ಹಲವು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿ ಪ್ರಜ್ವಲ್ ವಿಡಿಯೋ ಚಿತ್ರೀಕರಣ ಮಾಡಿಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದರು ಎಂದು ಎಸ್‌ಐಟಿ ಹೇಳಿದೆ. ಇದರೊಂದಿಗೆ ಹಾಸನ ಪೆನ್ ಡ್ರೈವ್ ಹಗರಣ ಬಯಲಾದ ಬಳಿಕ ಇದೇ ಮೊದಲ ಬಾರಿಗೆ ಅಧಿಕೃತವಾಗಿ ಪ್ರಜ್ವಲ್ ರೇವಣ್ಣರವರಿಂದ ಹಲವು ಮಹಿಳೆಯರು ಲೈಂಗಿಕ ದೌರ್ಜನ್ಯಕ್ಕೆ ತುತ್ತಾಗಿದ್ದಾರೆ ಎಂದು ಎಸ್‌ಐಟಿ ಹೇಳಿದೆ.
ಬೆಂಗಳೂರು(ಆ.24): ತಮ್ಮ ಮನೆ ಕೆಲಸದ ಮಹಿಳೆಗೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಲೈಂಗಿಕ ಕಿರುಕುಳ ನೀಡಿರುವುದು ಹಾಗೂ ಅವರ ಪುತ್ರ ಮತ್ತು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿರುವುದು ದೃಢಪಟ್ಟಿದೆ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಶುಕ್ರವಾರ ಸಲ್ಲಿಸಿದ ಆರೋಪಪಟ್ಟಿಯಲ್ಲಿ ವಿಶೇಷ ತನಿಖಾ ತಂಡ ಉಲ್ಲೇಖಿಸಿದೆ.
(ಎಸ್‌ಐಟಿ) ಅಲ್ಲದೆ ಹಲವು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿ ಪ್ರಜ್ವಲ್ ವಿಡಿಯೋ ಚಿತ್ರೀಕರಣ ಮಾಡಿಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದರು ಎಂದು ಎಸ್‌ಐಟಿ ಹೇಳಿದೆ. ಇದರೊಂದಿಗೆ ಹಾಸನ ಪೆನ್ ಡ್ರೈವ್ ಹಗರಣ ಬಯಲಾದ ಬಳಿಕ ಇದೇ ಮೊದಲ ಬಾರಿಗೆ ಅಧಿಕೃತವಾಗಿ ಪ್ರಜ್ವಲ್ ರೇವಣ್ಣರವರಿಂದ ಹಲವು ಮಹಿಳೆಯರು ಲೈಂಗಿಕ ದೌರ್ಜನ್ಯಕ್ಕೆ ತುತ್ತಾಗಿದ್ದಾರೆ ಎಂದು ಎಸ್‌ಐಟಿ ಹೇಳಿದೆ.
ಪೆನ್‌ಡ್ರೈವ್ ಹಂಚಿದ ಪ್ರೀತಂಗೌಡ: ಎಚ್‌ಡಿಕೆ ಆರೋಪಕ್ಕೆ ಬಿಜೆಪಿ ಮೌನವೇಕೆ?, ಡಿಕೆಶಿ ಪ್ರಶ್ನೆ
ಏನಿದು ಪ್ರಕರಣ:
ಲೋಕಸಭಾ ಚುನಾವಣೆ ವೇಳೆ ಹಾಸನ ಕ್ಷೇತ್ರದಲ್ಲಿ ಪ್ರಜ್ವಲ್‌ಗೆ ಸಂಬಂಧಿ ಸಿದ್ದು ಎನ್ನಲಾದ ಅಶ್ಲೀಲ ದೃಶ್ಯಾವಳಿಗಳು ತುಂಬಿದ್ದ ಪೆನ್ ಡ್ರೈವ್ ಬಹಿರಂಗವಾಗಿತ್ತು. ಈ ಕೃತ್ಯ ಬೆಳಕಿಗೆ ಬಂದ ಬಳಿಕ ಹೊಳೆನರಸೀಪುರ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಆರೋಪ ಹೊರಿಸಿ ಮಾಜಿ ಸಚಿವ ರೇವಣ್ಣ ಹಾಗೂ ಅವರ ಪುತ್ರ ಪ್ರಜ್ವಲ್ ವಿರುದ್ಧ ಅವರಮನೆ ಕೆಲಸದಾಳು ದೂರು ನೀಡಿದ್ದರು.
ಈ ದೂರಿನ ಮೇರೆಗೆ ಹೊಳೆನರಸೀಪುರ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಬಳಿಕ ಈ ಲೈಂಗಿಕ ಹಗರಣದ ಕುರಿತು ಎಸ್ ಐಟಿ ತನಿಖೆಗೆ ರಚಿಸಿತ್ತು. ಅಂತೆಯೇ ಹಾಸನ ಪೆನ್‌ಡೆವ್ ಪ್ರಕರಣದ ತನಿಖೆಗಿಳಿದ ಎಸ್ ಐಟಿ, ಈಗ ಹೊಳೆನರಸೀಪುರ ಠಾಣೆಯಲ್ಲಿ ತಂದೆ-ಮಗನ ವಿರುದ್ಧ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಿದೆ. 2144 ಪುಟಗಳು, 137 ಸಾಕ್ಷಿಗಳು: ಹೊಳೆ ನರಸೀಪುರ ತಾಣೆಯಲ್ಲಿ ದಿ.28 ರಂದು ಲೈಂಗಿಕ ದೌರ್ಜನ್ಯದಡಿ 47 ವರ್ಷದ ಮನೆಗೆಲಸದ ಮಹಿಳೆ ದೂರು ನೀಡಿದರು. ಮೊದಲು ತಂದೆ-ಮಗನ ವಿರುದ್ಧ ಲೈಂಗಿಕ ಕಿರುಕುಳ ಆರೋಪದಡಿ ಎಫ್ ಐಆರ್ ದಾಖಲಾಗಿತ್ತು. ಆದರೆ ತನಿಖೆ ವೇಳೆ ಸಂತ್ರಸ್ತೆ ಮೇಲೆ ಪ್ರಜ್ವಲ್ ಅತ್ಯಾಚಾರ ಎಸಗಿರುವುದು ಬಯಲಾಗಿತ್ತು. ಹೀಗಾಗಿ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಹಾಗೂ ಪ್ರಜ್ವಲ್ ಮೇಲೆ ಅತ್ಯಾಚಾರ ಆರೋಪದಡಿ 2144 ಪುಟಗಳ ದೋಷಾರೋಪಪಟ್ಟಿಯನ್ನು ಎಸ್‌ಐಟಿ ಸಲ್ಲಿಸಿದೆ.
ಈ ಆರೋಪ ಪಟ್ಟಿಯಲ್ಲಿ 150ಕ್ಕೂ ಅಧಿಕ ಸಾಕ್ಷಿಗಳ ಹೇಳಿಕೆ, ವೈಜ್ಞಾನಿಕ ವರದಿಗಳು ಹಾಗೂ ತಾಂತ್ರಿಕ ಪುರಾವೆಗಳನ್ನು ಸಹ ಲಗತ್ತಿಸಲಾಗಿದೆ ಎಂದು ಎಸ್‌ಐಟಿ ಹೇಳಿದೆ. ಹಣ್ಣು ಕೊಟ್ಟು ಕಿರುಕುಳ ನೀಡಿದ ರೇವಣ್ಣ: ತಮ್ಮ ಪತ್ನಿ ಭವಾನಿ ರೇವಣ್ಣರವರ ಶಿಫಾರಸಿನ ಮೇರೆಗೆ ಹೊಳೆನರಸೀಪುರದ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಅಡುಗೆ ಕೆಲಸಕ್ಕೆ ಸಹಾಯಕರಾಗಿ ಸಂತ್ರಸ್ತೆಯನ್ನು ರೇವಣ್ಣ ನೇಮಿಸಿದ್ದರು. ಅಲ್ಲದೆ ಹಾಸ್ಟೆಲ್‌ನಲ್ಲಿ ಕೆಲಸ ಮಾಡಿಕೊಂಡೇ ರೇವಣ್ಣ ಮನೆಯಲ್ಲಿ 2019ರಿಂದ 2022 ಮನೆಗೆಲಸಕ್ಕೂ ಸಂತ್ರಸ್ತೆ ನಿಯೋಜಿತರಾಗಿದ್ದರು. ಆಗ ರೇವಣ್ಣ ಅವರು ಭವಾನಿ ಮನೆಯಲ್ಲಿ ಇಲ್ಲದ ಸಮಯ ನೋಡಿಕೊಂಡು ಹಣ್ಣು ಕೊಡುವ ನೆಪದಲ್ಲಿ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು ಎಂದು ದೋಷಾರೋಪಟ್ಟಿಯಲ್ಲಿ ಉಲ್ಲೇಖವಾಗಿದೆ.
ಅತ್ಯಾಚಾರ ಎಸಗಿದ ಪ್ರಜ್ವಲ್:
ಹೊಳೆನರಸೀಪುರದಮನೆಯಲ್ಲಿ ಮನೆಗೆಲಸದ ಮಹಿಳೆಯನ್ನು ಪ್ರಜ್ವಲ್ ಲೈಂಗಿಕವಾಗಿ ಶೋಷಿಸಿದ್ದಾರೆ. ಆಗಾಗ ಸಂತ್ರಸ್ತೆಗೆ ಫೋನ್ ಕರೆ ಮಾಡಿ ಲೈಂಗಿಕ ಕಿರುಕುಳ ನೀಡುತ್ತಿದ್ದರು. ಅಲ್ಲದೆ 2020ರಲ್ಲಿ ಬೆಂಗಳೂರಿನ ಬಸವನಗುಡಿ ಮನೆ ಯಲ್ಲಿ ಪ್ರಜ್ವಲ್, ಸಂತ್ರಸ್ತೆ ಮೇಲೆ ಅತ್ಯಾಚಾರ ಎಸಗಿದ್ದರು. ಆ ದಿನ ಅತ್ಯಾಚಾರ ಮಾಡುತ್ತಲೇ ತಮ್ಮ ಮೊಬೈಲ್‌ನಿಂದ ಕೃತ್ಯವನ್ನು ಪ್ರಜ್ವಲ್ ರೆಕಾರ್ಡ್ ಮಾಡಿಕೊಂಡಿದ್ದರು. ಈ ಕೃತ್ಯದ ಬಗ್ಗೆ ಯಾರಿಗಾದರೂ ಹೇಳಿದರೆ ನಿನ್ನ ಗಂಡನನ್ನು ಜೈಲು ಪಾಲು ಮಾಡುತ್ತೇನೆ ಮತ್ತೆ ನಿನ್ನ ಮಗಳಿಗೂ ಇದೇ ಗತಿ ಮಾಡುತ್ತೇನೆ ಎಂದು ಪ್ರಜ್ವಲ್ ಬೆದರಿಕೆ ಹಾಕಿರುವುದು ತನಿಖೆಯಲ್ಲಿ ರುಜುವಾತಾಗಿದೆ.
ಹಲವು ಮಹಿಳೆಯರಿಗೆ ರೇಪ್ ಮಾಡಿ ವಿಡಿಯೋ!:
ಅತ್ಯಾಚಾರ ಪ್ರಕರಣದ ಇಬ್ಬರು ಸಂತ್ರಸ್ತೆಯರು ಮಾತ್ರವಲ್ಲದೆ ಮೂವರು ಸಾಕ್ಷಿಗಳು ಸೇರಿದಂತೆ ಮಹಿಳೆಯವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆ ಸಮಯದಲ್ಲಿ ತಾನುಬಳಸುತ್ತಿದ್ದ ಮೊಬೈಲ್‌ನಲ್ಲಿ ಅದೆಲ್ಲವನ್ನು ಚಿತ್ರೀಕರಿಸಿಕೊಂಡಿದ್ದರು. ಈ ಮಾಹಿತಿ ತಮ್ಮ ಕ್ಷೇತ್ರದ ಜನರಲ್ಲಿ ಹರಡುತ್ತಿದ್ದಂತೆ ಕಾನೂನು ಕ್ರಮದಿಂದ ಉದ್ದೇಶಪೂರ್ವಕವಾಗಿ ವಿದೇಶಕ್ಕೆ ಪಲಾಯನಗೈದು ಮೊಬೈಲ್ ಸಾಕ್ಷ್ಯ ನಾಶ ಪಡಿಸಿದ್ದಲ್ಲದೇ ಈ ಹಿಂದೆ ತಾವು ಬಳಸಿದ್ದ ಫೋನ್‌ಗಳಲ್ಲಿ ವಿದ್ಯುಸ್ಥಾನ ಸಾಕ್ಷಿಗಳನ್ನು ನಾಶಪಡಿಸಿದ ಬಗ್ಗೆ ತನಿಖೆಯಿಂದ ದೃಢಪಟ್ಟದ ಎಂದು ಎಸ್‌ಐಟಿ ಹೇಳಿದೆ.
ಪ್ರಜ್ವಲ್ ಪೆನ್‌ಡ್ರೈವ್ ಕೇಸ್: ಸಂತ್ರಸ್ತೆಯ ಕಿಡ್ನಾಪ್ ಮಾಡಿಸಿದ್ದು ರೇವಣ್ಣ, ಭವಾನಿ..!
ಸಂತ್ರಸ್ತೆಗೆ ನಗ್ನಗೊಳ್ಳುವಂತೆ ವಿಡಿಯೋ ಕಾಲ್:
ಸಂತ್ರಸ್ತೆಗೆ ವಿಡಿಯೋ ಕಾಲ್ ಮಾಡಿ ಬಟ್ಟೆ ಬಿಚ್ಚುವಂತೆ ಪ್ರಜ್ವಲ್ ಪೀಡಿಸುತ್ತಿದ್ದ ವಿಕೃತ ಕೃತ್ಯ ಆರೋಪ ಪಟ್ಟಿಯಲ್ಲಿ 2020-21ರಲ್ಲಿ ತನ್ನ ತಾಯಿ ಮನೆಗೆ ಸಂತ್ರಸ್ತೆ ತೆರಳಿದ್ದರು. ಆಗ ಅವರ ಮೊಬೈಲ್‌ಗೆ ಕರೆ ಮಾಡಿದ ಪ್ರಜ್ವಲ್, 'ವಾಟ್ಸ್ ಆಪ್ ವಿಡಿಯೋಕಾಲ್ ಮಾಡ್ತೀನಿರಿಸೀವ್ ಮಾಡು' ಎಂದಿದ್ದರು. ಬಳಿಕ ವಿಡಿಯೋ ಕಾಲ್ ಮಾಡಿ ಸಂತ್ರಸ್ತೆಗೆ ಮೈ ಮೇಲಿನ ಬಟ್ಟೆ ಬಿಚ್ಚಿ ಎದೆ ಭಾಗ ತೋರಿಸುವಂತೆ ಒತ್ತಾಯಿಸುತ್ತಿದ್ದರು. ಇದಕ್ಕೊಪ್ಪದೆ ಹೋದಾಗ ನಿಮ್ಮ ತಾಯಿ ಮತ್ತು ನಿನ್ನ ಗಂಡನ ಮನೆಯವರಿಗೆ ನೀನು ನನ್ನ ಜೊತೆ ಸಂಬಂಧ ಇಟ್ಟುಕೊಂಡಿದ್ದಿಯಾ ಎಂದು ಹೇಳುವೆ ಎಂದು ಬೆದರಿಸಿದರು. ಈ ಬ್ಯಾಕ್ ಮೇಲ್‌ಗೆ ಹೆದರಿ ಸಂತ್ರಸ್ತೆ ಮೈ ಮೇಲಿನ ಬಟ್ಟೆ ತೆಗೆದು ಎದೆ ಭಾಗ ತೋರಿಸಿ ಅರೆ ನಗ್ನವಾಗಿದ್ದರು. ಈ ಕೃತ್ಯವನ್ನು ತಮ್ಮ ಮೊಬೈಲ್‌ನಲ್ಲಿ ಸ್ಟೀನ್ ಕಾಟ್ ಫೋಟೊ ಮಾಡಿಕೊಂಡು ಸಾಮಾಜಿಕ ಜಾಲತಾಣ ಹಾಗೂ ದೃಶ್ಯಮಾಧ್ಯಮಗಳಲ್ಲಿ ಹರಿದಾಡಲು ಪ್ರಜ್ವಲ್ ಕಾರಣಕರ್ತನಾಗಿರುವುದು ತನಿಖೆಯಲ್ಲಿ
ಇನ್ನೂ 2 ರೇಪ್, ಪೆನ್‌ಡ್ರೈವ್ ಕೇಸ್ ಬಾಕಿ ಹಾಸನ ಪೆನ್ ಡ್ರೈವ್ ಹಗರಣ ಸಂಬಂಧ ಪ್ರಜ್ವಲ್ ವಿರುದ್ಧ ಮೂರು ಅತ್ಯಾಚಾರ ಹಾಗೂ ಪೆನ್ ಡ್ರೈವ್ ಹಂಚಿಕೆ ಸೇರಿ ನಾಲ್ಕು ಪ್ರಕರಣಗಳು ದಾಖಲಾಗಿದೆ. ಈಗ ಒಂದು ಅತ್ಯಾಚಾರ ಪ್ರಕರಣದ ತನಿಖೆ ಮುಗಿಸಿ ಎಸ್‌ಐಟಿ ಆರೋಪ ಪಟ್ಟಿ ಸಲ್ಲಿಸಿದೆ. ಇನ್ನುಳಿದ ಪ್ರಕರಣಗಳ ಸಂಬಂಧ ಕೆಲವೇ ದಿನಗಳಲ್ಲಿ ಚಾರ್ಜ್ ಶೀಟ್ ಸಲ್ಲಿಸಲಿದೆ ಎಂದು ತಿಳಿದು ಬಂದಿದೆ.
ಮನೆಗೆಲಸದ ಒಬ್ಬಳೇ ಮಹಿಳೆಗೆ ತಂದೆಯಿಂದ ಕಿರುಕುಳ, ಮಗ ರೇಪ್!
ತಮ್ಮ ಮನೆಗೆಲಸದ ಮಹಿಳೆಯೊಬ್ಬರಿಗೆ ಎಚ್. ಡಿ. ರೇವಣ್ಣ ಲೈಂಗಿಕ ಕಿರುಕುಳ ನೀಡಿರುವುದು ಸಾಬೀತಾಗಿದೆ ಎಂದು ಚಾರ್ಜ್ ಶೀಟ್‌ನಲ್ಲಿ ಹೇಳಲಾಗಿದೆ. ಆಕೆಗೆ ಹಣ್ಣು ಕೊಡುವ ನೆಪದಲ್ಲಿ ಹೊಳೆನರಸೀಪುರದ ಮನೆಯ ಮಹಡಿ ಮೇಲಿನ ಕೋಣೆಗೆ ಕರೆಸಿಕೊಂಡು ರೇವಣ್ಣ ಕಿರುಕುಳ ನೀಡುತ್ತಿದ್ದರು. ಇನ್ನು, ಅದೇ ಮಹಿಳೆಯ ಮೇಲೆ ಬೆಂಗಳೂರಿನ ಬಸವನಗುಡಿಯ ಮನೆಯಲ್ಲಿ ಪ್ರಜ್ವಲ್ ಅತ್ಯಾಚಾರ ಎಸಗಿರುವುದು ಕೂಡ ಸಾಬೀತಾಗಿದೆ. ಆ ದೃಶ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡು ಮತ್ತೆ ಮತ್ತೆ ಪ್ರಜ್ವಲ್ ಬ್ಲಾಕ್ಷೇಲ್ ಮಾಡಿದ್ದಾರೆ ಎಂದು ಚಾರ್ಜ್ ಶೀಟ್‌ನಲ್ಲಿ ತಿಳಿಸಲಾಗಿದೆ. ಹಲವು ಮಹಿಳೆಯರಿಗೆ ರೇಪ್ ಮಾಡಿ ವಿಡಿಯೋ! ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಚಿತ್ರೀಕರಿಸಿಕೊಂಡು ಪ್ರಜ್ವಲ್ ಬೆದರಿಕೆ ಹಾಕುತ್ತಿದ್ದರು ಎಂಬ ಮಹತ್ವದ ಸಂಗತಿಯನ್ನು ಆರೋಪ ಪಟ್ಟಿಯಲ್ಲಿ ಎಸ್‌ಐಟಿ ಉಲ್ಲೇಖಿಸಿದೆ.