ಕೋವಿಡ್ ಕಾಲದ ಹಗರಣಗಳ ತನಿಖೆಯ ಸುಳಿವು ಕೊಟ್ಟ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Published : May 29, 2023, 12:50 PM ISTUpdated : May 29, 2023, 02:32 PM IST
ಕೋವಿಡ್ ಕಾಲದ ಹಗರಣಗಳ ತನಿಖೆಯ ಸುಳಿವು ಕೊಟ್ಟ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಸಾರಾಂಶ

ಕೋವಿಡ್ ಕಾಲದ ಹಗರಣಗಳ ತನಿಖೆಗೊಳಪಡಿಸುವ ವಿಚಾರವಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದಾರೆ.

ಬೆಂಗಳೂರು (ಮೇ.29): ಕೋವಿಡ್ ಕಾಲದ ಹಗರಣಗಳ ತನಿಖೆಗೊಳಪಡಿಸುವ ವಿಚಾರವಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Health Minister Dinesh Gundurao) ಹೇಳಿಕೆ ನೀಡಿದ್ದಾರೆ. ಮೇ.30 ರಂದು  ಆರೋಗ್ಯ ಇಲಾಖೆಯ (Health Department) ಸಭೆ ನಡೆಸುತ್ತೇನೆ. ಸಭೆ ಬಳಿಕ ಹಿಂದೆ ಆಗಿರುವ ತೀರ್ಮಾನಗಳು ಬಗ್ಗೆ ತಿಳಿದುಕೊಳ್ಳುತ್ತೇನೆ. ಅದರಿಂದ ಸರ್ಕಾರದ ಬೊಕ್ಕಸಕ್ಕೆ ಆಗಿರುವ ನಷ್ಟದ ಬಗ್ಗೆ  ತಿಳಿದುಕೊಳ್ಳುತ್ತೇನೆ. ಖಂಡಿತವಾಗಿಯೂ ಏನೇನು ಕ್ರಮ ತೆಗೆದುಕೊಳ್ಳಬೇಕೋ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಗ್ಯಾರಂಟಿ ಯೋಜನೆ ಜಾರಿಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

ಜೊತೆಗೆ ಕೋವಿಡ್ ನಿಂದ ಮೃತ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ಮಾಹಿತಿ ತೆಗೆದುಕೊಳ್ಳುತ್ತೇನೆ. ಮಾಹಿತಿ ತೆಗೆದುಕೊಂಡು ನಂತರ ಪರಿಹಾರದ ತೀರ್ಮಾನ ತೆಗೆದುಕೊಳ್ಳುತ್ತೇನೆ. ಮೊದಲೇ ಸಿಎಂ ಈ ಖಾತೆ ಕೊಡುತ್ತೇನೆ ಅಂತ ಹೇಳಿದ್ದರು. ಅದರಂತೆ ಆರೋಗ್ಯ ಇಲಾಖೆ ಜವಾಬ್ದಾರಿ ನನಗೆ ನೀಡಿದ್ದಾರೆ. ಕಳೆದ ಬಾರಿ ಆಹಾರ ಇಲಾಖೆ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿದ್ದೆ. ಈ ಬಾರಿ ಸಿಎಂ ಆರೋಗ್ಯ ಇಲಾಖೆ ನೀಡಿದ್ದಾರೆ. ದೊಡ್ಡ ಇಲಾಖೆ ಹೆಚ್ಚಿನ ಜವಾಬ್ದಾರಿ ಇದೆ. ಪಾರದರ್ಶಕವಾಗಿ ಕೆಲಸ ಮಾಡಬೇಕಿದೆ. ಎಲ್ಲರಿಗೂ ಆರೋಗ್ಯ ವ್ಯವಸ್ಥೆ ನೀಡುವ ಕೆಲಸ ಮಾಡಬೇಕಿದೆ ಎಂದರು.

ಇನ್ನು ಈ ಹಿಂದಿನ ಬಿಜೆಪಿ ()BJP ಸರಕಾರದಲ್ಲಿ ಡಾ ಕೆ ಸುಧಾಕರ್ (Dr K Sudhakar) ಅವರು ಆರೋಗ್ಯ ಸಚಿವರಾಗಿ ಕೆಲಸ ಮಾಡಿದ್ದರು. ಈ ಬಾರಿ ಅವರು ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ.

ಕಾಂಗ್ರೆಸ್‌ನ ಐದು ಗ್ಯಾರಂಟಿ ಅನುಷ್ಠಾನ ವಿಳಂಬ, ಕೇಸು ದಾಖಲಿಸಲು ಮುಂದಾದ ವಕೀಲ

ನೂತನ ಸಚಿವ  ದಿನೇಶ್‌ ಗುಂಡೂರಾವ್‌ ಪರಿಚಯ:
ಸತತವಾಗಿ ಆರು ಬಾರಿ ಗೆದ್ದಿರುವ ದಿನೇಶ್‌ ಗುಂಡೂರಾವ್‌, ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ, ರಾಜ್ಯ ಯುವ ಕಾಂಗ್ರೆಸ್‌ ಅಧ್ಯಕ್ಷ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಬೆಂಗಳೂರಿನ ಗಾಂಧಿನಗರ ಕ್ಷೇತ್ರದಿಂದ 1999ರಿಂದ ನಿರಂತರವಾಗಿ ಆಯ್ಕೆಯಾಗುತ್ತಾ ಬಂದಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾದ ನಂತರ ಎಐಸಿಸಿ ಪ್ರತಿನಿಧಿಯಾಗಿ ಗೋವಾ, ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾಗಿ ಅಲ್ಪ ಕಾಲ ಸೇವೆ ಸಲ್ಲಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ