ರಾಜ್ಯದಲ್ಲಿ ಮುಂಗಾರು ಮಳೆ ಚುರುಕು: ಮುಂದಿನ ಮೂರ್ನಾಲ್ಕು ದಿನ ಭಾರಿ ಮಳೆ

By Kannadaprabha NewsFirst Published Jun 13, 2021, 7:32 AM IST
Highlights

* ರಾಜ್ಯದ 7ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಉತ್ತಮ ಮಳೆ
* ಅರಬ್ಬಿ ಸಮುದ್ರದಲ್ಲಿ ಹೆಚ್ಚಾದ ಅಲೆಗಳ ಅಬ್ಬರ
* ಜೂ. 1ರಿಂದ ಮೀನುಗಾರಿಕೆ ಸಂಪೂರ್ಣ ಬಂದ್‌ 

ಬೆಂಗಳೂರು(ಜೂ.13): ಉತ್ತರಕನ್ನಡ, ಚಿಕ್ಕಮಗಳೂರು, ಧಾರವಾಡ, ಕೊಡಗು, ಮಂಗಳೂರು ಸೇರಿದಂತೆ ರಾಜ್ಯದ 7ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶನಿವಾರ ಉತ್ತಮ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ವಿವಿಧೆಡೆ ಭಾರಿ ಮಳೆಯಾಗಿದೆ. 

ಕರಾವಳಿ ತಾಲೂಕಿನಲ್ಲಿ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು, ಅರಬ್ಬಿ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದೆ. ಜೂ. 1ರಿಂದ ಮೀನುಗಾರಿಕೆ ಸಂಪೂರ್ಣ ಬಂದ್‌ ಆಗಿರುವುದರಿಂದ ಯಾಂತ್ರೀಕೃತ ಯಾವುದೇ ಬೋಟ್‌ಗಳು ಕಡಲಿಗೆ ಇಳಿದಿಲ್ಲ. ಧಾರವಾಡ, ಹಾವೇರಿ ಜಿಲ್ಲೆಯಲ್ಲೂ ಉತ್ತಮ ಮಳೆಯಾಗಿದ್ದು, ಮಳೆಗಾಲದ ವಾತಾವರಣ ನಿರ್ಮಾಣವಾಗಿದ್ದು ರೈತರು ಖುಷಿಯಾಗಿದ್ದಾರೆ. ಧಾರವಾಡ, ಹಾವೇರಿ ಜಿಲ್ಲೆಯಲ್ಲೂ ಸಾಧಾರಣ ಮಳೆಯಾಗಿದೆ.

ನೆರೆ ಪರಿಸ್ಥಿತಿ ಎದುರಿಸಲು ರಾಜ್ಯ ಸಿದ್ಧ : ಪಾಠ ಕಲಿತ ಸರ್ಕಾರ

ದಕ್ಷಿಣಕನ್ನಡ, ಉಡುಪಿ, ಕೊಡುಗು, ಜಿಲ್ಲೆಗಖಲ್ಲಿ ಮುಂಗಾರು ಮಳೆ ಚುರುಕಾಗಿದೆ. ಪ್ರಕಾರ ಕರಾವಳಿಯಾದ್ಯಂತ ಇನ್ನೂ ಮೂರು ಅಥವಾ ನಾಲ್ಕು ದಿನಗಳ ವರೆಗೆ ಭಾರಿ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.
ಚಿಕ್ಕಮಗಳೂರು ಜಿಲ್ಲಾದ್ಯಂತ ಮುಂಗಾರು ಮಳೆ ಚುರುಕುಗೊಂಡಿತ್ತು. ಜಿಲ್ಲೆಯ ಮಲೆನಾಡು ಸೇರಿದಂತೆ ಬಯಲುಸೀಮೆಯಲ್ಲೂ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇದ್ದು, ಆಗಾಗ ತುಂತುರು ಮಳೆ ಬರುತ್ತಲೇ ಇತ್ತು.
 

click me!