ಜೆಡಿಎಸ್ ಪಕ್ಷದ ಸೋಲು ಮತ್ತು ವೈಫಲ್ಯಗಳಿಂದ ಹತಾಶರಾಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದರು.
ಮದ್ದೂರು (ನ.20) : ಜೆಡಿಎಸ್ ಪಕ್ಷದ ಸೋಲು ಮತ್ತು ವೈಫಲ್ಯಗಳಿಂದ ಹತಾಶರಾಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದರು.
ತಾಲೂಕಿನ ಕದಲೂರು ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಗೆ ತಮ್ಮ ಜೀವಮಾನದಲ್ಲಿ ಜೆಡಿಎಸ್ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂಬ ವಾಸ್ತವ ಅರಿವಾಗಿದೆ. ಒಂದೆಡೆ ಅಧಿಕಾರವಿಲ್ಲದೆ ಅವರು ಹತಾಶೆಗೆ ಜಾರಿದ್ದಾರೆ. ಇದರಿಂದ ಮಾನಸಿಕ ಅಸ್ವಸ್ಥತೆಯಿಂದ ನರಳುತ್ತಿದ್ದಾರೆ ಎಂದು ಸಿದ್ದು ಟೀಕಿಸಿದರು.
undefined
ದೇಶಕ್ಕಾಗಿ ಬಿಜೆಪಿ ಯಾವತ್ತೂ ಬಲಿದಾನ ಮಾಡಿಲ್ಲ: ಸಿದ್ದರಾಮಯ್ಯ
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ಚುನಾವಣಾ ಪೂರ್ವದಲ್ಲಿ ನೀಡಿದ್ದ ಆಶ್ವಾಸನೆಯಂತೆ ಗ್ಯಾರಂಟಿ ಯೋಜನೆ ಜಾರಿಗೆ ತಂದಿದೆ. ಇನ್ನು ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ಆರ್ಥಿಕವಾಗಿ ಸದೃಢವಾಗಿದೆ. ಆದರೆ, ವಿರೋಧ ಪಕ್ಷಗಳು ಯೋಜನೆಗಳ ಈ ಬಗ್ಗೆ ಇಲ್ಲಸಲ್ಲದ ಟೀಕೆ-ಟಿಪ್ಪಣಿಗಳನ್ನು ಮಾಡಿ ಜನರನ್ನು ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಅದ್ಧೂರಿ ಸ್ವಾಗತ
ಪಟ್ಟಣದ ಶಿವಪುರಕ್ಕೆ ಖಾಸಗಿ ಕಾರ್‍ಯಕ್ರಮಗಳಲ್ಲಿ ಭಾಗವಹಿಸಲು ಶನಿವಾರ ರಾತ್ರಿ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಕಾರ್‍ಯಕರ್ತರು ಅದ್ಧೂರಿ ಸ್ವಾಗತ ನೀಡಿದರು.
ಮೈಸೂರು ಪ್ರವಾಸದ ನಂತರ ರಾತ್ರಿ 8.30ರ ಸುಮಾರಿಗೆ ಆಗಮಿಸಿದ ಮುಖ್ಯಮಂತ್ರಿಗಳನ್ನು ಬ್ಲಾಕ್ ಕಾಂಗ್ರೆಸ್ ಕಚೇರಿ ಬಳಿ ಶಾಸಕ ಕೆ.ಎಂ. ಉದಯ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ ಸೇರಿದಂತೆ ಪಕ್ಷದ ಜನಪ್ರತಿನಿಧಿಗಳು, ಜಿಲ್ಲಾ ಮತ್ತು ತಾಲೂಕು ಘಟಕಗಳ ಕಾಂಗ್ರೆಸ್ ಪದಾಧಿಕಾರಿಗಳು ಮತ್ತು ಮುಖಂಡರು ಕ್ರೈನ್ ಮೂಲಕ ಭಾರೀ ಗಾತ್ರದ ಹೂವಿನ ಹಾರ ಹಾಕಿ ಅಭಿನಂದಿಸಿದರು.
ನನ್ನನ್ನು ಸುಮ್ನೆ ಕೆಣಕಬೇಡಿ : ಸಿಎಂ ಸಿದ್ದುಗೆ ಎಚ್‌ಡಿಕೆ ವಾರ್ನಿಂಗ್!
ನಂತರ ಶಿವಪುರದ ಶ್ರೀವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ತಮ್ಮ ಆತ್ಮೀಯ ಮನ್ಮುಲ್ ಮಾಜಿ ನಿರ್ದೇಶಕ ಲಿಂಗನದೊಡ್ಡಿ ರಾಮಕೃಷ್ಣೇಗೌಡರ ಪುತ್ರ ಎಲ್.ಆರ್. ಅಶ್ವಿನ್ ಮತ್ತು ಡಿ.ಎನ್. ಸರಿತಾ ಅವರ ಆರತಕ್ಷತೆಯಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ವಧೂ-ವರರನ್ನು ಆಶೀರ್ವದಿಸಿದರು.