
ಬೆಂಗಳೂರು : ನೆರೆಯ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಭೀಮಾ ತೀರದಲ್ಲಿ ಭೀಕರ ಪ್ರವಾಹದ ಪರಿಸ್ಥಿತಿ ಉಂಟಾಗಿದ್ದು, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ತತ್ತರಗೊಂಡಿವೆ.
ಮಹಾರಾಷ್ಟ್ರದ ಉಜನಿ, ವೀರ ಭಟ್ಕರ್, ಸೀನಾ ಹಾಗೂ ಭೋರಿ ಜಲಾಶಯಗಳಿಂದ ಭೀಮಾ ನದಿಗೆ 2.90 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನಲ್ಲಿ ಭೀಮಾ ಉಪನದಿ ಡೋಣಿ ನದಿ ಉಕ್ಕಿ ಹರಿಯುತ್ತಿದ್ದು, ತಾಳಿಕೋಟೆ-ವಿಜಯಪುರ ರಾಜ್ಯ ಹೆದ್ದಾರಿ ಸಂಪರ್ಕದ ಸೇತುವೆ ಜಲಾವೃತಗೊಂಡಿದೆ. ಇಬ್ಬರು ಈ ಸೇತುವೆ ದಾಟುವ ಸಮಯದಲ್ಲಿ ಬುಧವಾರ ಬೈಕ್ ಸಮೇತವಾಗಿ ಕೊಚ್ಚಿಕೊಂಡು ಹೋಗಿದ್ದು, ಆ ಪೈಕಿ ಒಬ್ಬ ಈಜಿ ದಡ ಸೇರಿದ್ದಾನೆ. ಇನ್ನೊಬ್ಬ ಬೈಕ್ ಸವಾರ ಸಂತೋಷ ಹಡಪದ (32) ಎಂಬುವರು ಕೊಚ್ಚಿಕೊಂಡು ಹೋಗಿದ್ದಾರೆ.
ಕಲಬುರಗಿ ಜಿಲ್ಲೆಯ 94 ಹಳ್ಳಿಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, 50ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಜನರ ಸುರಕ್ಷತೆಗಾಗಿ 100 ಕಾಳಜಿ ಕೇಂದ್ರ, 40 ಗೋಶಾಲೆ ತೆರೆಯಲಾಗಿದೆ. ಮಳೆ, ಪ್ರವಾಹಕ್ಕೆ ಭೀಮಾ ತೀರದ ಜಿಲ್ಲೆಗಳ ವ್ಯಾಪ್ತಿಯಲ್ಲಿ 2.10 ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಬೆಳೆದ ಬೆಳೆ ಹಾನಿಯಾಗಿದೆ.
ನೆರೆಯಿಂದಾಗಿ ಕರ್ನಾಟಕ - ಮಹಾರಾಷ್ಟ್ರ ರಾಷ್ಟ್ರೀಯ ಹೆದ್ದಾರಿ ನಡುವಿನ ಸಂಪರ್ಕ ಕಡಿತ ಗೊಂಡಿದೆ. 40 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ವಿಜಯಪುರ-ಸೋಲಾಪೂರ ರಾಷ್ಟ್ರೀಯ ಹೆದ್ದಾರಿ ಕೂಡ ಬಂದ್ ಆಗಿದೆ.
ನೆರೆಯಿಂದಾಗಿ ಚೆನ್ನೈ-ಮುಂಬೈ, ಬೆಂಗಳೂರು-ಮುಂಬೈ ಉದ್ಯಾನ ಎಕ್ಸ್‌ಪ್ರೆಸ್, ಬೆಂಗಳೂರು-ದೆಹಲಿ ಕರ್ನಾಟಕ ಎಕ್ಸ್‌ಪ್ರೆಸ್ ಸೇರಿ ಹಲವು ರೈಲುಗಳ ಓಡಾಟದಲ್ಲಿ ವ್ಯತ್ಯಯ ಉಂಟಾಗಿದೆ. ಕಲಬುರಗಿ-ಕೊಲ್ಹಾಪುರ, ಕೊಲ್ಹಾಪುರ ಎಕ್ಸ್‌ಪ್ರೆಸ್, ಕಲಬುರಗಿ -ಬೀದರ್ ಪ್ಯಾಸೆಂಜರ್ ಡೆಮೋ ಸೇರಿ ಹಲವು ರೈಲುಗಳ ಸಂಚಾರವನ್ನು ರದ್ದುಪಡಿಸಲಾಗಿದೆ. ಇದರಿಂದಾಗಿ ರೈಲು ಪ್ರಯಾಣಿಕರು
ನೆರೆಯ ಮಹಾ ರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಭೀಮಾ ತೀರದಲ್ಲಿ ಭೀಕರ ಪ್ರವಾಹದ ಪರಿಸ್ಥಿತಿ ಪರದಾಡುವಂತಾಗಿದೆ
ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ತತ್ತರ
ಮಹಾರಾಷ್ಟ್ರದ ಉಜನಿ, ವೀರ ಭಟ್ಕರ್, ಸೀನಾ ಹಾಗೂ ಭೋರಿ ಜಲಾಶಯಗಳಿಂದ ಭೀಮಾ ನದಿಗೆ 2.90 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ
ಕಲಬುರಗಿ ಜಿಲ್ಲೆಯ 94 ಹಳ್ಳಿಗಳಲ್ಲಿ ರೆಡ್ ಅಲರ್ಟ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ