
ಕಲಬುರಗಿ (ಜುಲೈ.9): ರಾಜ್ಯದಲ್ಲಿ ಹೃದಯಾಘಾತದಿಂದ ಸರಣಿ ಸಾವು, ಆತಂಕ ಹೆಚ್ಚಳರಾಜ್ಯದಾದ್ಯಂತ ಹೃದಯಾಘಾತದಿಂದ ಸಾವಿನ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಹಾಸನದಲ್ಲಿ ಕಳೆದ ಒಂದು ತಿಂಗಳಲ್ಲಿ 30ಕ್ಕೂ ಹೆಚ್ಚು ಜನರು ಹೃದಯಾಘಾತದಿಂದ ಪ್ರಾಣ ಕಳೆದುಕೊಂಡಿದ್ದರೆ, ಮೈಸೂರಿನಲ್ಲಿಯೂ ಇದೇ ರೀತಿಯ ಸಾವಿನ ಪ್ರಮಾಣ ಗಮನಾರ್ಹವಾಗಿ ಏರಿಕೆಯಾಗಿದೆ. ಧಾರವಾಡದಲ್ಲೂ ಯುಪಿಎಸ್‌ಸಿ ತಯಾರಿ ನಡೆಸುತ್ತಿದ್ದ ಯುವತಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
ಇದೀಗ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಚಂದನಕೇರಾ ಗ್ರಾಮದಲ್ಲಿ 22 ವರ್ಷದ ಲಾರಿ ಚಾಲಕ ಮೋಹಸಿನ್ ಒಶಾ ಪಟೇಲ್ ಹೃದಯಾಘಾತದಿಂದ ದಾರುಣವಾಗಿ ಮೃತಪಟ್ಟ ಘಟನೆ ರಾಜ್ಯದಲ್ಲಿ ಹೃದಯಾಘಾತದ ಸರಣಿ ಸಾವುಗಳ ಬಗ್ಗೆ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.
ಮದುವೆಯಾಗಿ ಕೇವಲ ಮೂರು ವಾರಗಳಾಗಿದ್ದ ಮೋಹಸಿನ್, ಮೋಹರಂ ಹಬ್ಬದ ಸಂಭ್ರಮಕ್ಕಾಗಿ ತಮ್ಮ ಊರಿಗೆ ಬಂದಿದ್ದರು. ಆದರೆ, ದಿಢೀರನೆ ಮನೆಯಲ್ಲಿ ಕುಸಿದು ಬಿದ್ದ ಅವರನ್ನು ಕುಟುಂಬಸ್ಥರು ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ.
ಈ ಘಟನೆ ರಟಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಯುವಕನ ಅಕಾಲಿಕ ಸಾವು ಕುಟುಂಬ ಮತ್ತು ಗ್ರಾಮವಾಸಿಗಳಲ್ಲಿ ಆಘಾತ ಮೂಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ