ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಹಾಗೂ ಹಾಲಿ ನಡೆಯುತ್ತಿರುವ ರೈಲ್ವೆ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಮನವಿ ಮಾಡಿದ್ದೇನೆ. ಅಲ್ಲದೆ, ಹೊಸ ರೈಲ್ವೆ ಮಾರ್ಗಗಳಿಗೆ ಅನುಮೋದನೆ ನೀಡಿ. ಹಣಕಾಸು ನೆರವು ಒದಗಿಸಲು ಕೋರಿದ್ದೇನೆ ಎಂದ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ
ನವದೆಹಲಿ(ಜೂ.20): ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬುಧವಾರ ದೆಹಲಿಯಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ, ರಾಜ್ಯದ ರೈಲ್ವೆ ಯೋಜನೆಗಳ ಕುರಿತು ಚರ್ಚೆ ನಡೆಸಿದರು.
ಭೇಟಿ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಕುಮಾರಸ್ವಾಮಿ, ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಹಾಗೂ ಹಾಲಿ ನಡೆಯುತ್ತಿರುವ ರೈಲ್ವೆ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಮನವಿ ಮಾಡಿದ್ದೇನೆ. ಅಲ್ಲದೆ, ಹೊಸ ರೈಲ್ವೆ ಮಾರ್ಗಗಳಿಗೆ ಅನುಮೋದನೆ ನೀಡಿ. ಹಣಕಾಸು ನೆರವು ಒದಗಿಸಲು ಕೋರಿದ್ದೇನೆ ಎಂದು ಹೇಳಿದ್ದಾರೆ.
undefined
ಮಂಡ್ಯ: ಮಂಡಿಸೇವೆ ಮೂಲಕ ಹರಕೆ ತೀರಿಸಿದ ಕುಮಾರಸ್ವಾಮಿ ಅಭಿಮಾನಿ..!
ಜೊತೆಗೆ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಅಧಿಕಾರಾವಧಿಯಲ್ಲಿ ಮಂಜೂರಾಗಿದ್ದ ಬೆಂಗಳೂರು-ಸತ್ಯಮಂಗಲ-ಚಾಮರಾಜನಗರ (ಕನಕಪುರ-ಮಳವಳ್ಳಿ ಮಾರ್ಗವಾಗಿ) ರೈಲ್ವೆ ಯೋಜನೆಯನ್ನು ಕೈಗೆತ್ತಿಕೊಂಡು ಆದಷ್ಟು ಶೀಘ್ರ ಪೂರ್ಣಗೊಳಿಸಲು ಮನವಿ ಮಾಡಿದ್ದೇನೆ. ಸಚಿವರು ನನ್ನ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ದ್ದಾರೆ ಎಂದು ಹೇಳಿದರು.