RAF ಘಟಕದಲ್ಲಿ ಹಿಂದಿ ಹೇರಿಕೆ-ಕನ್ನಡ ಕಡೆಗಣನೆ : ಎಚ್‌ಡಿಕೆ ಆಕ್ರೋಶ

Suvarna News   | Asianet News
Published : Jan 17, 2021, 12:57 PM ISTUpdated : Jan 17, 2021, 01:14 PM IST
RAF ಘಟಕದಲ್ಲಿ ಹಿಂದಿ ಹೇರಿಕೆ-ಕನ್ನಡ ಕಡೆಗಣನೆ : ಎಚ್‌ಡಿಕೆ ಆಕ್ರೋಶ

ಸಾರಾಂಶ

ಶಿವಮೊಗ್ಗದ ಭದ್ರಾವತಿಯಲ್ಲಿ ಶನಿವಾರ RAF ಘಟಕಕ್ಕೆ ಗೃಹಸಚಿವರಾದ ಅಮಿತ್ ಷಾ ಅವರು ಶಂಕುಸ್ಥಾಪನೆ ನೆರವೇರಿಸಿದ್ದು, ಅಡಿಗಲ್ಲು ಫಲಕ ಅನಾವರಣಗೊಳಿಸಿದ್ದಾರೆ. ಅಡಿಗಲ್ಲು ಫಲಕಗಳು ಹಿಂದಿ ಮತ್ತು ಆಂಗ್ಲಭಾಷೆಯಲ್ಲಿದ್ದು ಕನ್ನಡ ಅಳವಡಿಕೆ ಮಾಡದ ಸಂಬಂಧ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ.

ಶಿವಮೊಗ್ಗ (ಜ.17) : ಭದ್ರಾವತಿಯಲ್ಲಿ ಆರ್‌ಎಎಫ್ ಘಟಕಕ್ಕೆ ಚಾಲನೆ ನೀಡಲಾಗಿದ್ದು ಇಲ್ಲಿ ಕನ್ನಡ ಫಲಕವನ್ನು ಅಳಡಿಸಿಲ್ಲ. ಈ ನಿಟ್ಟಿನಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ. ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಕನ್ನಡ ಕಡೆಗಣನೆ ಮಾಡಿರುವ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಾಹಾಕಿದ್ದಾರೆ. 

ಶಿವಮೊಗ್ಗದ ಭದ್ರಾವತಿಯಲ್ಲಿ ಶನಿವಾರ RAF ಘಟಕಕ್ಕೆ ಗೃಹಸಚಿವರಾದ ಅಮಿತ್ ಷಾ ಅವರು ಶಂಕುಸ್ಥಾಪನೆ ನೆರವೇರಿಸಿದ್ದು, ಅಡಿಗಲ್ಲು ಫಲಕ ಅನಾವರಣಗೊಳಿಸಿದ್ದಾರೆ. ಅಡಿಗಲ್ಲು ಫಲಕಗಳು ಹಿಂದಿ ಮತ್ತು ಆಂಗ್ಲಭಾಷೆಯಲ್ಲಿವೆ. ಇಲ್ಲಿ ಕನ್ನಡದ ಅವಗಣನೆ ನಿಚ್ಚಳವಾಗಿ ಕಾಣುತ್ತದೆ.

ವೈವಿಧ್ಯಮಯ ಭಾರತ ತ್ರಿಭಾಷಾ ಸೂತ್ರ ಅಳವಡಿಸಿಕೊಂಡಿದ್ದು, ಆಯಾ ರಾಜ್ಯ ಭಾಷೆ ಗೌರವಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಗೃಹ ಸಚಿವರೆ ತ್ರಿಭಾಷಾ ಸೂತ್ರವನ್ನು ಧಿಕ್ಕರಿಸಿರುವುದು ಕನ್ನಡಕ್ಕೆ,ಕನ್ನಡಿಗರಿಗೆ ಮಾಡಿದ ಅಗೌರವ. ಈ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ನಾಡು-ನುಡಿಯ ಘನತೆಯನ್ನು ಮರೆತದ್ದು ಅತ್ಯಂತ ಖಂಡನೀಯ.

ಹಿಂದಿ-ಆಂಗ್ಲ ಭಾಷೆಯ ನಿಷ್ಠ ಧೋರಣೆಯಲ್ಲಿ ಕನ್ನಡ ಭಾಷೆಯನ್ನು ಅವಗಣನೆ ಮಾಡಿರುವ ಅಮಿತ್ ಷಾ ಅವರ ಧೋರಣೆ ಕನ್ನಡ ವಿರೋಧಿತನವನ್ನು ತೋರಿಸುತ್ತದೆ. ಇದು ಕನ್ನಡಿಗರ ಸ್ವಾಭಿಮಾನಕ್ಕೆ ಮಾಡಿದ ಅವಮಾನ.

ಕೇಂದ್ರ ಸರ್ಕಾರದ ಅಧೀನದಲ್ಲಿರುವ RAF ಘಟಕ ಸ್ಥಾಪನೆಗೆ ಕನ್ನಡದ ನೆಲವನ್ನೆ ಕೊಟ್ಟಿದ್ದು, ಈ ಪರಿಜ್ಞಾನವಿಲ್ಲದೆ ಕನ್ನಡದಲ್ಲಿ ಅಡಿಗಲ್ಲು ಫಲಕ ಇಲ್ಲದಿರುವುದು ಅಕ್ಷಮ್ಯ.

ಅಮಿತ್ ಷಾ ಅವರು ತ್ರಿಭಾಷಾ ಸೂತ್ರ ಉಲ್ಲಂಘಿಸಿರುವುದಕ್ಕೆ ಕನ್ನಡಿಗರಿಗೆ ಸ್ಪಷ್ಟನೆ ನೀಡಬೇಕು.

ನಾಡು-ನುಡಿಯ ಘನತೆಗೆ ಚ್ಯುತಿ ಬಂದಾಗ ಸಹಿಸಿಕೊಳ್ಳುವವರಿಗೆ ಈ ರಾಜ್ಯದ ಆಡಳಿತ ನಡೆಸುವ ಅರ್ಹತೆ ಇಲ್ಲ. ಕೇಂದ್ರದ ಗೃಹಸಚಿವರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ನಡೆ ಕನ್ನಡಕ್ಕೆ ಬಗೆದ ದ್ರೋಹವಾಗಿದೆ.

ಟ್ವಿಟ್ಟರ್ ಅಭಿಯಾನ : ಇನ್ನು ಹಿಂದಿ ಹೇರಿಕೆ ನಡೆಯುತ್ತಿದೆ ಎಂದು ಈ ಸಂಬಂಧ ಸಂಜೆ 5ಕ್ಕೆ ಟ್ವಿಟ್ಟರ್ ಅಭಿಯಾನ ಮಾಡಲಾಗುತ್ತಿದೆ. 

 

ಈ ಚಿತ್ರ ಏನನ್ನು ಹೇಳುತ್ತಿದೆ, ಅರ್ಥವಾಯಿತೇ?

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Karnataka News Live: ಒಂದು ಕಣ್ಣಿಗೆ ಬೆಣ್ಣೆ, ಮತ್ತೊಂದು ಕಣ್ಣಿಗೆ ಸುಣ್ಣ: ಯತೀಂದ್ರಗೆ ಆಲ್ ದಿ ಬೆಸ್ಟ್ ಹೇಳಿದ ಕಾಂಗ್ರೆಸ್ ಶಾಸಕ
ಹಿಂದೂ, ಧರ್ಮವೇ ಅಲ್ಲ, ಅದೊಂದು ಬೈಗುಳ ಶಬ್ದ : ಬಿ.ಜಿ ಕೋಳ್ಸೆ