ಕೊರೋನಾ ಕಾಟ:' ಕ್ಯಾಬ್ ಚಾಲಕರ ಲೋನ್ ಪಾವತಿಗೆ ವಿನಾಯಿತಿ ನೀಡಿ’

By Suvarna News  |  First Published Mar 20, 2020, 12:09 PM IST

ಕೊರೋನಾ ವೈರಸ್ ಭೀತಿ ಹೆಚ್ಚುತ್ತಿರುವಂತೆಯೇ ಭಾರತದಲ್ಲಿ ಸಾವಿನ ಸಂಕ್ಯೆ ಐದಕ್ಕೇರಿದೆ. ಕರ್ನಾಟಕದಲ್ಲಿ ಸೋಂಕು ಬಾಧಿಸತರ ಸಂಖ್ಯೆ 15ಕ್ಕೆ ಏರಿದೆ. ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಎಚ್‌. ಡಿ. ಕುಮಾರಸ್ವಾಮಿ ಲೋನ್ ಮರುಪಾವತಿಗೆ ಜನಸಾಮಾನ್ಯರಿಗೆ ಸಮಯಾವಕಾಶ ಕಲ್ಪಿಸುವಂತೆ ಕೇಳಿದ್ದಾರೆ.


ಬೆಂಗಳೂರು[ಮಾ.20]: ಕೊರೋನಾ ವೈರಸ್ ಭೀತಿ ಹೆಚ್ಚುತ್ತಿರುವಂತೆಯೇ ಭಾರತದಲ್ಲಿ ಸಾವಿನ ಸಂಕ್ಯೆ ಐದಕ್ಕೇರಿದೆ. ಕರ್ನಾಟಕದಲ್ಲಿ ಸೋಂಕು ಬಾಧಿಸತರ ಸಂಖ್ಯೆ 15ಕ್ಕೆ ಏರಿದೆ. ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಎಚ್‌. ಡಿ. ಕುಮಾರಸ್ವಾಮಿ ಲೋನ್ ಮರುಪಾವತಿಗೆ ಜನಸಾಮಾನ್ಯರಿಗೆ ಸಮಯಾವಕಾಶ ಕಲ್ಪಿಸುವಂತೆ ಕೇಳಿದ್ದಾರೆ.

ಆರೋಗ್ಯ ಸೇವೆಗೆ ಹೆಚ್ಚಿನ ಹಣ, ಬ್ಯಾಂಕ್ ಸಾಲಗಳ ತಿಂಗಳ ಕಂತು ಮುಂದೂಡಿಕೆ, ಬಡ್ಡಿ ಮನ್ನ, ಮಾಸಾಶನ, MGNREGSಗೆ ಅನುದಾನ, ಪರಿಹಾರ ಘೋಷಣೆಯಂಥ ನಿರ್ಧಾರಗಳನ್ನು ನಾವೂ ಕೈಗೊಳ್ಳಬೇಕು. ಆರ್ಥಿಕ ದುರ್ಬಲರಿಗೆ ನೆರವಾಗುವ ಮೂಲಕ‌ ಆರ್ಥಿಕತೆಗೆ ಚೈತನ್ಯ ತುಂಬಬೇಕು. ಜೊತೆಗೆ ಕೊರೋನಾ ವೈರಸ್ ವಿರುದ್ಧದ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಬೇಕು.
(3/4)

— H D Kumaraswamy (@hd_kumaraswamy)

ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದು, ಈಗಾಗಲೇ ಕೊರೋನಾ ವೈರಸ್ ಹರಡದಂತೆ ನೋಡಿಕೊಳ್ಳಲು ಹಲವು ಕ್ರಮಗಳನ್ನು ಅನುಸರಿಸಲಾಗಿದೆ. ಕೊರೋನಾ ವೖರಸ್ ಭೀತಿ ಹೆಚ್ಚುತ್ತಿರುವಂತೆಯೇ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ.

Tap to resize

Latest Videos

ನಡುಕ ಹುಟ್ಟಿಸಿರುವ ಕೊರೋನಾಗೆ ತಾಯತ ಮಾರಾಟ!

ಕೊರೊನಾ ವೈರಸ್‌ನಿಂದ ಎದುರಾದ ನಿರ್ಬಂಧಗಳಿಂದ ದಿನಗೂಲಿ ನೌಕರರು, ಬೀದಿ ಬದಿ ವ್ಯಾಪಾರಿಗಳು ಹೆಚ್ಚು ಬಾಧಿತರಾಗಿದ್ದಾರೆ. 2 ತಿಂಗಳ ಅವರ ಬದುಕಿಗೆ ನೆರವಾಗುವಂತೆ ಸರ್ಕಾರ ಕಾರ್ಯಕ್ರಮ ರೂಪಿಸಬೇಕು. ಆಟೋ, ಕ್ಯಾಬ್ ಚಾಲಕರ ಬ್ಯಾಂಕ್ ಲೋನ್ ಕಂತು ಪಾವತಿಗೆ 2 ತಿಂಗಳ ವಿನಾಯಿತಿ ಕಲ್ಪಿಸಬೇಕು. ಈ ಮೂಲಕ ಸರ್ಕಾರ ಬಡವರ ಪರ ನಿಲುವು ತಾಳಬೇಕು ಎಂದು ಅವರು ಟ್ವೀಟ್ ಮಾಡಿದ್ದಾರೆ.

ಕೇರಳದಲ್ಲಿ 26 ಕೊರೊನಾ ಪ್ರಕರಣ ವರದಿಯಾಗಿದ್ದರೆ ಕರ್ನಾಟಕದಲ್ಲಿ 15 ಪ್ರಕರಣಗಳು ವರದಿಯಾಗಿವೆ. ಅಂದರೆ ರಾಜ್ಯದಲ್ಲಿ ಮಹಾಮಾರಿಯ ಬಗೆಗಿನ ಆತಂಕ, ಭೀತಿ ಕೇರಳಕ್ಕಿಂತಲೂ ಭಿನ್ನವೇನಲ್ಲ.ಇದು ರಾಜ್ಯದ ಆರ್ಥಿಕತೆಗೂ ಪೆಟ್ಟು ನೀಡುತ್ತಿದೆ. ಸದ್ಯ ಬಡ ವರ್ಗದ ಮೇಲೆ ಇದು ನೇರ ಪರಿಣಾಮ ಬೀರುತ್ತಿದೆ.ರಾಜ್ಯವೂ ಕೇರಳ ಮಾದರಿಯ ನಿರ್ಧಾರಕ್ಕೆ ಬರಬೇಕು.
(2/4)

— H D Kumaraswamy (@hd_kumaraswamy)
click me!