ಬೆಂಗ್ಳೂರು ಸೇರಿ ರಾಜ್ಯದ ಕೆಲವೆಡೆ ಮುಂದಿನ 3 ಗಂಟೆಗಳ ಕಾಲ ಭಾರೀ ಮಳೆ..!

By Girish GoudarFirst Published Jun 4, 2023, 8:38 AM IST
Highlights

ರಾಜ್ಯದ ಕೆಲವೆಡೆ ಮುಂದಿನ 3 ಗಂಟೆಗಳ ಕಾಲ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ 

ಬೆಂಗಳೂರು(ಜೂ.04):  ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೆಡೆ ಮುಂದಿನ 3 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ರಾಜ್ಯದ ಕೆಲವೆಡೆ ಮುಂದಿನ 3 ಗಂಟೆಗಳ ಕಾಲ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ದಕ್ಷಿಣ ಕನ್ನಡ, ರಾಯಚೂರು ಸೇರಿದಂತೆ ಕೆಲವು ಕಡೆ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ.  

ಈ ಬಾರಿ ಮಳೆ ವಿಳಂಬ: ನಾಡಿದ್ದು ಮುಂಗಾರು ಕೇರಳ ತೀರ ತಲುಪುವ ಸಾಧ್ಯತೆ

ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆಯಾವುಗವ ಹಿನ್ನಲೆಯಲ್ಲಿ ಎಚ್ಚರ ವಹಿಸುವಂತೆ ಹವಾಮಾನ ಇಲಾಖೆ ಮನವಿ ಮಾಡಿದೆ. ಭಾರೀ ಮಳೆಯಾಗುವ ಹಿನ್ನಲೆಯಲ್ಲಿ ವಿದ್ಯುತ್ ವ್ಯತ್ಯಯ, ಟ್ರಾಫಿಕ್ ಜಾಮ್‌, ಮರದ ಕೊಂಬೆಗಳು ನೆಲಕ್ಕುರುಳುವ ಸಾಧ್ಯತೆ ಇದೆ.  

click me!