ಆಶಾ ಕಾರ್ಯಕರ್ತರಿಗೆ ಗುಡ್ ನ್ಯೂಸ್: ಪ್ರತಿ ತಿಂಗಳು ₹7,000 ಗೌರವ ಧನ ಭರವಸೆ ನೀಡಿದ ದಿನೇಶ್ ಗುಂಡೂರಾವ್

By Kannadaprabha News  |  First Published Feb 13, 2024, 10:37 PM IST

ಆಶಾ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು ಖಾತ್ರಿಯಾಗಿ ಪಾವತಿಯಾಗುತ್ತಿದ್ದ ರೂ. 5,000 ಸಾವಿರದ ಬದಲು ರೂ.7,000  ನೇರ ನಗದು ವರ್ಗಾವಣೆಗೆ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದ್ದಾರೆ.


ಬೆಂಗಳೂರು (ಫೆ.13): ಆಶಾ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು ಖಾತ್ರಿಯಾಗಿ ಪಾವತಿಯಾಗುತ್ತಿದ್ದ ರೂ. 5,000 ಸಾವಿರದ ಬದಲು ರೂ.7,000  ನೇರ ನಗದು ವರ್ಗಾವಣೆಗೆ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಕಾರ್ಯಕರ್ತೆಯರ ಅಹವಾಲುಗಳನ್ನ ಆಲೀಸಿದ ಸಚಿವವರು, ಆಶಾ ಕಾರ್ಯಕರ್ತೆಯರ ಪರ ಸರ್ಕಾರವಿದೆ. ಪ್ರತಿಭಟನೆ ಕೈ ಬಿಡುವಂತೆ ಮನವಿ ಮಾಡಿದರು. 

ಆಶಾ ಕಾರ್ಯಕರ್ತೆಯರ ಕುಂದುಕೊರತೆಗಳ ನಿವಾರಣೆಯ ನಿಟ್ಟಿನಲ್ಲಿ  ಸರ್ಕಾರ ಮತ್ತು ಇಲಾಖೆಯು ಮುಕ್ತ ಮನಸ್ಸಿನಲ್ಲಿದ್ದು, ತ್ವರಿತ ಪ್ರತಿಸ್ಪಂದನೆಗೆ ಸದಾ ಸಿದ್ಧವಾಗಿದೆ. ಆಶಾ ಕಾರ್ಯಕರ್ತೆಯರ ಪ್ರೋತ್ಸಾಹಧನದ ವಿತರಣೆಯಲ್ಲಿ ಪಾರದರ್ಶಕತೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಆಶಾ ಕಾರ್ಯಕರ್ತೆಯರು ತಾನು ಗಳಿಸಿದ ಪ್ರೋತ್ಸಾಹಧನದ ವಿವರಗಳನ್ನು ಗಮನಿಸಲು ಆಶಾ ನಿಧಿ ತಂತ್ರಾಂಶದಲ್ಲಿ "ASHA View My Incentive" ನ್ನು ಸೃಜಿಸಲಾಗಿದ್ದು, ಆಶಾ ಕಾರ್ಯಕರ್ತೆಯರು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಪಡೆದ ಪ್ರೋತ್ಸಾಹಧನದ ವಿವರಗಳನ್ನು ವೀಕ್ಷಿಸಬಹುದಾಗಿದೆ ಎಂದು ತಿಳಿಸಿದರು.

Tap to resize

Latest Videos

 

ಸದಾ ಕೊಲ್ಲುವ, ಮುಗಿಸುವ ಮಾತಾಡೋ ಈಶ್ವರಪ್ಪ ಬಿಜೆಪಿ ಪಕ್ಷದ ನಾಯಕನೇ?: ದಿನೇಶ್ ಗುಂಡೂರಾವ್ ಗುಡುಗು

ಆಶಾ ಕಾರ್ಯಕರ್ತರಿಗೆ ಮಾಸಿಕವಾಗಿ ರಾಜ್ಯ ಸರ್ಕಾರ ನೀಡುವ ರೂ. 5,000  ಜೊತೆಗೆ ರೂ.2,000 ಸೇರಿಸಿ ಒಟ್ಟು ರೂ.7,000 ಖಾತ್ರಿಪಡಿಸುವುದಾಗಿ ಘೋಷಿಸಿದರು.‌ ಉಳಿದಂತೆ ಆಶಾ ಕಾರ್ಯಕರ್ತೆಯರು ನಡೆಸುವ ಆರೋಗ್ಯ ಸೇವೆ ಚಟುವಟಿಕೆಗಳನ್ನ ಪರಗಣಿಸಿ ಪ್ರೋತ್ಸಾಹಧನವನ್ನ ಪಾರದರ್ಶಕವಾಗಿ ನೀಡಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು. 

ಒಂದು ವೇಳೆ ಯಾರಿಗೆ ತಮ್ಮ ಚಟುವಟಿಕೆಗಳ ಪ್ರಕಾರ ಪ್ರೋತ್ಸಾಹಧನ ದೊರೆಯುವುದಿಲ್ಲ ಅದನ್ನ 6 ತಿಂಗಳ ಕಾಲಮಿತಿಯೊಳಗೆ ಪರಿಹರಿಸಬೇಕು.  ಕಾಲಮಿತಿಯೊಳಗೆ ಪರಿಹಾರವಾಗದಿದ್ದರೆ  ಕಾರ್ಯಕರ್ತೆಯರಿಗೆ ನೇರವಾಗಿ ಸಿಗಬೇಕಾದ ಪ್ರೋತ್ಸಶಹಧನ ವರ್ಗಾವಣೆಯಾಗುವಂತೆ ವ್ಯವಸ್ಥೆ ಕಲ್ಪಿಸುವುದಾಗಿ ಭರವಸೆ ನೀಡಿದರು. 

ಅಲ್ಲದೇ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಚಟುವಟಿಕೆಗಳಿಗೆ ನೀಡುವ ಟೀಮ್ ಬೇಸ್ಟ್ ಇನ್ಸೆಂಟಿವ್ ನ್ನು ಆಶಾ ನಿಧಿ ತಂತ್ರಾಂಶದ ಮುಖೇನವೇ ನೇರವಾಗಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗುವುದು. ಆಶಾ ಕಾರ್ಯಕರ್ತೆಯರು ತಾವು ನಿರ್ವಹಿಸಿದ ಚಟುವಟಿಕೆಗಳನ್ನು ದಾಖಲಿಸಲು ಪ್ರತ್ಯೇಕವಾದ ಮೊಬೈಲ್ ಆ್ಯಪ್ ವಿನ್ಯಾಸ ಮಾಡಲಾಗುವುದು. ಆಶಾ ಕಾರ್ಯಕರ್ತೆಯರೇ ತಾವು ನಿರ್ವಹಿಸಿದ ಕಾರ್ಯಚಟುವಟಿಕೆಗಳು, ಹಾಗೂ ಸಿಗಬೇಕಾದ ಪ್ರೋತ್ಸಾಹಧನವನ್ನ ಆ್ಯಪ್ ನಲ್ಲಿ ನೋಡಿಕೊಳ್ಳಲು ಅವಕಾಶ ಕಲ್ಪಿಸುವಂತಹ ಪಾರದರ್ಶಕ ಕ್ರಮಗಳನ್ನು ಕೈಗೊಳ್ಳುತ್ತಿರುವುದಾಗಿ ಸಚಿವರು ಹೇಳಿದರು.

ಸದಾ ಕೊಲ್ಲುವ, ಮುಗಿಸುವ ಮಾತಾಡೋ ಈಶ್ವರಪ್ಪ ಬಿಜೆಪಿ ಪಕ್ಷದ ನಾಯಕನೇ?: ದಿನೇಶ್ ಗುಂಡೂರಾವ್ ಗುಡುಗು

ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ ವೇತನ ನಿಗದಿಪಡಿಸುವ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಯವರೊಂದಿಗೆ ಚರ್ಚೆ ನಡೆಸುತ್ತೇನೆ. ಆದರೆ ಸದ್ಯಕ್ಕೆ ಇರುವ ಸಮಸ್ಯೆಗಳನ್ನ ಪರಿಹರಿಸುವ ಕೊಡುವ ಜವಾಬ್ದಾರಿ ಆರೋಗ್ಯ ಸಚಿವನಾಗಿ ನನ್ನ ಕರ್ತವ್ಯ. ಈ ನಿಟ್ಟಿನಲ್ಲಿ ತಾಂತ್ರಿಕ ಸಮಸ್ಯೆಗಳನ್ನ ಸರಿಪಡಿಸಲಾಗುತ್ತಿದೆ ಎಂದರು.

ಸರ್ಕಾರದಿಂದ ಈಗಾಗಲೇ ಗೃಹಲಕ್ಷ್ಮೀ ಯೋಜನೆಯಡಿ ನೀಡುವ ರೂ. 2,000 ಆಶಾ ಕಾರ್ಯಕರ್ತೆಯರಿಗೂ ಅನ್ವಯ ಆಗುವಂತೆ ಕ್ರಮ ಕೈಗೊಳ್ಳಲಾಗಿದೆ. 5 ಲಕ್ಷ ಆರೋಗ್ಯ ವಿಮೆಯನ್ನು ಆಶಾ ವರ್ಕರ್ಸ್ ಗೆ ಕಲ್ಪಿಸಲಾಗಿದೆ. ಕಾಂಗ್ರೆಸ್ ಸರ್ಕಾರ ಮಹಿಳೆಯರ ಪರವಾಗಿದ್ದಾಗ ಪ್ರತಿಭಟನೆ ನಡೆಸುವ ಅಗತ್ಯತೆ ಇಲ್ಲ ಎಂದು ಆಶಾ ಕಾರ್ಯಕರ್ತೆಯರಿಗೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. 

click me!