಕಾಂಗ್ರೆಸ್‌ನಿಂದ'ಸಿಎಂ ಹೇಳಿಕೆ; 'ಕೊನೆಗೂ ಸತ್ಯ ಕಕ್ಕಿದ್ದೀರಿ ಸುಳ್ಳುರಾಮಯ್ಯ': ಎಚ್‌ಡಿಕೆ ಕಿಡಿ

Published : Mar 10, 2024, 10:30 PM IST
'ಸುಮಲತಾ ಗೆದ್ದಿದ್ದು ಕಾಂಗ್ರೆಸ್‌ನಿಂದ'ಸಿಎಂ ಹೇಳಿಕೆ; 'ಕೊನೆಗೂ ಸತ್ಯ ಕಕ್ಕಿದ್ದೀರಿ ಸುಳ್ಳುರಾಮಯ್ಯ': ಎಚ್‌ಡಿಕೆ ಕಿಡಿ

ಸಾರಾಂಶ

ಸುಮಲತಾ ಬಿಜೆಪಿಯಿಂದ ಗೆದ್ದಿದ್ದಲ್ಲ, ಕಾಂಗ್ರೆಸ್‌ ವೋಟುಗಳಿಂದಲೇ ಗೆದ್ದಿದ್ದು ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ಡಿ. ಕುಮಾರಸ್ವಾಮಿ ತೀವ್ರವಾಗಿ ಕಿಡಿಕಾರಿದ್ದಾರೆ.v

ಬೆಂಗಳೂರು (ಮಾ.10): ಸುಮಲತಾ ಬಿಜೆಪಿಯಿಂದ ಗೆದ್ದಿದ್ದಲ್ಲ, ಕಾಂಗ್ರೆಸ್‌ ವೋಟುಗಳಿಂದಲೇ ಗೆದ್ದಿದ್ದು ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ಡಿ. ಕುಮಾರಸ್ವಾಮಿ ತೀವ್ರವಾಗಿ ಕಿಡಿಕಾರಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸರಣಿ ಫೋಸ್ಟ್ ಮಾಡಿರುವ ಕುಮಾರಸ್ವಾಮಿ, ಮಂಡ್ಯ ಜಿಲ್ಲೆಯ ಗ್ಯಾರಂಟಿಗಳ 2ನೇ ಸಮಾವೇಶದಲ್ಲಿ ಅಲವತ್ತುಕೊಂಡ ಸಿಎಂ ಸಿದ್ದರಾಮಯ್ಯ ನವರೇ.. ಕೊನೆಗೂ ಸತ್ಯ ನುಡಿದಿದ್ದೀರಿ! ಸುಳ್ಳುರಾಮಯ್ಯ ಬಿರುದಾಂಕಿತರಾದ ನೀವು, ಕೊನೆಗೂ ಸತ್ಯ ಕಕ್ಕಿದ್ದೀರಿ! ಸುಳ್ಳುರಾಮಯ್ಯನೆಂಬ ಕುಖ್ಯಾತಿಯಿಂದ ಹೊರಬರಲು ಪ್ರಾಮಾಣಿಕ ಪ್ರಯತ್ನ ನಡೆಸಿದ್ದೀರಿ. ಅಭಿನಂದನೆಗಳು ಎಂದಿದ್ದಾರೆ.

ಮದರಸಾಗಳು ಭಯೋತ್ಪಾದಕರನ್ನು ತಯಾರು ಮಾಡುವ ಕಾರ್ಖಾನೆಗಳಾಗಿವೆ: ಪ್ರಮೋದ್ ಮುತಾಲಿಕ್ ಕಿಡಿ

ಸತ್ಯ ಗಂಟಲಲ್ಲಿ ಸಿಕ್ಕಿಕೊಂಡ ಬಿಸಿತುಪ್ಪದಂತೆ.. ಕಕ್ಕಲೇಬೇಕು. 2019ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಆಯ್ಕೆಯಾದ ಪಕ್ಷೇತರ ಅಭ್ಯರ್ಥಿ ಗೆಲುವಿಗೆ ಕಾಂಗ್ರೆಸ್ಸೇ ಕಾರಣ ಎಂದು ಸ್ವತಃ ನೀವೇ ಒಪ್ಪಿಕೊಂಡಿದ್ದೀರಿ.ನಿಮ್ಮ ಗೋಮುಖವ್ಯಾಘ್ರತನ ಅರಿಯಲು ಇಷ್ಟು ಸಾಕು. ಅಂದು ಕಾಂಗ್ರೆಸ್ ಮೈತ್ರಿ ಪಕ್ಷ, ನಿಖಿಲ್‌ ಕುಮಾರಸ್ವಾಮಿ ಮೈತ್ರಿ ಅಭ್ಯರ್ಥಿ. ಅವರ ಜತೆಯಲ್ಲೇ ಪ್ರಚಾರದ ಸೋಗಿನಾಟವಾಡಿ, ಮಾಧ್ಯಮಗಳ ಮುಂದೆ ಗೆಲ್ಲಿಸುತ್ತೇವೆಂದು ಪೋಸು ಕೊಡುತ್ತಲೇ ನಿಖಿಲ್ ಸುತ್ತ ಶಕುನಿವ್ಯೂಹವನ್ನೇ ರಚಿಸಿದ ಕಲಿಯುಗ ಶಕುನಿ ನೀವಲ್ಲದೆ ಮತ್ತ್ಯಾರು ಸಿದ್ದರಾಮಯ್ಯನವರೇ ಎಂದು ಪ್ರಶ್ನಿಸಿದ್ದಾರೆ.

ಕಳ್ಳಬೆಕ್ಕು ಕದ್ದು ಹಾಲು ಕುಡಿದರೆ ಗೊತ್ತಾಗದೇ? ಬೂದಿ ಮುಚ್ಚಿದ ಕೆಂಡ ತಣ್ಣಗಿರಲು ಸಾಧ್ಯವೇ? ಕುದಿಯುವ ಕುಲುಮೆಯಂತಿರುವ ನಿಮ್ಮ ಉದರಹುರಿಗೆ ತಂಪೆನ್ನುವುದುಂಟೆ? 5 ವರ್ಷಗಳ ನಂತರವಾದರೂ ಸತ್ಯ ಕಕ್ಕಿದ್ದೀರಿ ಹಾಗೂ ನಂಬಿದವನ ಮನೆ ನಾಶವಾಗಲಿ ಎನ್ನುವ ನಿಮ್ಮಹೇಯತನ ಬಯಲಾಗಿದೆ. ಸತ್ಯಮೇಯ ಜಯತೆ. ಇದಿಷ್ಟೇ ನನ್ನ ಕಳಕಳಿ ಮತ್ತು ನಂಬಿಕೆ.ಸಕ್ಕರೆ ಕಾರ್ಖಾನೆ ಬಗ್ಗೆ ಹೇಳಿದ್ದೀರಿ. ಬಜೆಟ್‌ʼನಲ್ಲಿ ‌ಘೋಷಣೆ ಮಾಡಿದ್ದೀರಿ, ಸರಿ.. ದುಡ್ಡು ಎಲ್ಲಿಟ್ಟಿದ್ದೀರಿ. ನಾನು 2019ರ ಬಜೆಟ್‌ ನಲ್ಲಿಯೇ ಈ ಕಾರ್ಖಾನೆಗೆ 100 ಕೋಟಿ ತೆಗೆದಿರಿಸಿದ್ದೆ. ಎಲ್ಲಿ ಹೋಯಿತು ಆ ದುಡ್ಡು? ಇದರ ಬಗ್ಗೆ ಗ್ಯಾರಂಟಿ ಸಮಾವೇಶದಲ್ಲಿ ಚಕಾರ ಎತ್ತಿಲಿಲ್ಲವೇಕೆ ಸಿದ್ದರಾಮಯ್ಯನವರೇ? ಇಂಥ ಆತ್ಮವಂಚನೆ ಏತಕ್ಕೆ? ಎಂದು ಟೀಕಿಸಿದ್ದಾರೆ.

ಬಿಜೆಪಿ ಕಛೇರಿಯಲ್ಲಿ ಮತ್ತೆ 'ಗೋ ಬ್ಯಾಕ್  ಶೋಭಾ' ಘೋಷಣೆ; ಟಿಕೆಟ್ ಬದಲಾವಣೆಗೆ ಕಾರ್ಯಕರ್ತರು ಪಟ್ಟು!

ತನ್ನ ತಲೆಗೇ ಹರಳೆಣ್ಣೆ ಇಲ್ಲ, ಪಕ್ಕದವನಿಗೆ ಸಂಪಂಗೆಣ್ಣೆ ಕೊಟ್ಟನಂತೆ ನಿಮ್ಮಂಥವನೊಬ್ಬ! ನಿಮ್ಮ ವೈಖರಿ ಹಾಗಿದೆ. ಕನ್ನಡಿಗರು ಬರದ ಬೆಂಕಿಯಲ್ಲಿ ಬೇಯುತ್ತಿದ್ದರೆ ನಿಮ್ಮ ಸರಕಾರ ಕದ್ದೂಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದೆ! ಒಂದು ಕೈಲಿ ಅಗ್ಗದ ಗ್ಯಾರಂಟಿ ಕೊಟ್ಟು ಹತ್ತು ಕೈಗಳಲ್ಲಿ ಬದುಕಿನ ಗ್ಯಾರಂಟಿ ಕಿತ್ತುಕೊಳ್ಳುತ್ತಿದ್ದೀರಿ ಎಂದು ವಾಗ್ದಾಳಿ ನಡೆಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ
ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ