
ಬೆಂಗಳೂರು[ಡಿ.16]: ಸೋಮವಾರ ಮಧ್ಯಪ್ರದೇಶದಲ್ಲಿ ಬಹುಕಾಲದ ನಂತರ ಅಸ್ತಿತ್ವಕ್ಕೆ ಬರುತ್ತಿರುವ ಕಾಂಗ್ರೆಸ್ ನೇತೃತ್ವದ ನೂತನ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ.
ಸೋಮವಾರ ಮಧ್ಯಪ್ರದೇಶ ನೂತನ ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕುಮಾರಸ್ವಾಮಿ ಅವರು ಭಾಗವಹಿಸಲಿದ್ದಾರೆ. ಸೋಮವಾರ ಬೆಳಗ್ಗೆ ವಿಶೇಷ ವಿಮಾನದಲ್ಲಿ ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ಗೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಜೊತೆ ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರ ನಡೆಸುತ್ತಿರುವ ಜೆಡಿಎಸ್ ನಾಯಕರು ಮುಂಬರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯನ್ನು ರಾಷ್ಟ್ರಮಟ್ಟದಲ್ಲೂ ಕಾಂಗ್ರೆಸ್ ಜೊತೆಗೆ ಎದುರಿಸಲು ನಿರ್ಧರಿಸಿದ್ದಾರೆ. ಹೀಗಾಗಿ, ಮೈತ್ರಿ ಗಟ್ಟಿಗೊಳಿಸುವ ಸಂಬಂಧ ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರುವ ಸನ್ನಿವೇಶದಲ್ಲಿ ಉಪಸ್ಥಿತರಿರಲು ಮುಂದಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ