
ಬೆಂಗಳೂರು(ಮಾ.11): ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಮುಂದುವರೆದಿದ್ದು, ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಸೀಮಿತ ಸ್ಥಳಗಳಿಗೆ ನೀಡಲಾದ ಉಷ್ಣ ಅಲೆಯ ಎಚ್ಚರಿಕೆಯನ್ನು ಶನಿವಾರಕ್ಕೆ ವಿಸ್ತರಿಸಲಾಗಿದೆ.
ಮೂರು ದಿನಗಳಿಂದ ನಿರಂತರವಾಗಿ ಉಡುಪಿ, ಉತ್ತರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಪ್ರದೇಶದಲ್ಲಿ ರಾಜ್ಯದ ಅತಿ ಹೆಚ್ಚು ಗರಿಷ್ಠ ಉಷ್ಣಾಂಶ ದಾಖಲಾಗುತ್ತಿದ್ದು, ಹೀಗಾಗಿ, ಕಳೆದ ಗುರುವಾರ ಮತ್ತು ಶುಕ್ರವಾರ ಉಷ್ಣ ಅಲೆಯ ಎಚ್ಚರಿಕೆ ನೀಡಲಾಗಿತ್ತು. ಇದೀಗ ಈ ಎಚ್ಚರಿಕೆಯನ್ನು ಶನಿವಾರಕ್ಕೂ ವಿಸ್ತರಣೆ ಮಾಡಲಾಗಿದೆ.
Heat wave: ಬಂದಿದೆ ಉಷ್ಣ ಮಾರುತ: ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ
ಕಳೆದ ಗುರುವಾರ ಉಡುಪಿಯ ಪಣಂಬೂರು ಮತ್ತು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ 37.6 ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ 36.3 ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬ್ರಹ್ಮಾವರದಲ್ಲಿ 38.4 ಡಿಗ್ರಿ ಸೆಲ್ಷಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಶುಕ್ರವಾರ ಹೊನ್ನಾವರದಲ್ಲಿ 37.6, ಕಾರವಾರ 36.3 ಹಾಗೂ ಮಂಗಳೂರಿನಲ್ಲಿ 35 ಡಿಗ್ರಿ ಸೆಲ್ಷಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಉಳಿದಂತೆ ಕರಾವಳಿ ಜಿಲ್ಲೆಗಳಲ್ಲಿ ಶನಿವಾರ ಸಾಮಾನ್ಯಕ್ಕಿಂತ 4 ರಿಂದ 5 ಡಿಗ್ರಿ ಸೆಲ್ಷಿಯಸ್, ಭಾನುವಾರ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಷಿಯಸ್ ಗರಿಷ್ಠ ಉಷ್ಣಾಂಶ ಹೆಚ್ಚಾಗಲಿದೆ. ಬಾಗಲಕೋಟೆಯಲ್ಲಿ 12.2 ಡಿಗ್ರಿ ಸೆಲ್ಷಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಒಳನಾಡಿನ ಕೆಲವು ಪ್ರದೇಶದಲ್ಲಿ ಮುಂದಿನ 48 ಗಂಟೆಯ ಅವಧಿಯಲ್ಲಿ ಮೇಲ್ಮೈಗಾಳಿಯು 30 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ