ಹತ್ಯೆಯಾದ ಮೂರೂ ಯುವಕರ ಮನೆಗೆ ಎಚ್‌ಡಿಕೆ ಭೇಟಿ, ಸೂಕ್ತ ತನಿಖೆಗೆ ಸರ್ಕಾರಕ್ಕೆ ಒತ್ತಾಯ

By Suvarna NewsFirst Published Aug 1, 2022, 3:37 PM IST
Highlights

ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಇಂದು ಮಂಗಳೂರು ಪ್ರವಾಸ ಕೈಗೊಂಡಿದ್ದು, ಹತ್ಯೆಯಾದ ಮೂವರ ನಿವಾಸಕ್ಕೂ ಭೇಟಿ ನೀಡಿದ್ದಾರೆ.  

ಮಂಗಳೂರು (ಆ. 01): ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಇಂದು ಮಂಗಳೂರು ಪ್ರವಾಸ ಕೈಗೊಂಡಿದ್ದು, ಹತ್ಯೆಯಾದ ಮೂವರ ನಿವಾಸಕ್ಕೂ ಭೇಟಿ ನೀಡಿದ್ದಾರೆ.  ಬೆಳ್ಳಾರೆಯ ಮಸೂದ್ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಜೊತೆಗೆ 5 ಲಕ್ಷ ರೂ ಪರಿಹಾರವನ್ನೂ ನೀಡಿದ್ದಾರೆ.

ಬಳಿಕ ಮಾತನಾಡಿ, ಸಿಎಂ ಸಾಹೇಬ್ರು ಬೊಮ್ಮಾಯಿ ಮನೆಗೆ ಭೇಟಿ ನೀಡಿ ಮಸೂದ್ ಮನೆಗೆ ಬರಲಿಲ್ಲ ಯಾಕೆ..? ಇಲ್ಲಿ ಸಿಎಂ ಬೇಜವಾಬ್ದಾರಿತನ ಎದ್ದು ಕಾಣುತ್ತಿದೆ. ಈ ಪ್ರಕರಣದ ತನಿಖೆ ನಡೆದು ಸತ್ಯಾಸತ್ಯತೆ ಹೊರ ಬರಲಿ ಎಂದು ಆಗ್ರಹಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಸಿಎಂ ಪ್ರತಿಕ್ರಿಯಿಸಿದ್ದಾರೆ. ಸದ್ಯದಲ್ಲೇ ಫಾಸಿಲ್ ಹಾಗೂ ಮಸೂದ್ ಮನೆಗೆ ಭೇಟಿ ನೀಡುತ್ತೇನೆ ಎಂದು ಸಿಎಂ ವಿವಾದಕ್ಕೆ ತೆರೆ ಎಳೆದಿದ್ದಾರೆ. 

ಪ್ರವೀಣ್ ಮನೆಗೆ ಭೇಟಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಜೊತೆ 5 ಲಕ್ಷ ರೂ ಪರಿಹಾರ ನೀಡಿದ್ದಾರೆ. ಪ್ರವೀಣ್ ಸಾವಿಗೆ ಕಾರಣರಾದವರಿಗೆ ಕಠಿಣ ಶಿಕ್ಷೆ ಆಗಬೇಕು. ಕಾಟಾಚಾರಕ್ಕೆ ತನಿಖೆ ಆಗಬಾರದು' ಎಂದು ಒತ್ತಾಯಿಸಿದ್ದಾರೆ. 

ಮಂಗಳೂರಿನಲ್ಲಿ ಕಳೆದ ಹದಿನೈದು, ಇಪ್ಪತ್ತು ವರ್ಷಗಳಿಂದ ಎರಡು ಕೋಮುಗಳ ನಡುವೆ ಸಾಮರಸ್ಯದ ಕೊರತೆ ಇದೆ. ಇದನ್ನು ಸರಿಪಡಿಸುವುದು ಸರ್ಕಾರದ ಕೆಲಸ. ಆದರೆ ಸಮಾಜದಲ್ಲಿ ಕೋಮು ಭಾವನೆ ಮೂಡುವ ವಾತಾವರಣ ನಿರ್ಮಾಣ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.

 

click me!