
ಬೆಂಗಳೂರು (ಆ.17) ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ.ಗುಡ್ಡ ಕುಸಿತಗಳು ಸಂಭವಿಸಿದ್ದು, ಹಲವು ಸಂಚಾರಗಳು ಅಸ್ತವ್ಯಸ್ತಗೊಂಡಿದೆ. ರೈಲು ಸಂಚಾರ, ರಸ್ತೆ ಸಂಚಾರಗಳೂ ಸ್ಥಗಿತಗೊಂಡ ಘಟನೆಗಳೂ ನಡೆದಿದೆ. ಭಾರಿ ಮಳೆಯಿಂದ 5 ಜಿಲ್ಲೆಗಳಿಗೆ ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇದೀಗ ಚಿಕ್ಕಮಗಳೂರು ಜಿಲ್ಲೆಯ ಸುರಿಯುತ್ತಿರುವ ಭಾರಿ ಮಳೆಯಿಂದ ನಾಳೆ (ಆಗಸ್ಟ್ 18) ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ.
ಒಂದೆಡೆ ಕಾಫಿನಾಡನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಹಲವೆಡೆ ಗುಡ್ಡ ಕುಸಿತ ಸಂಭವಿಸಿದೆ. ಇದರ ಜೊತಗೆ ಹವಾಮಾನ ಇಲಾಖೆ ನಾಳೆ ರೆಡ್ ಅಲರ್ಟ್ ಘೋಷಿಸಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕಳಸ ,ಮೂಡಿಗೆರೆ, ಶೃಂಗೇರಿ ,ಕೊಪ್ಪ, ಎನ್ ಪುರ ತಾಲೂಕು, ಚಿಕ್ಕಮಗಳೂರು ತಾಲೂಕಿನ ಜಾಗರ,ಖಾಂಡ್ಯ,ಆಲ್ದೂರು, ವಸ್ತಾರೆ, ಆವತಿ ಹೋಬಳಿಗಳಿಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ನೀಡಿದ್ದಾರೆ.
ಪ್ರಸ್ತುತ ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ, ಮತ್ತು ನರಸಿಂಹರಾಜಪುರ ತಾಲ್ಲೂಕುಗಳಲ್ಲಿ ತೀವ್ರವಾಗಿ ಮಳೆಯಾಗುತ್ತಿದೆ. ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮವಾಗಿ ದಿನಾಂಕ ಆಗಸ್ಟ್ 18 ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿ ಶಿಶುಪಾಲನಾ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.ವಿಪತ್ತು ನಿರ್ವಹಣಾ ಕಾಯ್ದೆ ಕಲಂ 26, 30 ಹಾಗೂ 34ರ ಅಧಿಕಾರದಡಿ ರಜೆ ಘೋಷಿಸಲಾಗಿದೆ.
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಹಲೆವೆಡೆ ಅವಾಂತರಗಳು ಸೃಷ್ಟಿಯಾಗಿದೆ. ಶೃಂಗೇರಿಯಲ್ಲಿ ಭಾರಿ ಮಳೆಯಿಂದ ಕಾರುಗಳು ಜಲಾವೃತಗೊಂಡಿದೆ.ಶೃಂಗೇರಿ ದೇಗುಲದ ಪಾರ್ಕಿಂಗ್ ಇರುವ ಗಾಂಧಿ ಮೈದಾನ ಸಂಪೂರ್ಣ ಜಲಾವೃತಗೊಂಡಿದೆ. ತುಂಗಾ ನದಿ ಅಬ್ಬರಕ್ಕೆ ತಗ್ಗು ಪ್ರದೇಶದ ಹಲವು ಗ್ರಾಮಗಳ ಗದ್ದೆ ತೋಟಗಳಿಗೆ ನೀರು ನುಗ್ಗಿದೆ.
ಭಾರಿ ಮಳೆಯಾಗುತ್ತಿರುವ ಕಾರಣ ಹಲವು ಜೆಲ್ಲಿಗಳಲ್ಲಿ ಮುನ್ನಚ್ಚೆರಿಕಾ ಕ್ರಮ ಜರುಗಿಸಲಾಗಿದೆ. ಇತ್ತ ಭಾರತೀಯ ಹವಾಮಾನ ಇಲಾಖೆ ರಾಜ್ಯದ ಐದು ಜಿಲ್ಲಗಳಿಗೆ ನಾಳೆ (ಆ.18) ರೆಡ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉತ್ತರ ಕರ್ನಾಟಕ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಿದೆ. ಇದೇ ವೇಳೆ ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿ ಮುಂಜಾಗ್ರತೆ ವಹಿಸುವಂತೆ ಸೂಚಿಸಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಕಲಬುರಗಿ, ವಿಜಯಪುರ, ಬೀದರ್, ರಾಯಚೂರು, ಯಾದಗಿರಿ, ಬಾಗಲಕೋಟೆ, ಬಳ್ಳಾರಿ, ಕೊಪ್ಪಳ, ಧಾರವಾಡ, ದಾವಣೆಗೆರೆ, ವಿಜಯನಗರ, ತುಮೂಕುರ, ಕೋಲಾರ, ಚಿತ್ರದುರ್ಗ, ರಾಮನಗರ, ಮಂಡ್ಯ, ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ