ಅನಾರೋಗ್ಯ ಹಿನ್ನೆಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ನಾಳೆ ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ.
ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ನಾಳೆ ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ.
ಕುಮಾರಸ್ವಾಮಿ(HD Kumaraswamy) ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಡಿಸ್ಚಾಜ್‌ರ್ ಮಾಡಲು ವೈದ್ಯರು ತೀರ್ಮಾನಿದ್ದಾರೆ. ಬುಧವಾರ ನಸುಕಿನ ವೇಳೆ ರಕ್ತನಾಳದಲ್ಲಿ ಸಮಸ್ಯೆ ಕಂಡು ಬಂದು ಲಘುವಾಗಿ ಸ್ಟ್ರೋಕ್ ಆಗಿ ಮಾತು ತೊದಲುತ್ತಿದ್ದ ಕಾರಣ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದು ಬಂದಿದೆ.
undefined
ಮತ್ತೆ ಆಸ್ಪತ್ರೆಗೆ ಭೇಟಿ ನೀಡಿ ಎಚ್‌ಡಿಕೆ ಆರೋಗ್ಯ ವಿಚಾರಿಸಿದ ಬೊಮ್ಮಾಯಿ
ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮಾಜಿ ಸಚಿವ ರೇಣುಕಾಚಾರ್ಯ, ಶಾಸಕ ಸಮೃದ್ಧಿ ಮಂಜುನಾಥ್ ಸೇರಿದಂತೆ ಇತರೆ ಮುಖಂಡರು ಅಪೋಲೋ ಆಸ್ಪತ್ರೆ(Apollo hospital jayanagar)ಗೆ ಭೇಟಿ ನೀಡಿ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದರು. ಈ ವೇಳೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕುಮಾರಸ್ವಾಮಿ ಅವರು ಲಘು ಪಾರ್ಶ್ವವಾಯು ಆಗಿತ್ತು. ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದಿದ್ದಾರೆ. ಅವರು ಗುಣಮುಖವಾಗಿದ್ದು, ಚೆನ್ನಾಗಿ ಮಾತನಾಡುತ್ತಿದ್ದಾರೆ. ಭಾನುವಾರ ಮನೆಗೆ ಹೋಗುವುದಾಗಿ ಹೇಳಿದ್ದು, ಆತಂಕ ಪಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ ಎಂದರು.
ಮಾಜಿ ಸಚಿವ ರೇಣುಕಾಚಾರ್ಯ ಮಾತನಾಡಿ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ್ದು, ಗುಣಮುಖರಾಗಿದ್ದಾರೆ. ರಾಜಕೀಯ ಏನೇ ಇರಲಿ ಅವರು ವಿಶ್ರಾಂತಿ ಪಡೆಯಬೇಕು. ವೈದ್ಯರು ಸಹ ಅದನ್ನೇ ಹೇಳಿದ್ದಾರೆ ಎಂದು ತಿಳಿಸಿದರು.
ಆಸ್ಪತ್ರೆಯಿಂದಲೇ ಕಾವೇರಿ ಹೋರಾಟಕ್ಕೆ ಕರೆಕೊಟ್ಟ ಮಾಜಿ ಸಿಎಂ ಕುಮಾರಸ್ವಾಮಿ