ಡಿಕೆಶಿ ಅಕ್ರಮ ಆಸ್ತಿ: ಮೇ 30ಕ್ಕೆ ವಿಚಾರಣೆ ಮುಂದೂಡಿಕೆ

Published : Apr 20, 2023, 01:00 AM IST
ಡಿಕೆಶಿ ಅಕ್ರಮ ಆಸ್ತಿ: ಮೇ 30ಕ್ಕೆ ವಿಚಾರಣೆ ಮುಂದೂಡಿಕೆ

ಸಾರಾಂಶ

ಭ್ರಷ್ಟಾಚಾರ ನಿಗ್ರಹ ಕಾಯ್ದೆ-1988ರ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಸಿಬಿಐ 2020ರ ಅ.3ರಂದು ಡಿ.ಕೆ. ಶಿವಕುಮಾರ್‌ ವಿರುದ್ಧ ಪ್ರಕರಣ ದಾಖಲಿಸಿತ್ತು. ಸಿಬಿಐ ದಾಖಲಿಸಿರುವ ಈ ಎಫ್‌ಐಆರ್‌ ಕಾನೂನು ಬಾಹಿರವಾಗಿದ್ದು, ತನಿಖೆ ರದ್ದುಪಡಿಸಬೇಕು ಎಂದು ಕೋರಿ ಶಿವಕುಮಾರ್‌ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. 

ಬೆಂಗಳೂರು(ಏ.20):  ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ರದ್ದು ಕೋರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್‌ ಮೇ 30ಕ್ಕೆ ಮುಂದೂಡಿದೆ. 

ಸಿಬಿಐ ತನಿಖೆ ರದ್ದು ಕೋರಿ ಪ್ರಶ್ನಿಸಿ ಡಿ.ಕೆ. ಶಿವಕುಮಾರ್‌ ಸಲ್ಲಿಸಿರುವ ಅರ್ಜಿ ವಿಚಾರಣೆ ವೇಳೆ ಸಿಬಿಐ ಪರ ವಕೀಲ ಪಿ.ಪ್ರಸನ್ನ ಕುಮಾರ್‌ ಹಾಜರಾಗಿ, ಸಿಬಿಐ ತನಿಖೆಗೆ ಶಿಫಾರಸು ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ರದ್ದುಪಡಿಸುವಂತೆ ಕೋರಿ ಅರ್ಜಿದಾರರು ಹೈಕೋರ್ಟ್‌ಗೆ ಮತ್ತೊಂದು ಅರ್ಜಿ ಸಲ್ಲಿಸಿದ್ದಾರೆ. ಆ ಅರ್ಜಿ ಕುರಿತ ವಿಚಾರಣೆಯನ್ನು ಈಗಾಗಲೇ ಪೂರ್ಣಗೊಳಿಸಿರುವ ನಿಮ್ಮ ನ್ಯಾಯಪೀಠ (ನ್ಯಾ.ಕೆ. ನಟರಾಜನ್‌) ತೀರ್ಪು ಕಾಯ್ದಿರಿಸಿದೆ. ಒಂದೊಮ್ಮೆ ಸರ್ಕಾರದ ಆದೇಶವನ್ನು ನ್ಯಾಯಾಲಯವು ರದ್ದುಪಡಿಸಿದರೆ, ಈ ಅರ್ಜಿ ವಿಚಾರಣಾ ಮಾನ್ಯತೆ ಕಳೆದುಕೊಳ್ಳಲಿದೆ. ಆದ್ದರಿಂದ ನ್ಯಾಯಪೀಠವು ಮತ್ತೊಂದು ಅರ್ಜಿ ಕುರಿತ ತೀರ್ಪು ಪ್ರಕಟ ಮಾಡುವವರೆಗೂ ಈ ಅರ್ಜಿ ವಿಚಾರಣೆ ಮುಂದೂಡಬೇಕು ಎಂದು ಕೋರಿದರು.

ಕಾಡಸಿದ್ದೇಶ್ವರ ಮಠದಲ್ಲಿ ಡಿಕೆಶಿ ರಹಸ್ಯ ಪೂಜೆ

ಸಿಬಿಐ ವಕೀಲರು ಕೋರಿಕೆ ಪರಿಗಣಿಸಿದ ನ್ಯಾ.ಕೆ. ನಟರಾಜನ್‌ ಅವರ ಪೀಠ, ಅರ್ಜಿ ವಿಚಾರಣೆಯನ್ನು ಮೇ ಅಂತ್ಯಕ್ಕೆ ಮುಂದೂಡಿತು. ಅಲ್ಲದೆ, ಅರ್ಜಿ ಕುರಿತ ಮುಂದಿನ ವಿಚಾರಣೆಗೆ ಅರ್ಜಿದಾರ ಡಿ.ಕೆ. ಶಿವಕುಮಾರ್‌ ವಿರುದ್ಧದ ಸಿಬಿಐ ತನಿಖೆಗೆ ನೀಡಿರುವ ತಡೆಯಾಜ್ಞೆ ಸಹ ವಿಸ್ತರಿಸಿ ಆದೇಶಿಸಿದರು.

ಭ್ರಷ್ಟಾಚಾರ ನಿಗ್ರಹ ಕಾಯ್ದೆ-1988ರ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಸಿಬಿಐ 2020ರ ಅ.3ರಂದು ಡಿ.ಕೆ. ಶಿವಕುಮಾರ್‌ ವಿರುದ್ಧ ಪ್ರಕರಣ ದಾಖಲಿಸಿತ್ತು. ಸಿಬಿಐ ದಾಖಲಿಸಿರುವ ಈ ಎಫ್‌ಐಆರ್‌ ಕಾನೂನು ಬಾಹಿರವಾಗಿದ್ದು, ತನಿಖೆ ರದ್ದುಪಡಿಸಬೇಕು ಎಂದು ಕೋರಿ ಶಿವಕುಮಾರ್‌ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಸಿಬಿಐ ತನಿಖೆಗೆ 2023ರ ಫೆ.10ರಂದು ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸದ್ದಿಲ್ಲದೇ ಓಪನ್ ಆದ 'ಬಿಗ್ ಬಾಸ್' ನಡೆಯುವ ಜಾಲಿವುಡ್ ಸ್ಟುಡಿಯೋ! KSPCB ಅನುಮತಿ
ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!