ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ನಿಧನ ಹೊಂದಿಲ್ಲ, ಆರೋಗ್ಯ ಗಂಭೀರವಾಗಿದೆ!

Published : Sep 17, 2020, 05:58 PM ISTUpdated : Sep 17, 2020, 06:12 PM IST
ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ನಿಧನ ಹೊಂದಿಲ್ಲ, ಆರೋಗ್ಯ ಗಂಭೀರವಾಗಿದೆ!

ಸಾರಾಂಶ

ಕರ್ನಾಟಕದಿಂದ ಆಯ್ಕೆಯಾಗಿ ರಾಜ್ಯಸಭಾ ಸದಸದ್ಯರಾಗಿದ್ದ ಅಶೋಕ್ ಗಸ್ತಿ ಆರೋಗ್ಯ ಗಂಭೀರ| ಕೊರೋನಾ ಸೋಂಕಿನಿಂದ ಬಳಲುತ್ತಿರುವ ಗಸ್ತಿ| ಸಾವಿನ ವದಂತಿ ಬೆನ್ನಲ್ಲೇ ಬಿಜೆಪಿ ಸ್ಪಷ್ಟನೆ

ಬೆಂಗಳೂರು(ಸೆ.17) ಕರ್ನಾಟಕದಿಂದ ಇತ್ತೀಚೆಗಷ್ಟೇ ಆಯ್ಕೆಯಾಗಿ ರಾಜ್ಯಸಭೆ ಪ್ರವೇಶಿಸಿದ್ದ ಪಕ್ಷದ ನಿಷ್ಠಾವಂತ ನಾಯಕ ಅಶೋಕ್ ಗಸ್ತಿ ನಿಧನರಾಗಿದ್ದಾರೆಂಬ ಸುದ್ದಿ ಎಲ್ಲೆಡೆ ಹಬ್ಬಿತ್ತು. ಆದರೀಗ ಈ ಸುದ್ದಿ ಹಬ್ಬಿದ ಬೆನ್ನಲ್ಲೇ ಆಸ್ಪತ್ರೆ ಹಾಗೂ ರಾಜ್ಯ ಬಿಜೆಪಿ ಸ್ಪಷ್ಟನೆ ನೀಡಿದ್ದು, ಗಸ್ತಿಯವರು ನಿಧನರಾಗಿಲ್ಲ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಿದ್ದಾರೆ.

ಹೌದು ಕೊರೋನಾ ಸೋಂಕಿನಿಂದಾಗಿ ಕಳೆದ ಹದಿನೈದು ದಿನಗಳ ಹಿಂದೆ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಗಸ್ತಿಯವರ ನಿಧನದ ಸುದ್ದಿ ಎಲ್ಲರನ್ನೂ ಬೆಚ್ಚಿ ಬೀಳಿಸಿತ್ತು. ಮಾಧ್ಯಮಗಳಲ್ಲೂ ಈ ಸುದ್ದಿ ಹರಿದಾಡಿತ್ತು. ಇದರ ಬೆನ್ನಲ್ಲೇ ಕರ್ನಾಟಕ ಬಿಜೆಪಿ ಅಧಿಕೃತ ಟ್ವಿಟರ್ ಖಾತೆಯಿಂದ ಈ ಸಂಬಂಧ ಟ್ವೀಟ್ ಮಾಡಲಾಗಿದ್ದು, ರಾಜ್ಯ ಸಭಾ ಸದಸ್ಯರಾದ ಶ್ರೀ ಅಶೋಕ್ ಗಸ್ತಿ ಅವರ ಆರೋಗ್ಯ ಕುರಿತು ಕೆಲವು ವರದಿಗಳು ಪ್ರಸಾರವಾಗುತ್ತಿದೆ. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರ ಸ್ಥಿತಿ ಗಂಭೀರವಾಗಿದ್ದು, ಅವರು ಮರುಜನ್ಮ ಪಡೆದು ಆರೋಗ್ಯವಂತರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸೋಣ ಎಂದು ಬರೆಯಲಾಗಿದೆ.

ರಾಜ್ಯಸಭಾ ಸದಸ್ಯ ಅಶೋಕ ಗಸ್ತಿಗೆ ಕೊರೋನಾ ಪಾಸಿಟಿವ್‌

ಅಶೋಕ್ ಗಸ್ತಿ ಆರೋಗ್ಯ ಗಂಭೀರವಾಗಿದೆ: ಸಿಎಂ ಬಿಎಸ್‌ವೈ

ಇನ್ನು ಈ ವದಂತಿ ಕುರಿತಾಗಿ ಖುದ್ದು ಸಿಎಂ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು, ಅಶೋಕ್ ಗಸ್ತಿ ಆರೋಗ್ಯ ಗಂಭೀರವಾಗಿದೆ. ಮಾಧ್ಯಮದಲ್ಲಿ ಸಾವು ಎಂದು ವರದಿ ತಪ್ಪು ವರದಿಯಾಗಿದೆ. ಗಸ್ತಿ ಚೇತರಿಕೆ ದೇವರಲ್ಲಿ ಪ್ರಾರ್ಥಿಸಿ ಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಗಸ್ತಿ ನಿಧನದ ಬಗ್ಗೆ ರಾಷ್ಟ್ರಪತಿ ಹಾಗೂ ಅಮಿತ್ ಶಾ ಟ್ವೀಟ್!

ಗಸ್ತಿಯವರು ನಿಧನ ಹೊಂದಿದ್ದಾರೆಂಬುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೂಡಾ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದರು. ಈ ನಿಟ್ಟಿನಲ್ಲಿ ಈ ವದಂತಿ ಭಾರೀ ಆತಂಕ ಸೃಷ್ಟಿ ಮಾಡಿತ್ತು. ಆದರೀಗ ಈ ಎಲ್ಲಾ ಗೊಂದಲಗಳಿಗೆ ತೆರೆ ಬಿದ್ದಿದೆ.

ಬಿಜೆಪಿ ನಿಷ್ಠಾವಂತ ಕಾರ್ಯಕರ್ತರಾಗಿದ್ದ ಗಸ್ತಿ

ರಾಯಚೂರು ಮೂಲದ ಅಶೋಕ ಗಸ್ತಿಯವರಿಗೆ ಸವಿತ ಸಮಾಜದವರು. ಬಿಎ.ಎಲ್‌ಎಲ್‌ಬಿ ಮುಗಿಸಿದ್ದು, ಮೊದಲಿಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರಾಗಿದ್ದರು. ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದ ಗಸ್ತಿ ಅವರು ಬಿಜೆಪಿಗಾಗಿ ಹಗಲಿರುಳು ಶ್ರಮಿಸಿದ್ದರು. ಈ ಹಿನ್ನೆಲೆ ಅವರಿಗೆ ಈ ಬಾರಿ ರಾಜ್ಯಸಭೆ ಸದಸ್ಯರಾಗುವ ಅವಕಾಶ ಲಭಿಸಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕೊಡಗಿನ ಇತಿಹಾಸದಲ್ಲೇ ಮೊದಲ ಬಾರಿಗೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್! ಏನಿದು ಪ್ರಕರಣ?
ಡೆಲಿವರಿ ಬಾಯ್ಸ್‌ಗೆ ಲಿಫ್ಟ್ ಬಳಸಬೇಡಿ ಎಂದ ಮೇಘನಾ ಫುಡ್ಸ್; ಪೋಸ್ಟರ್ ವೈರಲ್‌ ಆಗ್ತಿದ್ದಂತೆ ಕ್ಷಮೆಯಾಚನೆ